Ayushman Bharat Card Free Treatment Diseases List: ಆಯುಷ್ಮಾನ್ ಭಾರತ್ ಯೋಜನೆ ಭಾರತದ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಜಾರಿಗೆ ತಂದ ಮಹತ್ವದ ಯೋಜನೆಯಾಗಿದೆ. ಬಡವರು ಮತ್ತು ಮಧ್ಯಮ ವರ್ಗದ ಜನರು ಈ ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಹಲವು ರೋಗಗಳಿಗೆ ಸರ್ಕಾರೀ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು. ಸಾಕಷ್ಟು ಜನರಿಗೆ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವ ಯಾವ ರೋಗಗಳಿಗೆ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು ಅನ್ನುವುದರ ಬಗ್ಗೆ ಸರಿಯಾದ ಮಾಹಿತಿ ತಿಳಿದಿಲ್ಲ. ಹಾಗಾದರೆ ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಯಾವ ಯಾವ ರೋಗಗಳಿಗೆ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಆಯುಷ್ಮಾನ್ ಭಾರತ್ ಯೋಜನೆ
ಭಾರತದ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಬಡ ಕುಟುಂಬದವರು ವರ್ಷಕ್ಕೆ 5 ಲಕ್ಷ ರೂಪಾಯಿ ತನಕ ಆರೋಗ್ಯ ವಿಮೆ ಪಡೆದುಕೊಳ್ಳುತ್ತಾರೆ. ಕೆಲವು ಗಂಭೀರ ಖಾಯಿಲೆಗಳಿಗೆ ಈ ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು. ಈಗ ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು 70 ವರ್ಷ ಮೇಲ್ಪಟ್ಟವರು ಕೂಡ ಪಡೆದುಕೊಳ್ಳಬಹುದಾಗಿದೆ. ಭಾರತದ ಸರ್ಕಾರದ ಈ ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಲಕ್ಷಾಂತರ ಜನರು ಆರ್ಥಿಕ ಹೊರೆಯಿಂದ ಮುಕ್ತರಾಗಿದ್ದಾರೆ.
ಯಾವ ಯಾವ ರೋಗಕ್ಕೆ ಚಿಕಿತ್ಸೆ ಸಿಗುತ್ತೆ?
ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಸುಮಾರು 1900 ರೋಗಗಳಿಗೆ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು. ಮುಖ್ಯವಾಗಿ ಹೃದಯ ಶಸ್ತ್ರಚಿಕೆತ್ಸೆ ಕೂಡ ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಮಾಡಿಸಿಕೊಳ್ಳಬಹುದು. ಕ್ಯಾನ್ಸರ್ ಚಿಕಿತ್ಸೆ, ಮೂತ್ರಪಿಂಡ ಸಂಬಂಧಿತ ಡಯಾಲಿಸಿಸ್, ಜಾಯಿಂಟ್ ರಿಪ್ಲೇಸ್‌ಮೆಂಟ್, ನವಜಾತ ಶಿಶು ಚಿಕಿತ್ಸೆಗಳು ಈ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಬರುತ್ತದೆ. ಇನ್ನು ಕೆಲವು ಮಾನಸಿಕ ರೋಗ, ಕಣ್ಣಿನ ಶಸ್ತ್ರಚಿಕಿತ್ಸೆ, ಚರ್ಮರೋಗ, ತುರ್ತು ಅಪಘಾತ ಚಿಕಿತ್ಸೆ ಮತ್ತು ಸೋಂಕು ರೋಗಗಳಿಗೂ ಕೂಡ ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು. 2025 ರ ವರ್ಷದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ ಮತ್ತು ಕೆಲವು ಹೊಸ ರೋಗಗಳನ್ನು ಸೇರ್ಪಡೆ ಮಾಡಲಾಗಿದೆ. OPD ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಲಭ್ಯ ಇರುವುದಿಲ್ಲ.
ಆಯುಷ್ಮಾನ್ ಯೋಜನೆಯ ಲಾಭ ಪಡೆಯುವುದು ಹೇಗೆ?
BPL ಕಾರ್ಡ್ ಮತ್ತು ಅಂತ್ಯೋದಯ ಕಾರ್ಡ್ ಇದ್ದವರು ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳಬಹುದು. ಅಧಿಕೃತ ವೆಬ್ಸೈಟ್ ಅಥವಾ ಹತ್ತಿರದ ಸೇವಾಸಿಂಧು ಕೇಂದ್ರದಲ್ಲಿ ಸುಲಭವಾಗಿ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳಬಹುದು. ಚಿಕಿತ್ಸೆ ಪಡೆದುಕೊಳ್ಳುವ ಮುನ್ನ ಆಸ್ಪತ್ರೆಯ ಆಯುಷ್ಮಾನ್ ಕೌಂಟರ್ ನಲ್ಲಿ ನೀವು ಪಡೆಯುವ ಚಿಕಿತ್ಸೆಗೆ ಆಯುಷ್ಮಾನ್ ಯೋಜನೆ ಲಭ್ಯವಿದೆಯಾ ಅಥವಾ ಇಲ್ಲವಾ ಎಂದು ತಿಳಿದುಕೊಳ್ಳಬೇಕು. ಸಂಬಂಧಪಟ್ಟ ವೈದ್ಯರಿಂದ ನೀವು ದೃಡೀಕರಣ ಪಡೆದುಕೊಳ್ಳಬೇಕಾಗುತ್ತದೆ. ಆಯುಷ್ಮಾನ್ ಭಾರತ್ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ಕೂಡ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬಹುದು.
Disclaimer: This information is provided for awareness purposes only. For personalised legal advice, consult a qualified professional and refer to official government notifications.

