Board Exam: 5, 8, ಮತ್ತು 9 ನೇ ತರಗತಿ ಮಕ್ಕಳಿಗೆ ಬಿಗ್ ಅಪ್ಡೇಟ್, ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

5, 8, ಮತ್ತು 9 ನೇ ತರಗತಿಗಳ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ

Board Exam Latest Update: ಪ್ರಸಕ್ತ 2023 -24 ಶೈಕ್ಷಣಿಕ ಸಾಲಿನಲ್ಲಿ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸುವುದಲ್ಲದೆ ರಾಜ್ಯ ಪಠ್ಯಕ್ರಮ ಹೊಂದಿರುವ ಶಾಲೆಗಳ 5, 8, ಮತ್ತು 9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆಗಳನ್ನು ನಡೆಸುವಂತೆ ಆದೇಶ ಹೊರಡಿಸಲಾಗಿದೆ.

ಅದರಂತೆ ಮಾರ್ಚ್ 11 ರಿಂದ ರಾಜ್ಯ ಪಠ್ಯಕ್ರಮ ಹೊಂದಿರುವ ಶಾಲೆಗಳ 5, 8, ಮತ್ತು 9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಆರಂಭವಾಗಿದೆ. ಈಗಾಗಲೇ ಸೋಮವಾರ ಮತ್ತು ಮಂಗಳವಾರ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ ಪರೀಕ್ಷೆ ನೆರವೇರಿದೆ. ಎರಡು ಪರೀಕ್ಷೆಗಳು ಮುಗಿದ ಬೆನ್ನಲ್ಲೇ ಇದೀಗ 5, 8, ಮತ್ತು 9 ನೇ ತರಗತಿಗಳ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಹೊರಡಿಸಿದೆ.

5, 8, 9 Board Exams Postponed
Image Credit: The Hindu

5, 8, ಮತ್ತು 9 ನೇ ತರಗತಿಗಳ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ
ರಾಜ್ಯದಾದ್ಯಂತ ರಾಜ್ಯ ಪಠ್ಯಕ್ರಮ ಹೊಂದಿರುವ ಶಾಲೆಗಳ 5, 8, ಮತ್ತು 9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯನ್ನು ಮಾರ್ಚ್ 11 ರಿಂದ ನಡೆಸಲಾಗುತ್ತಿದೆ. ವಿದ್ಯರ್ಥಿಗಳು ಪರೀಕ್ಷೆ ಸಿದ್ಧತೆ ನಡೆಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಇಂದು ಬೋರ್ಡ್ ಪರೀಕ್ಷೆಯ ಮೂರನೇ ಪರೀಕ್ಷೆ ನಡೆಯುತ್ತಿದೆ. ಮಂಗಳವಾರ 5, 8, ಮತ್ತು 9 ನೇ ತರಗತಿಗಳ ಮೌಲ್ಯಯಂಕನ ಪರೀಕ್ಷೆ ಯಸಃಸ್ವಿಯಾಗಿದೆ.

ಇದರ ಬೆನ್ನಲ್ಲೇ 5, 8, ಮತ್ತು 9 ನೇ ತರಗತಿಗಳ ಮೌಲ್ಯಯಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತಡೆ ನೀಡಿರುವುದಾಗಿ ಮೂಲಗಳಿಂದ ಮಾಹಿತಿ ಲಭಿಸಿದೆ. ಇನ್ನು 5, 8, ಮತ್ತು 9 ನೇ ತರಗತಿಗಳ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಯನ್ನು ನಡೆಸದಂತೆ ನ್ಯಾಯಾಲಯ ತಡೆ ನೀಡಿದೆ. ಇನ್ನು ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ 5, 8, ಮತ್ತು 9 ನೇ ತರಗತಿಗಳ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಮುಂದೂಡಿರುವುದಾಗಿ ವರದಿಗಳು ತಿಳಿಸಿದೆ.

Board Exam Latest Update
Image Credit: The Hindu

Join Nadunudi News WhatsApp Group

Join Nadunudi News WhatsApp Group