Board Exam Update: 5, 8, ಮತ್ತು 9ನೇ ತರಗತಿಯ ಮಕ್ಕಳಿಗೆ ಗುಡ್ ನ್ಯೂಸ್, ಪರೀಕ್ಷಾ ನಿಯಮದಲ್ಲಿ ದೊಡ್ಡ ಬದಲಾವಣೆ

5, 8, ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷ ಬೋರ್ಡ್ ಪರೀಕ್ಷೆ ಇಲ್ಲ...!

Board Exam Cancelled For 5, 8, And 9th Students: 2024 -25 ಶೈಕ್ಷಣಿಕ ವರ್ಷದಲ್ಲಿ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸುವುದಲ್ಲದೆ ರಾಜ್ಯ ಪಠ್ಯಕ್ರಮ ಹೊಂದಿರುವ ಶಾಲೆಗಳ 5, 8, ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆಗಳನ್ನು ನಡೆಸುವಂತೆ ಆದೇಶ ಹೊರಡಿಸಲಾಗಿತ್ತು.

ಆದರೆ ಇದೀಗ 5, 8, ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮೂಲಕ 5, 8, ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ.

Board Exam Cancelled For 5, 8, And 9th Students
Image Credit: Varthabharati

5, 8, ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷ ಬೋರ್ಡ್ ಪರೀಕ್ಷೆ ಇಲ್ಲ…!
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಸಂಬಂಧ 2024-25ನೇ ಸಾಲಿನಲ್ಲಿ ಎಲ್ಲ ತರಗತಿಗಳಿಗೂ ಮೌಲ್ಯಮಾಪನ ಮುಂದುವರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ. ಈ ವರ್ಷದಲ್ಲಿ 5, 8, ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಇನ್ನು 5, 8, ಮತ್ತು 9ನೇ ತರಗತಿಯ ವಿದ್ಯಾರ್ಥಿಗಳು ಈ ವರ್ಷದಲ್ಲಿ ಬೋರ್ಡ್ ಪರೀಕ್ಷೆಯನ್ನು ಎದುರಿಸಬೇಕಾಗಿಲ್ಲ. ಕೇವಲ ಮೌಲ್ಯಮಾಪನ ಪರೀಕ್ಷೆಯನ್ನು ವಿದ್ಯಾರ್ಥಿಗಳು ಎದುರಿಸಬೇಕಾಗುತ್ತದೆ. 2024-25 ನೇ ಶೈಕ್ಷಣಿಕ ವರ್ಷದಲ್ಲಿ, ಕರ್ನಾಟಕ ರಾಜ್ಯ ಪಠ್ಯಕ್ರಮದ 1 ರಿಂದ 10 ನೇ ತರಗತಿಗಳಿಗೆ 2024-25 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾ ಯೋಜನೆ ಮತ್ತು ಶೈಕ್ಷಣಿಕ ಮಾರ್ಗದರ್ಶಿಯನ್ನು ಉಲ್ಲೇಖಗಳ ಪ್ರಕಾರ ಬಿಡುಗಡೆ ಮಾಡಲಾಗಿದೆ.

Board Exam Cancelled
Image Credit: Deccanherald

ಶಾಲಾ ಮಕ್ಕಳಿಗೆ ಹೊಸ ಯೋಜನೆ
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಸಂಭ್ರಮ ಶನಿವಾರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನದ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಪ್ರತಿ ತಿಂಗಳ ಮೂರನೇ ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. ಮಕ್ಕಳಿಗೆ ಬ್ಯಾಗ್ ಹೊರೆಯಾಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಬ್ಯಾಗ್ ರಹಿತ ದಿನಾಚರಣೆಯನ್ನು ಆಚರಿಸಲು ಮಾಹಿತಿ ಹೊರಡಿಸಿದೆ.

Join Nadunudi News WhatsApp Group

2024 – 25 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದ್ದು, ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡೈಲ್ ಗಳನ್ನೂ ಹಾಗು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ದಪಡಿಸಲಾಗಿದೆ.

5, 8, And 9th standard Board Exams Cancelled
Image Credit: Bangladeshpost

Join Nadunudi News WhatsApp Group