Ayushman Bharat: ಆಯುಷ್ಮಾನ್ ಕಾರ್ಡ್ ಇದ್ದವರಿಗೆ ಹೊಸ ರೂಲ್ಸ್, ಈ ಕೆಲಸ ಮಾಡದಿದ್ದರೆ ಸಿಗಲ್ಲ ಉಚಿತ ಚಿಕಿತ್ಸೆ

ಉಚಿತ ಚಿಕಿತ್ಸೆ ಪಡೆಯಲು ಈ ಕೆಲಸ ಮಾಡುವುದು ಅಗತ್ಯ

Ayushman Bharat Yojana Latest Update: ಪ್ರಸ್ತುತ ದೇಶದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ಸಾಕಷ್ಟು ಬಡ ಕುಟುಂಬಗಳಿವೆ. ಬಡ ಜನರು ತಮ್ಮ ಗಂಭೀರ ಖಾಯಿಲೆಗಳಿಗೆ ಸೂಕ್ತ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗದೆ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಇಂತವರಿಗಾಗಿಯೇ ಕೇಂದ್ರ ಸರ್ಕಾರ ಉಚಿತ ಆರೋಗ್ಯ ಯೋಜನೆಯನ್ನು ಪರಿಚಯಿಸಿದೆ.

ಕೇಂದ್ರ ಸರ್ಕಾರ 2018 ರಲ್ಲಿ ದೇಶದ ಬಡ ಜನರಿಗೆ ಉಚಿತ ಚಿಕಿತ್ಸೆಯನ್ನು ನೀಡುವ ಉದ್ದೇಶದಿಂದ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಬಗ್ಗೆ ಈಗಾಗಲೇ ಸಾಕಷ್ಟು ಅಪ್ಡೇಟ್ ಹೊರಬಿದ್ದಿದೆ. ಸದ್ಯ ಕೇಂದ್ರದಿಂದ ಈ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಆಯುಷ್ಮನ್ ಭಾರತ್ ಯೋಜನೆಯ ಫಲಾನುಭವಿಗಳು ಉಚಿತ ಚಿಕೆತ್ಸೆ ಪಡೆಯಬೇಕಿದ್ದರೆ ಈ ಕೆಲಸಗಳನ್ನು ಮಾಡುವುದು ಅಗತ್ಯವಾಗಿದೆ.

Ayushman Bharat Yojana
Image Credit: PM Modi Yojana

ಆಯುಷ್ಮನ್ ಭಾರತ್ ಯೋಜನೆಯ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್
Ayushman Bharat ಯೋಜನೆಯ ಮೂಲಕ BPL Ration Card ಹೊಂದಿರುವವರು ಮತ್ತು ರಾಷ್ಟ್ರೀಯ ಭೀಮಾ ಯೋಜನೆಯಲ್ಲಿ ನೋಂದಾಯಿತರಾಗಿರುವ ಫಲಾನುಭವಿಗಳು ವಾರ್ಷಿಕ ಕುಟುಂಬಕ್ಕೆ ತಲಾ 5,00,000 ರೂ. ವರೆಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆಯಬಹುದು.

APL ಕಾರ್ಡ್ ದಾರರು ಅಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರು ಪಾವತಿ ಆಧಾರದ ಮೇಲೆ ಸರ್ಕಾರೀ ಪ್ಯಾಕೇಜ್ ದರದ ಶೇ. 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಪ್ರತಿ ಕುಟುಂಬಕ್ಕೆ 1,50,000 ರೂ. ವರೆಗೆ ಪಡೆಯಬಹುದಾಗಿದೆ. ಭೂಮಿಯನ್ನು ಹೊಂದಿಲ್ಲದವರು, ಮನೆ ಇಲ್ಲದವರು, ದಿನಗೂಲಿ ಕಾರ್ಮಿಕರು, ಪರಿಶಿಷ್ಟ ಜಾತಿ ಅಥವಾ ಪಂಗಡದಿಂದ ಬಂದವರು ಆಯುಷ್ಮಾನ್ ಯೋಜನೆಯಡಿ ಪ್ರಯೋಜನವನ್ನು ಪಡೆಯಬಹುದು. ಆದರೆ ನೀವು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ ಪಡೆಯಲು ಈ ಕೆಲಸ ಮಾಡುವುದು ಅಗತ್ಯವಾಗಿದೆ.

Ayushman Bharat Yojana Latest Update
Image Credit: BBC

ಉಚಿತ ಚಿಕಿತ್ಸೆ ಪಡೆಯಲು ಈ ಕೆಲಸ ಮಾಡುವುದು ಅಗತ್ಯ
ಸದ್ಯ ಕೇಂದ್ರದಿಂದ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಅಂದರೆ CGHS ಫಲಾನುಭವಿ ಐಡಿಯನ್ನು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗೆ ಲಿಂಕ್ ಮಾಡುವ ಅಗತ್ಯವಿದೆ.

Join Nadunudi News WhatsApp Group

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಫಲಾನುಭವಿಗಳು ತಮ್ಮ CGHS ಫಲಾನುಭವಿ ಐಡಿಯನ್ನು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗೆ 30 ದಿನಗಳೊಳಗೆ ಲಿಂಕ್ ಮಾಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರ ಆರೋಗ್ಯ ಯೋಜನೆಯ ಮೂಲಕ ಉಚಿತ ಚಿಕಿತ್ಸೆ ಪಡೆಯಲು ಇಂದೇ ನಿಮ್ಮ CGHS ಫಲಾನುಭವಿ ಐಡಿಯನ್ನು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗೆ ಲಿಂಕ್ ಮಾಡಿಕೊಳ್ಳಿ.

PM Ayushman Bharat Yojana
Image Credit: Ahmednagarlive24

Join Nadunudi News WhatsApp Group