Bag Less Day: ಇನ್ಮುಂದೆ ಪ್ರತಿ ಶನಿವಾರ ಯಾರೂ ಕೂಡ ಬ್ಯಾಗ್ ತಗೆದುಕೊಂಡು ಹೋಗುವಂತಿಲ್ಲ, ಶಾಲಾ ಮಕ್ಕಳಿಗೆ ಹೊಸ ಯೋಜನೆ.

ಇನ್ಮುಂದೆ ಪ್ರತಿ ಶನಿವಾರ ಮಕ್ಕಳಿಗೆ ಬ್ಯಾಗ್ ರಹಿತ ದಿನ

Bag Less Day For Students: ಸದ್ಯ 2024 ರ ಮೇ ನಿಂದ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ ಶೈಕ್ಷಣಿಕ ವರ್ಷದಿಂದ ಅನೇಕ ಹೊಸ ಹೊಸ ನಿಯಮಗಳ ಜೊತೆಗೆ ವಿದ್ಯಾರ್ಥಿಗಳಿಗೆ ಅನೇಕ ಸೌಲಭ್ಯಗಳು ಕೂಡ ಜಾರಿಯಾಗಲಿದೆ.

2024 -25 ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ರಾಜ್ಯ ಶಿಕ್ಷಣ ಇಲಾಖೆಯಿಂದ ಇದೀಗ ಹೊಸ ಮಾಹಿತಿ ಹೊರ ಬಿದ್ದಿದೆ. ರಾಜ್ಯದ ಶಾಲಾ ಮಕ್ಕಳಿಗೆ ಉತ್ತಮ ರೀತಿಯ ಕಲಿಕೆಯನ್ನು ನೀಡಲು ಹಾಗು ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

Bag Less Day For Students In Karnataka
Image Credit: Ghsallahabad

ಶಾಲಾ ಮಕ್ಕಳಿಗೆ ಹೊಸ ಯೋಜನೆ
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಸಂಭ್ರಮ ಶನಿವಾರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನದ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಪ್ರತಿ ತಿಂಗಳ ಮೂರನೇ ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. ಮಕ್ಕಳಿಗೆ ಬ್ಯಾಗ್ ಹೊರೆಯಾಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಬ್ಯಾಗ್ ರಹಿತ ದಿನಾಚರಣೆಯನ್ನು ಆಚರಿಸಲು ಮಾಹಿತಿ ಹೊರಡಿಸಿದೆ.

ವಿದ್ಯಾರ್ಥಿಗಳು ಅವರ ದೇಹದ ತೂಕದ ಶೇಕಡಾ 10 ರಿಂದ 15 ರಷ್ಟು ತೂಕದ ಶಾಲಾ ಬ್ಯಾಗ್ ಗಳನ್ನೂ ತೆಗೆದುಕೊಂಡು ಹೋಗಬಹುದಾಗಿ ಮೂಲ ತಜ್ಞರು ಶಿಫಾರಸು ಮಾಡಿರುತ್ತಾರೆ. ಈ ಕುರಿತು ಸರ್ಕಾರೀ ಆದೇಶದಲ್ಲಿ ಕ್ರಮವಹಿಸಲು ಸೂಚಿಸಲಾಗಿದೆ.ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸರ್ಕಾರೀ ಅನುದಾನಿತ ಹಾಗು ಅನುದಾನರಹಿತ ಎಲ್ಲಾ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಸೂಚಿಸಿದೆ. ಇದೀಗ ಈ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗೆ ಬ್ಯಾಗ್ ರಹಿತ ದಿನವನ್ನು ಆಚರಿಸಲು ತೀರ್ಮಾನ ಮಾಡಿದೆ.

Bag Less Day In School
Image Credit: Ghsallahabad

ಇನ್ಮುಂದೆ ಪ್ರತಿ ಶನಿವಾರ ಯಾರೂ ಕೂಡ ಬ್ಯಾಗ್ ತಗೆದುಕೊಂಡು ಹೋಗುವಂತಿಲ್ಲ
2024 – 25 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದ್ದು, ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡೈಲ್ ಗಳನ್ನೂ ಹಾಗು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ದಪಡಿಸಲಾಗಿದೆ.

Join Nadunudi News WhatsApp Group

ಸಂಭ್ರಮ ಶನಿವಾರ ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ ಸಿ ಆರ್ ಪಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡುವುದು ಹಾಗೂ ಅಗತ್ಯ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಯಶಸ್ಸಿಗೆ ಪಾಲ್ಗೊಳ್ಳುವಿಕೆಯನ್ನು ಅಪೇಕ್ಷಿಸಲಾಗಿದೆ. ಈ ದಿನದಂದು ವಿದ್ಯಾರ್ಥಿಗಳ ಚಟುವಟಿಕೆ ಮತ್ತು ಶಿಕ್ಷಕರ ಕೈಪಿಡಿಯನ್ನು dsert.karnataka.gov.in ವೆಬ್‌ ಸೈಟ್‌ ನಲ್ಲಿ ಅಪ್‌ ಲೋಡ್ ಮಾಡಲಾಗುತ್ತದೆ. ರಾಜ್ಯದ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನದ ತರಗತಿಗಳು ನಡೆಯುವುದರಿಂದ ಪ್ರತಿ ತಿಂಗಳ ಮೂರನೇ ಶುಕ್ರವಾರವನ್ನು ಬ್ಯಾಗ್ ರಹಿತ ದಿನವನ್ನಾಗಿ ಆಚರಿಸಲು ಸೂಚಿಸಲಾಗಿದೆ.

Bag Less Day For Students
Image Credit: Ghsallahabad

Join Nadunudi News WhatsApp Group