Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್

Bag And Uniform For Anganwadi Children’s: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗಾಗಿ ವಿವಿಧ ಸೌಲಭ್ಯವನ್ನು ನೀಡಲು ಮುಂದಾಗುತ್ತಿದೆ. ರಾಜ್ಯ ಸರ್ಕಾರ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಗುರಿಯನ್ನು ಹಾಕಿಕೊಂಡಿದೆ.

ಉತ್ತಮ ಗುಣಮಠದ ಶಿಕ್ಷಣವನ್ನು ನೀಡುವುದರ ಜೊತೆಗೆ ಶಾಲಾ ವಿದ್ಯಾರ್ಥಿಗಳು ಶಾಲೆಗೆ ಬರಲು ಅನುಕೂಲವಾಗುವಂತಹ ಸೌಲಭ್ಯವನ್ನು ನೀಡಲು ಸರ್ಕಾರ ಮುಂದಾಗಿದೆ. ಸದ್ಯ ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಲ್ಲಿ ಅಂಗನವಾಡಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯವನ್ನು ನೀಡಲು ಮುಂದಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

Bag And Uniform For Anganwadi Children's
Image Credit: Wikipedia

ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್
ರಾಜ್ಯ ಸರಕಾರದಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಇದಾದ ಬಳಿಕ ರಾಜ್ಯ ಸರ್ಕಾರದಿಂದ ಶುಭ ಸುದ್ದಿಯಾಗಿ ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ ವಿತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಒಕ್ಕೂಟ (ಎಐಟಿಯುಸಿ) ಬೆಂಗಳೂರಿನ ಗೃಹ ಕಚೇರಿಯಲ್ಲಿ ಸಭೆ ನಡೆಸಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸ್ವೀಕರಿಸಿದರು.

ಶೀಘ್ರದಲ್ಲೇ ಮಕ್ಕಳಿಗೆ ಬ್ಯಾಗ್, ಯುನಿಫಾರ್ಮ್ ವಿತರಣೆ
ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ ನೀಡಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು .ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆಯಾಗದಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಮತ್ತು ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ. ನಿಮ್ಮ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Anganwadi Children's
Image Credit: Careerindia

Join Nadunudi News WhatsApp Group

Join Nadunudi News WhatsApp Group