Ayodhya Travel: ಅಯೋಧ್ಯಾ ರಾಮನ ದರ್ಶನ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್, ಸಬ್ಸಿಡಿ ಘೋಷಣೆ ಸಾಧ್ಯತೆ

ಅಯೋದ್ಯೆಗೆ ಭೇಟಿ ನೀಡುವ ಭಕ್ತರಿಗೆ ಗುಡ್ ನ್ಯೂಸ್ ನೀಡಿದ ಕಾಂಗ್ರೆಸ್ ಸರ್ಕಾರ

Ayodhya Travel Subsidy: ಉತ್ತರ ಪ್ರದೇಶದಲ್ಲಿ ಭವ್ಯವಾದ ಅಯೋದ್ಯೆಯಲ್ಲಿ ಶ್ರೀರಾಮ ನೆಲಸಿದ್ದಾನೆ. ಜನವರಿ 22 ರಂದು ರಾಮ ಲಲ್ಲಾ (Ram Lalla) ಪ್ರಾಣಪ್ರತಿಷ್ಠಾಪನೆಯನ್ನು ಮಾಡಲಾಗಿದೆ. ಅಯೋದ್ಯೆಗೆ ಲಕ್ಷಾಂತರೂ ಭಕ್ತರು ನಿತ್ಯ ಪ್ರಯಾಣ ಮಾಡುತ್ತಿದ್ದಾರೆ.

ಲಕ್ಷಾಂತರ ಭಕತರು ಅಯೋದ್ಯೆಗೆ ಭೇಟಿ ನೀಡವು ಯೋಜನೆಯನ್ನು ಹಾಕಿಕೊಂಡಿದ್ದಾರೆ. ಇನ್ನು ಉತ್ತರಪ್ರದೇಶದಲ್ಲಿರುವ ಅಯೋದ್ಯೆಗೆ ಭೇಟಿ ನೀಡಲು ಹೆಚ್ಚಿನ ಹಣ ಬೇಕಾಗುತ್ತದೆ. ಸದ್ಯ ಕರ್ನಾಟಕ ಸರ್ಕಾರ ಇದೀಗ ಅಯೋದ್ಯೆಗೆ ಹೋಗಲು ಒಂದೊಳ್ಳೆ ಅವಕಾಶವನ್ನು ಮಾಡಿಕೊಟ್ಟಿದೆ. ರಾಜ್ಯದ ಜನತೆಗೆ ಅಯೋದ್ಯೆಗೆ ಭೇಟಿ ನೀಡಬೇಕೆಂದಿದ್ದರೆ ಈ ಮಾಹಿತಿಯ ಬಗ್ಗೆ ತಿಳಿದುಕೊಳ್ಳಿ.

Ayodhya Travel
Image Credit: Oneindia

ಅಯೋದ್ಯೆಗೆ ಹೋಗಬೇಕೆಂದಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅಯೋದ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆಯ ವೇಳೆ ಅಸಮಾಧಾನ ತೋರಿತ್ತು. ಈ ಕಾರಣಕ್ಕೆ ಕೆಲವರು ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಸರ್ಕಾರವೇನು ಹೇಳಿದ್ದರು. ಆದರೆ ಸದ್ಯ ಕಾಂಗ್ರೆಸ್ ಸರ್ಕಾರ ಅಯೋದ್ಯೆಗೆ ಭೇಟಿ ನೀಡುವ ಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಮುಂಬರುವ ಲೋಕಸಭಾ ಚುನಾವಣೆಯ ಕಾರಣ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಅಯೋದ್ಯೆಗೆ ರಿಯಾಯಿತಿ ದರದಲ್ಲಿ ಪ್ರಯಾಣಕ್ಕೆ ಅವಕಾಶ
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಯೋದ್ಯೆಗೆ ಭೇಟಿ ನೀಡುವ ಭಕ್ತರಿಗೆ ರಿಯಾಯಿತಿ ದರದಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಿದೆ ಎನ್ನುವ ಬಗ್ಗೆ ವರದಿಯಾಗಿದೆ. ಭಕ್ತರನ್ನು ಅಯೋಧ್ಯೆಗೆ ಕಳುಹಿಸಲು ರಾಜ್ಯ ಸರ್ಕಾರ ಸಬ್ಸಿಡಿ ನೀಡಲು ಹೊರಟಿದೆ ಎನ್ನಲಾಗಿದೆ.

CM Siddaramaiah Latest News Update
Image Credit: Times Now

ಈ ಬಾರಿಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ರಾಜ್ಯ ಮುಜರಾಯಿ ಇಲಾಖೆಯು ಈಗಾಗಲೇ ಕಾಶಿ ಮತ್ತು ದಕ್ಷಿಣ ಭಾರತದ ತಮಿಳುನಾಡಿನ ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ಸಬ್ಸಿಡಿ ನೀಡುತ್ತಿದೆ. ಹಾಗಾಗಿ ಉತ್ತರ ಭಾರತ ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಅಯೋಧ್ಯೆಗೆ ತೆರಳುವವರಿಗೆ ಸಬ್ಸಿಡಿ ನೀಡಲು ತೀರ್ಮಾನಿಸಲಾಗುವುದು ಎನ್ನಲಾಗಿದೆ. ಸದ್ಯದಲ್ಲೇ ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ.

Join Nadunudi News WhatsApp Group

Join Nadunudi News WhatsApp Group