Ration Card: BPL ಮತ್ತು ಅಂತ್ಯೋದಯ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್, ಪಡಿತರ ನಿಯಮ ಬದಲಾವಣೆ.

ರಾಜ್ಯದಲ್ಲಿ ಪಡಿತರ ನಿಯಮದಲ್ಲಿ ಮತ್ತೆ ಬದಲಾವಣೆ

Ration Card New Update: ದೇಶದ ಜನತೆಗೆ ಉಚಿತ ಪಡಿತರನ್ನು ನೀಡಲು ಸರ್ಕಾರ BPL Ration Card ಅನ್ನು ನೀಡಿದೆ. ಜನಸಾಮಾನ್ಯರು BPL Card ನ ಮೂಲಕ ಉಚಿತ ಪಡಿತರನ್ನು ಪಡೆಯುತ್ತಿದ್ದಾರೆ. ಕರೋನ ಸಮಯದಲ್ಲಿ ಮೋದಿ ಸರ್ಕಾರ ದೇಶದ ಜನತೆಗಾಗಿ ಉಚಿತ ಪಡಿತರನ್ನು ನೀಡುವ ಯೋಜನೆಯನ್ನು ಪರಿಚಯಿಸಿತ್ತು. ಇನ್ನು ಆಯಾ ರಾಜ್ಯಗಳಲ್ಲಿ ರಾಜ್ಯ ಸರ್ಕಾರ ಉಚಿತ ಪಡಿತರ ಜೊತೆಗೆ ಇನ್ನಿತರ ಸೌಲಭ್ಯವನ್ನು ನೀಡುತ್ತಿದೆ.

ಇನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಲು ಪಡಿತರ ಚೀಟಿ ಮುಖ್ಯವಾಗಿರುತ್ತದೆ. ಈ ಕಾರಣಕ್ಕೆ ಸರ್ಕಾರ ಆಗಾಗ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಹಾಗೂ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವನ್ನು ನೀಡುತ್ತಿರುತ್ತದೆ. ಇದೀಗ ಪಡಿತರ ಚೀಟಿಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ. BPL ,ಅಂತ್ಯೋದಯ ಕಾರ್ಡ್ ಇದ್ದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ ಎನ್ನಬಹುದು.

ration rules changes karnataka
Image Credit: Original Source

BPL ,ಅಂತ್ಯೋದಯ ಕಾರ್ಡ್ ಇರುವವರಿಗೆ ಗುಡ್ ನ್ಯೂಸ್
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯ ಪಡಿತರ ಚೀಟಿದಾರರಿಗೆ ಮೇ ತಿಂಗಳಿಗೆ ಅನ್ವಯವಾಗುವಂತೆ ಪಡಿತರ ಧಾನ್ಯಗಳನ್ನು ವಿತರಿಸಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‌ ಗೆ 35 ಕೆಜಿ ಅಕ್ಕಿ, ಆದ್ಯತಾ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ.

ಎಪಿಎಲ್ ಏಕಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಮತ್ತು ಎರಡು ಮತ್ತು ಅದಕ್ಕಿಂತ ಹೆಚ್ಚು ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ಕೆಜಿಗೆ 15 ರೂ.ಗೆ ವಿತರಿಸಲಾಗುವುದು. ಪಡಿತರ ಚೀಟಿದಾರರಿಗೆ ಸರ್ಕಾರದ ಖಾತ್ರಿ ಯೋಜನೆಯಡಿ 5 ಕೆಜಿ ಅಕ್ಕಿಯನ್ನು ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು ಎಂದು ತಹಶೀಲ್ದಾರ್ ತಿಳಿಸಿದರು. ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಕೂಡ ಯೋಜನೆಯ ಲಾಭವನ್ನು ಶೀಘ್ರದಲ್ಲೇ ಪಡೆಯಲಿದ್ದಾರೆ.

rules of ration food in karnataka
Image Creedit: Original Source

Join Nadunudi News WhatsApp Group

Join Nadunudi News WhatsApp Group