New Ration Card: ಹೊಸ BPL ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿಸುದ್ದಿ, ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್

ಹೊಸ APL -BPL ರೇಷನ್ ಕಾರ್ಡ್ ಅರ್ಜಿ ವಿಲೇವಾರಿ ಆರಂಭ

BPL And APL Ration Card Distribution: ಕಾಂಗ್ರೆಸ್ ಸರ್ಕಾರ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು.

ಸದ್ಯ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳು ಚಾಲನೆಗೊಂಡಿದ್ದು, ಇನ್ನೇನು ಜನವರಿಯಲ್ಲಿ ಐದನೇ ಗ್ಯಾರಂಟಿ ಯೋಜನೆ ಕೊಡ ಅನುಷ್ಠಾನಕ್ಕೆ ಬರಲಿದೆ. ಇನ್ನು ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯಲು Ration Card ಮುಖ್ಯ ದಾಖಲೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಚಾರ.

Ration Card New Updates
Image Credit: Original News

ಹೊಸ ರೇಷನ್ ಕಾರ್ಡ್ ಗಾಗಿ ವೇಟ್ ಮಾಡುತ್ತಿರುವವರಿಗೆ ಗುಡ್ ನ್ಯೂಸ್
ರಾಜ್ಯದಲ್ಲಿ ರೇಷನ್ ಕಾರ್ಡ್ ಗೆ ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ರಾಜ್ಯದ ಜನತೆಗೆ ರೇಷನ್ ಕಾರ್ಡ್ ಮಾಡುಸುವಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು ರಾಜ್ಯ ಸರಕಾರ ನೀಡುವ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಅರ್ಹರ ಕೈ ತಪ್ಪಿಹೋಗಬಾರದು ಎನ್ನುವ ಕಾರಣಕ್ಕೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರ್ಕಾರ ಅನುಮತಿ ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಆಹಾರ ಇಲಾಖೆಯಿಂದ ಹೊಸ ಅಪ್ಡೇಟ್ ಬಂದಿದೆ.

ಹೊಸ APL -BPL ರೇಷನ್ ಕಾರ್ಡ್ ಅರ್ಜಿ ವಿಲೇವಾರಿ ಆರಂಭ
ಈ ಹಿಂದೆ ಆಹಾರ ಇಲಾಖೆ ಹೊಸ APL ಮತ್ತು BPL ಕಾರ್ಡ್ ಅರ್ಜಿ ಸಾಲ್ಕ್ ಹಾಗೂ ತಿದ್ದುಪಡಿಗೆ ಅವಕಾಶವನ್ನು ನೀಡಿದೆ. ಯಾರು ಯಾರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದಾರೋ ಅಂತವರ ಅರ್ಜಿಯನ್ನು ಆಹಾರ ಇಲಾಖೆ ಪರಿಶೀಲನೆ ನಡೆಸುತ್ತಿದೆ. ಯಾರು ಸರ್ಕಾರದ ಉಚಿತ ಪಡಿತರ ವಿತರಣೆಯ ಲಾಭವನ್ನು ಪಡೆಯಲು ಅರ್ಹರಾಗಿರುತ್ತಾರೋ ಅಂತವರ ಅರ್ಜಿಯನ್ನು ಆಹಾರ ಇಲಾಖೆ ಸ್ವೀಕರಿಸಲಿದೆ.

BPL And APL Ration Card Apply
Image Credit: DNA India

ಸದ್ಯದಲ್ಲೇ ಹೊಸ ಪಡಿತರ ಚೀಟಿ ವಿತರಣೆ
ಆಹಾರ ಇಲಾಖೆ ಈಗಾಗಲೇ ಸುಮಾರು 20 ಸಾವಿರ ಪಡಿತರ ಚೀಟಿಯನ್ನು ವಿಲೇವಾರಿ ಮಾಡಿದೆ. ಹೊಸ ಪಡಿತರ ಚೀಟಿಗಾಗಿ ಸುಮಾರು 3 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು ಇಲಾಖೆಯಿಂದ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ವಿಲೇವಾರಿ ಕಾರ್ಯ ಕೂಡ ಆರಂಭಗೊಂಡಿದೆ. ಹೊಸ ರೇಷನ್ ಕಾರ್ಡ್ ಅರ್ಜಿದಾರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸದ್ಯ ಆಹಾರ ಇಲಾಖೆ ಅರ್ಜಿದಾರರ ಅರ್ಜಿಯನ್ನು ವಿಲೇವಾರಿ ಮಾಡುತ್ತಿದೆ ಎನ್ನುವ ಬಗ್ಗೆ ವರದಿಯಾಗಿದೆ. ಸದ್ಯದಲ್ಲೇ ಅರ್ಹ ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿ ಲಭ್ಯವಾಗಲಿದೆ.

Join Nadunudi News WhatsApp Group

Join Nadunudi News WhatsApp Group