AB-PMJAY: ಮನೆಯಲ್ಲಿ ವಯಸ್ಸಾದ ವೃದ್ಧರಿದ್ದರೆ ಗುಡ್ ನ್ಯೂಸ್, ರಾಷ್ಟ್ರಪತಿಯಿಂದ ಮಹತ್ವದ ಘೋಷಣೆ.

ಮನೆಯಲ್ಲಿ ವಯಸ್ಸಾದ ವೃದ್ಧರಿದ್ದರೆ ಗುಡ್ ನ್ಯೂಸ್

Ayushman Bharat-Pradhan Mantri Jan Arogya Yojana: ಕೇಂದ್ರ ಸರ್ಕಾರ ದೇಶದ ಜನತೆಯ ಆರೋಗ್ಯ ರಕ್ಷಣೆಗಾಗಿ Ayushman Bharat-Pradhan Mantri Jan Arogya Yojana (AB-PMJAY) ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಅಪ್ಡೇಟ್ ನೀಡಿದೆ. ಮಧ್ಯಮ ವರ್ಗದ ಜನರಿಗೆ ತಮ್ಮ ಆರೋಗ್ಯ ಸಮಸ್ಯೆಯಲ್ಲಿ ಪರಿಹಾರವನ್ನು ಕಂಡುಕೊಳ್ಳಲು ಸರ್ಕರ ಈ ಯೋಜನೆಯನ್ನು ಪರಿಚಯಿಸಿದೆ.

ಈ ಯೋಜನೆಯಡಿ ದೇಶದ ಅರ್ಹ ಫಲಾನುಭವಿಗಳು ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯ ಬಗ್ಗೆ ಸಾಕಷ್ಟು ಜನರಿಗೆ ತಿಳಿದಿರಬಹುದು. ಸದ್ಯ ಈ ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಹತ್ವವಾದ ಮಾಹಿತಿ ನೀಡಿದ್ದಾರೆ.

Draupadi Murmu About AB-PMJAY
Image Credit: ABP Live

ಮನೆಯಲ್ಲಿ ವಯಸ್ಸಾದ ವೃದ್ಧರಿದ್ದರೆ ಗುಡ್ ನ್ಯೂಸ್
ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಮಾತನಾಡಿ, ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ. ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಅಡಿಯಲ್ಲಿ 55 ಕೋಟಿ ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ದೇಶದಲ್ಲಿ 25 ಸಾವಿರ ಜನೌಷಧಿ ಕೇಂದ್ರ ತೆರೆಯುವ ಕೆಲಸವೂ ವೇಗವಾಗಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತೊಂದು ನಿರ್ಧಾರ ಕೈಗೊಳ್ಳಲಿದೆ. ಈಗ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಸಹ ವ್ಯಾಪ್ತಿಗೆ ಒಳಪಡುತ್ತಾರೆ ಮತ್ತು ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆಯುತ್ತಾರೆ ಎಂದು ರಾಷ್ಟ್ರಪತಿ ಹೇಳಿದ್ದಾರೆ. ಇನ್ನುಮುಂದೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

Ayushman Bharat-Pradhan Mantri Jan Arogya Yojana
Image Credit: ABP Live

ರಾಷ್ಟ್ರಪತಿಯಿಂದ ಮಹತ್ವದ ಘೋಷಣೆ
ಇನ್ನು AB-PMJAY ವಿಶ್ವದಲ್ಲೇ ಅತಿ ದೊಡ್ಡ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆಯಾಗಿದೆ. ಈ ಯೋಜನೆಯು ದ್ವಿತೀಯ ಮತ್ತು ತೃತೀಯ ಆರೈಕೆಗಾಗಿ ಆಸ್ಪತ್ರೆಗೆ ದಾಖಲಾಗಲು 12 ಕೋಟಿ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂಪಾಯಿಗಳ ಆರೋಗ್ಯ ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ನಿರ್ವಹಿಸುತ್ತದೆ. ದೇಶದ ಆಯ್ದ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಕಾರ್ಡ್ ಅನ್ನು ಹೊಂದಿದವರು ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಈ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

Join Nadunudi News WhatsApp Group

AB-PMJAY 2024
Image Credit: ibc24

Join Nadunudi News WhatsApp Group