Bhoo Odetana: ಮಹಿಳೆಯರಿಗೆ ಆಸ್ತಿ ಖರೀದಿಸಲು ಸರ್ಕಾರದಿಂದಲೇ ಸಿಗಲಿದೆ 25 ಲಕ್ಷ, ಜಾರಿಗೆ ಬಂತು ಭೂ ಒಡೆತನ ಯೋಜನೆ

ಭೂ ಒಡೆತನ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ 25 ಲಕ್ಷ ಸಾಲ ಸಬ್ಸಿಡಿ.

Bhoo Odetana Scheme: ದೇಶದಲ್ಲಿ ಸಾಕಷ್ಟು ಜನರು ಮನೆ ಇಲ್ಲದೆ ಬೀದಿಗಳಲ್ಲಿ ವಾಸಿಸುತ್ತಿದ್ದಾರೆ. ದೇಶದ ಬಡ ಜನರಿಗಾಗಿ ಸರ್ಕಾರ ವಿವಿಧ ಸೌಲಭ್ಯವನ್ನು ಒದಗಿಸುತ್ತ ಬಂದಿದೆ. ಇನ್ನು ಸಾಕಷ್ಟು ಜನರು ಇನ್ನು ಕೂಡ ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಸ್ವಂತ ಮನೆ ಖರೀದಿಯ ಆಸೆ ಎಲ್ಲರಿಗು ಇದ್ದೆ ಇರುತ್ತದೆ. ಮನೆ ಅಥವಾ ಆಸ್ತಿ ಖರೀದಿಸಲು ಆರ್ಥಿಕ ಸಮಸ್ಯೆ ಎದುರಾಗುವುದು ಸಹಜ. ಸದ್ಯ ಕೇಂದ್ರ ಸರ್ಕಾರ ಭೂಮಿರಹಿತರಿಗೆ ಭೂಮಿ ಖರೀದಿಗೆ ಸಾಲ ನೀಡಲು ಮುಂದಾಗಿದೆ. ಸಾಲದ ಜೊತೆಗೆ ಸಬ್ಸಿಡಿ ಕೂಡ ನೀಡಲಿದೆ. ಇದಕ್ಕಾಗಿ ಸರ್ಕಾರದಿಂದ ಹೊಸ ಯೋಜನೆಯೊಂದು ಅನುಷ್ಠಾನಕ್ಕೆ ಸಜ್ಜಾಗಿದೆ.

Bhoo Odetana Yojana
Image Credit: Infokhabars

ಮಹಿಳೆಯರಿಗಾಗಿ ಭೂ ಒಡೆತನ ಯೋಜನೆ
ಸದ್ಯ ಕೇಂದ್ರದಿಂದ “ಭೂ ಒಡೆತನ” ಯೋಜನೆಗೆ ಚಾಲನೆ ಸಿಗಲಿದೆ. ಮಹಿಳಾ ಕೃಷಿಕರಿಗೆ ಈ ಯೋಜನೆಯಡಿ ಸಬ್ಸಿಡಿ ಜೊತೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಭೂ ರಹಿತ ಮಹಿಳಾ ಕೃಷಿಕರು ತಾವು ವಾಸಿಸುವ ಸ್ಥಳದಿಂದ 10 ಕಿಲೋಮೀಟರ್ ವ್ಯಾಪ್ತಿಯಲ್ಲಿ 2 ಎಕರೆ ಕುಷ್ಕ ಅಥವಾ ಒಂದು ಎಕರೆ ತರಿ ಜಮೀನು ಖರೀದಿಸಲು ಸರ್ಕಾರ ಸಹಾಯಧನ ನೀಡುತ್ತದೆ.

ಈ ಸಹಾಯಧನದ ಮೊತ್ತ 25 ಲಕ್ಷ ಹಾಗೂ 20 ಲಕ್ಷ ರೂ. ಆಗಿದೆ. ಭೂ ಖರೀದಿಗೆ ಮಹಿಳಾ ಕೃಷಿಕರು 50 % ರಷ್ಟು ಪಾವತಿಸಿದರೆ ಇನ್ನು ಉಳಿದ 50 % ರಷ್ಟು ಸರ್ಕಾರ ಸಬ್ಸಿಡಿ ನೀಡುತ್ತದೆ. ಯೋಜನೆಯಡಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 25 ಲಕ್ಷ ರೂಪಾಯಿ ಹಾಗೂ ಇತರೆ ಜಿಲ್ಲೆಗಳಿಗೆ 20 ಲಕ್ಷ ರೂಪಾಯಿ ಸಾಲವನ್ನು ಸರ್ಕಾರ ಮಂಜೂರು ಮಾಡುತ್ತದೆ.

Bhoo Odetana Scheme In Karnataka
Image Credit: Karnataka Times

ಭೂ ಒಡೆತನ ಯೋಜನೆಯ ಲಾಭ ಪಡೆಯಲು ಯಾರು ಅರ್ಹರು..?
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದವರು ಭೂಮಾಲೀಕತ್ವ ಯೋಜನೆ 2023-24 ನೇ ಸಾಲಿನ ಭೂ ಒಡೆತನ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತರೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನಾಂಕವಾಗಿದೆ.

Join Nadunudi News WhatsApp Group

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಹಾಗು ಅರ್ಜಿ ಸಲ್ಲಿಕೆಯ ವಿಧಾನ
ಇನ್ನು https://sevasindhu.karnataka.gov.in/Sevasindhu/Kannada?ReturnUrl=%2F ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಸೂಕ್ತ ದಾಖಲೆಗಳನ್ನು ನೀಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಅರ್ಜಿದಾರರ ಭಾವಚಿತ್ರ, ಕೃಷಿ ಕಾರ್ಮಿಕರ ಧ್ರಡೀಕರಣ ಪ್ರಮಾಣಪತ್ರವನ್ನು ನೀಡುವ ಮೂಲಕ ಯೋಜನೆಗೆ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group