ಪುನೀತ್ ರಾಜಕುಮಾರ್ ಎಂದಿಗೂ ಎಂದೆಂದಿಗೂ ನಮ್ಮ ಮನದಲ್ಲಿಯೇ ಇರುತ್ತಾರೆ ಎಂದು ಹೇಳಬಹುದು. ಅವರು ಮಾಡಿರುವ ಸಮಾಜಮುಖಿ ಕೆಲಸಗಳು ಮತ್ತು ಅವರ ಸ್ವಭಾವ ಅದೆಷ್ಟೋ ಜನರ ಜೀವನವನ್ನ ಬದಲಾಯಿಸಿದೆ ಎಂದು ಹೇಳಬಹುದು. ಇಂದು ಇಂತಹ ಒಬ್ಬ ದೇವರ ಪುತ್ರ ನಮ್ಮಜೊತೆ ಇಲ್ಲ ಅನ್ನುವುದು ಬಹಳ ನೋವಿನ ಸಂಗತಿ ಎಂದು ಹೇಳಬಹುದು. ದೇವರು ರಾಜ್ ಕುಟುಂಬಕ್ಕೆ ಮತ್ತೆ ತುಂಬಲಾರದ ನಷ್ಟವನ್ನ ತಂದ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ನಟ ಪುನೀತ್ ರಾಜಕುಮಾರ್ ಅವರು ನಮ್ಮನ್ನ ಅಗಲಿ ಮೂರೂ ವಾರಗಳು ಕಳೆದಿದೆ, ಆದರೆ ಅವರ ಪ್ರತಿಯೊಂದು ನಗುಮುಖ ನಮ್ಮ ಮನದಲ್ಲಿ ಶಾಶ್ವತವಾಗಿ ಉಳಿದುಕೊಂಡಿದೆ ಎಂದು ಹೇಳಬಹುದು.
ಅದೆಷ್ಟೋ ಅನಾಥ ಆಶ್ರಮಗಳು, ಗೋಶಾಲೆಗಳು, ವೃದ್ಧಾಶ್ರಮಗಳು ಮತ್ತು ಅದೆಷ್ಟೋ ಮಕ್ಕಳಿಗೆ ವಿಧ್ಯಾಭ್ಯಾಸವನ್ನ ಕೊಡುತ್ತಿದ್ದ ನಟ ಪುನೀತ್ ರಾಜಕುಮಾರ್ ಅವರ ಜೀವನದಲ್ಲಿ ಆ ದೇವರು ಆಟವಾಡಿದ ಎಂದು ಹೇಳಬಹುದು. ಇನ್ನು ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಪುನೀತ್ ಅಗಲಿದ ದಿನದಿಂದ ಮೌನಕ್ಕೆ ಶರಣಾಗಿದ್ದು ಇಂದು ಮೌನ ಮುರಿದಿದ್ದಾರೆ ಎಂದು ಹೇಳಬಹುದು. ಹೌದು ಪತ್ರದ ಮೂಲಕ ತಮ್ಮ ಮನಸ್ಸಿನ ಭಾವನೆಯನ್ನ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಹಂಚಿಕೊಂಡಿದ್ದಾರೆ ಮತ್ತು ರಾಘವೇಂದ್ರ ರಾಜಕುಮಾರ್ ಅವರು ಅದನ್ನ ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹಾಗಾದರೆ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಬರೆದ ಪತ್ರದಲ್ಲಿ ಏನಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದಾಗಿನಿಂದಲೂ ಮೌನಕ್ಕೆ ಶರಣಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ, ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ.
ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಚಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ ಅವರ ವಿದಾಯ ತಂದಿತ್ತ ದು:ಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ, ಆದರೂ ಇಂತಹ ಸಂದರ್ಭದಲ್ಲಿ ಎಲ್ಲಿಯೂ ಸಂಯಮ ಕಳೆದುಕೊಳ್ಳದೇ, ಅಹಿತಕರ ಘಟನೆಗಳು ನಡೆಯದಂತೆ ಅತ್ಯಂತ ಗೌರವಯುತವಾಗಿ ಪುನೀತ್ ರಾಜ್ ಕುಮಾರ್ ಬೀಳ್ಗೋಡುಗೆ ನೀಡುವಲ್ಲಿ ಸಹಕರಿಸಿದ ನಾಡಿನ ಎಲ್ಲ ಅಭಿಮಾನಿ ದೇವರುಗಳು ಹಾಗೂ ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಧನ್ಯವಾದಗಳು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ. ಸ್ನೇಹಿತರೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಈ ನೋವನ್ನ ತಡೆದುಕೊಳ್ಳುವ ಶಕ್ತಿ ಆ ದೇವರು ಕೊಡಲಿ ಎಂದು ನಾವು ನೀವು ದೇವರಲ್ಲಿ ಪ್ರಾರ್ಥನೆಯನ್ನ ಮಾಡೋಣ.