Pension Scheme: ಕೇಂದ್ರದಿಂದ ಇನ್ನೊಂದು ಪಿಂಚಣಿ ಯೋಜನೆ, ಗಂಡ ಹೆಂಡತಿಗೆ ಪ್ರತಿ ತಿಂಗಳು 10 ಸಾವಿರ ರೂ ಸಿಗಲಿದೆ

ಕೇಂದ್ರದ ಈ ಪಿಂಚಣಿ ಯೋಜನೆಯಲ್ಲಿ ಗಂಡ ಹೆಂಡತಿಗೆ ಪ್ರತಿ ತಿಂಗಳು ಸಿಗಲಿದೆ 10000 ರೂ

Atal Pension Scheme Investment Profit: ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ವಿವಿಧ ರೀತಿಯ ಹೂಡಿಕೆಯ ಯೋಜನೆಯನ್ನು ಪರಿಚಯಿಸುತ್ತಿವೆ. ಜನರು ತಮ್ಮ ಉಳಿತಾಯದ ಹಣವನ್ನು ಹೂಡಿಕೆಯ ಯೋಜನೆಯಲ್ಲಿ ಠೇವಣಿ ಇಡುವುದರಿಂದ ಹೆಚ್ಚಿನ ಆದಾಯವನ್ನು ಗಳಿಸುತ್ತಿದ್ದಾರೆ ಎನ್ನಬಹುದು.

ಇನ್ನು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಪಿಂಚಣಿ ಯೋಜನೆಯನ್ನು ಪರಿಚಯಿಸಿದೆ. ಅದರಲ್ಲಿ Atal Pension Scheme ಕೂಡ ಒಂದಾಗಿದೆ. ಈ ಯೋಜನೆಯಡಿ ದಂಪತಿಗಳು ಜೊತೆಯಾಗಿ ಹೂಡಿಕೆ ಮಾಡುವ ಮೂಲಕ ಆದಾಯವನ್ನು ಗಳಿಸಲು ಸರ್ಕಾರ ಅವಕಾಶವನ್ನು ಮಾಡಿಕೊಟ್ಟಿದೆ. ನಾವೀಗ ಈ ಲೇಖನದಲ್ಲಿ ಕೇಂದ್ರದ ಈ ಯೋಜನೆಯ ಬಗ್ಗೆ ಮಾಹಿತಿ ತಿಳಿಯೋಣ.

Atal Pension Scheme Investment Profit
Image Credit: Sarkari Yojnaa

ಕೇಂದ್ರದಿಂದ ಇನ್ನೊಂದು ಪಿಂಚಣಿ ಯೋಜನೆ
ಕೇಂದ್ರ ಸರ್ಕಾರ ವಿಶೇಷವಾಗಿ ದಂಪತಿಗಳಿಗಾಗಿ ಬೆಸ್ಟ್ Pension Scheme ಅನ್ನು ಪರಿಚಯಿಸಿದೆ. ಮೋದಿ ಸರ್ಕಾರ 2015 ರಲ್ಲಿ ಅಟಲ್ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಲಾಯಿತು. ಈ ಯೋಜನೆಯು ನಿವೃತ್ತಿಯ ನಂತರ ಪಿಂಚಣಿ ಪಡೆಯಲು ಬೆಸ್ಟ್ ಎನ್ನಬಹುದು.

ಅತಿ ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ ಪಡೆಯುವ ಯೋಜನೆ ಇದಾಗಿದೆ. ಈ ಯೋಜನೆಯಲ್ಲಿ ಹೂಡಿಕೆದಾರರು 60 ವರ್ಷ ವಯಸ್ಸಿನವರಾದಾಗ ಪ್ರತಿ ತಿಂಗಳು 1,000 ರೂ. ನಿಂದ 5,000 ರೂ. ವರೆಗೆ ಪಿಂಚಣಿ ಪಡೆಯಬಹುದು. ಅಟಲ್ ಪಿಂಚಣಿ ಯೋಜನೆಯ ಅಡಿಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸಿಕ ಪಿಂಚಣಿ ಲಭ್ಯವಾಗಲಿದೆ. ನೀವು ಈ ಯೋಜನೆಗಳಲ್ಲಿ ಎಷ್ಟು ಬೇಗ ಹೂಡಿಕೆ ಮಾಡುತ್ತಿರೋ ಅಷ್ಟು ಹೆಚ್ಚು ಹಣವನ್ನು ಪಡೆಯುವ ಅವಕಾಶ ಇರುತ್ತದೆ.

Atal Pension Scheme
Image Credit: Zeebiz

ಗಂಡ ಹೆಂಡತಿಗೆ ಪ್ರತಿ ತಿಂಗಳು 10 ಸಾವಿರ ರೂ ಸಿಗಲಿದೆ
ಅಟಲ್ ಪಿಂಚಣಿ ಯೋಜನೆಯಲ್ಲಿ ನೀವು ಪ್ರತಿ ತಿಂಗಳು 210 ರೂಪಾಯಿಗಳನ್ನು ಹೂಡಿಕೆ ಮಾಡಿದರೆ, ನೀವು ನಿವೃತ್ತಿಯ ನಂತರ ಪ್ರತಿ ತಿಂಗಳು 5 ಸಾವಿರ ರೂಪಾಯಿ ಪಿಂಚಣಿ ಪಡೆಯಬಹುದು. ಗಂಡ ಮತ್ತು ಹೆಂಡತಿ ಇಬ್ಬರು ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ 10,000 ರೂ. ಪಿಂಚಣಿ ಪಡೆಯಲು ಸಾಧ್ಯವಾಗುತ್ತದೆ. ಇನ್ನು APY ಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು 1.5 ಲಕ್ಷದವರೆಗೆ ತೆರಿಗೆ ಉಳಿಸಬಹುದು.

Join Nadunudi News WhatsApp Group

ಅಟಲ್ ಪಿಂಚಣಿ ಯೋಜನೆಯ ಹೂಡಿಕೆಯ ನಿಯಮಗಳೇನು…?
•ಈ ಯೋಜನೆಗಳಲ್ಲಿ 210 ರೂ. ಗಿಂತ ಕಡಿಮೆ ಹೂಡಿಕೆ ಮಾಡಬಹುದು.

•ನಿಮ್ಮ ಹೂಡಿಕೆಗೆ ಅನುಗುಣವಾಗಿ ನೀವು ಪ್ರತಿ ತಿಂಗಳು ಪಡೆಯುವ ಪಿಂಚಣಿಯ ಹಣ ನಿರ್ಧಾರವಾಗುತ್ತದೆ.

•ಇನ್ನು 18 ವರ್ಷದಿಂದ 40 ವರ್ಷದೊಳಗಿನ ಯಾವುದೇ ವ್ಯಕ್ತಿ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು.

•ಕನಿಷ್ಠ 20 ವರ್ಷಗಳವರೆಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು.

Atal Pension Scheme Investment Details
Image Credit: News 18

Join Nadunudi News WhatsApp Group