Ayushman Bharat: ದೇಶದ ಎಲ್ಲಾ ಆಸ್ಪತ್ರೆಗಳಲ್ಲಿ ಇನ್ನುಮುಂದೆ ಉಚಿತ ಚಿಕಿತ್ಸೆ, BPL ಕಾರ್ಡ್ ಇದ್ದವರಿಗೆ ಸಿದ್ದರಾಮಯ್ಯ ಗುಡ್ ನ್ಯೂಸ್.

ರಾಜ್ಯದ ALP ಹಾಗೂ BPL ಕುಟುಂಬಗಳಿಗೆ ಮತ್ತೊಂದು ಸಿಹಿ ಸುದ್ದಿ, ರಾಜ್ಯದ ಜನತೆಗೆ ಆಯುಷ್ಮಾನ್ ಕಾರ್ಡ್ ವಿತರಣೆ.

Ayushman Card Distribution For APL And BPL Card Holders: ಸರ್ಕಾರವು ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಗುರಿಯನ್ನು ಹೊಂದಿದೆ. ದೇಶದ ಜನರು Ayushman Card ಅನ್ನು ಮಾಡಿಸಿಕೊಳ್ಳುವ ಮೂಲಕ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿತ್ತು. ಈ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್ ಹೊರ ಬಿದ್ದಿದೆ.

ayushman card for ration card holders
Image Credit: Original Source

ರಾಜ್ಯದ ಜನತೆಗೆ ಉಚಿತ ಚಿಕೆತ್ಸೆ ಲಭ್ಯ
ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವ ಫಲಾನುಭವಿಗಳು ವಾರ್ಷಿಕ ಕುಟುಂಬಕ್ಕೆ ತಲಾ 5,00,000 ರೂ. ವರೆಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆಯಬಹುದು. ಹಾಗೆಯೆ ಎಪಿಎಲ್ ಕಾರ್ಡ್ ದಾರರು ಅಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರು ಪಾವತಿ ಆಧಾರದ ಮೇಲೆ ಸರ್ಕಾರೀ ಪ್ಯಾಕೇಜ್ ದರದ ಶೇ. 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಪ್ರತಿ ಕುಟುಂಬಕ್ಕೆ 1,50,000 ರೂ. ವರೆಗೆ ಪಡೆಯಬಹುದಾಗಿದೆ. ಸದ್ಯ ಈ ಉಚಿತ ಚಿಕಿತ್ಸೆಗೆ ಸಂಬಂಧಿಸಿದೆ ರಾಜ್ಯ ಸರ್ಕಾರ ರಾಜ್ಯದ ALP ಹಾಗೂ BPL ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದೆ.

ರಾಜ್ಯದ ALP ಹಾಗೂ BPL ಕುಟುಂಬಗಳಿಗೆ ಮತ್ತೊಂದು ಸಿಹಿ ಸುದ್ದಿ
ಇದೀಗ ರಾಜ್ಯದಲ್ಲಿ ಆಯುಷ್ಮನ್ ಭಾರತ್ -ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಕಾರ್ಡ್ ವಿತರಸಿಸಲು ಸುತ್ತೋಲೆ ಹೊರಡಿಸಲಾಗಿದೆ. ಈ ಮೂಲಕ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದೆ. ರಾಜ್ಯದ ಪ್ರತಿ ಬಡ ಜನರಿಗೆ ಆರೋಗ್ಯ ಯೋಜನೆಯ ಲಾಭ ದೊರೆಯಬೇಕೆನ್ನುದು ಸರ್ಕಾರದ ಉದ್ದೇಶವಾಗಿದೆ. ಹೀಗಾಗಿ ರಾಜ್ಯದ ಪ್ರತಿ ಮೂಲೆ ಮೂಲೆಯಲ್ಲಿರುವ ಜನರಿಗೆ ಆರೋಗ್ಯ ಸವಲತ್ತನ್ನು ನೀಡುವ ಉದ್ದೇಶದಿಂದ ಆಯುಷ್ಮಾನ್ ಕಾರ್ಡ್ ವಿತರಣೆಗೆ ಮುಖ್ಯಮಂತ್ರಿ Siddaramaiah ಅವರು ಚಾಲನೆ ನೀಡಿದ್ದಾರೆ.

ayushman bharat scheme benefits
Image Credit: Original Source

ರಾಜ್ಯದ ಜನತೆಗೆ ಆಯುಷ್ಮಾನ್ ಕಾರ್ಡ್ ವಿತರಣೆ
ಆಯುಷ್ಮಾನ್ ಭಾರತ್ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ರಾಜ್ಯದಲ್ಲಿ 5.69 ಕೋಟಿ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗುವುದು. ಈವರೆಗೆ ಕೇವಲ 1.54 ಕೋಟಿ ಕಾರ್ಡ್ ವಿತರಿಸಲಾಗಿದ್ದು, ಉಳಿದ 4.15 ಕೋಟಿ ಜನರಿಗೆ ಶೀಘ್ರ ಕಾರ್ಡ್ ನೀಡುವ ಉದ್ದೇಶದಿಂದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಆಯುಷ್ಮಾನ್ ಭಾರತ್ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಮಾಡಿ ಎಲ್ಲರಿಗೂ ಸಾಫ್ಟ್ ಕಾಪಿ ನೀಡುವಂತೆ ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಆಯುಷ್ಮಾನ್ ಭಾರತ್-ಮುಖ್ಯಮಂತ್ರಿ ಆರೋಗ್ಯ ಕಾರ್ಡ್ ಅನ್ನು ಎಲ್ಲಾ ಗ್ರಾಮೀಣ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೀಡಲು ಕ್ರಮಕೈಗೊಳ್ಳಲು ಆದೇಶಿಸಲಾಗಿದೆ. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಕಾರ್ಡ್ ವಿತರಿಸಲು ವ್ಯವಸ್ಥೆ ಮಾಡಬೇಕು. ಈಗಿರುವ ವ್ಯವಸ್ಥೆಯ ಮೂಲಕ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಕಾರ್ಡ್ ನೋಂದಣಿ ಸಾಧ್ಯವಿಲ್ಲ. ಆದ್ದರಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಸದ್ಯದಲ್ಲೆ ರಾಜ್ಯದ ಜನತೆಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಲಾಭ ದೊರೆಯಲಿದೆ.

Join Nadunudi News WhatsApp Group

Join Nadunudi News WhatsApp Group