BPL Card: ಹೊಸ BPL ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಬೇಸರದ ಸುದ್ದಿ, ಇನ್ನಷ್ಟು ದಿನ ನೀವು ಕಾಯಬೇಕು.

ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಕುರಿತು ಜನರಿಗೆ ಶಾಕ್ ನೀಡಿದ ಸರ್ಕಾರ.

Ration Card Application: ಜನಸಾಮಾನ್ಯರ ನೆರವಿಗಾಗಿ ಸರ್ಕಾರ ಉಚಿತ ಪಡಿತರನ್ನು (Ration) ನೀಡುತ್ತದೆ. ದೇಶದ ಅದೆಷ್ಟೋ ಬಡ ನಾಗರಿಕರು ಈ ಉಚಿತ ಪಡಿತರ ವಿತರಣೆಯ ಲಾಭವನ್ನು ಪಡೆಯುತ್ತಾರೆ. ಇನ್ನು ಸರ್ಕಾರ ಪಡಿತ ವಿತರಣೆಯಲ್ಲಿ ಇತ್ತೀಚಿಗೆ ಹೆಚ್ಚಿನ ಸೌಲಭ್ಯವನ್ನು ನೀಡುತ್ತಿದೆ. ಹೊಸ ಸೌಲಭ್ಯದ ಜೊತೆಗೆ ವಿವಿಧ ನಿಯಮಗಳನ್ನು ಜಾರಿಗೊಳಿಸುತ್ತಿದೆ.

ಇದೀಗ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು ಪಡಿತರ ವಿತರಣೆಯಲ್ಲಿ ಬಿಪಿಎಲ್ ಕಾರ್ಡ್ (BPL) ಹೊಂದಿರುವವರಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತದೆ. ದೇಶದ ಬಡ ಕುಟುಂಬಗಳಿಗೆ ಮಾತ್ರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಅನ್ನು ವಿತರಿಸಲಾಗುತ್ತದೆ.

ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನ ಮಾಡಿದೆ. ಆದರೆ ಇದರ ಬೆನ್ನಲ್ಲೇ ಜನಸಾಮಾನ್ಯರಿಗೆ ಸರ್ಕಾರ ಶಾಕ್ ನೀಡಿದೆ.

The government has given a shock to the people regarding the ration card application process.
Image Credit: informalnewz

ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭ
ಈ ಹಿಂದೆ ಆಹಾರ ಇಲಾಖೆ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿ ಇದ್ದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಹೊಸತಾಗಿ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ಹಿಂದೆ ಚುನಾವಣೆಯ ಹಿನ್ನಲೆ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯನ್ನು ನಿಲ್ಲಿಸಿತ್ತು. ಆದರೆ ಜೂನ್ 1 ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತೆ ಆರಂಭಗೊಳ್ಳಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಆದರೆ ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಕುರಿತು ಸರ್ಕಾರ ಜನರಿಗೆ ಶಾಕ್ ನೀಡಿದೆ.

The government has given a shock to the people regarding the ration card application process.
Image Credit: odishabytes

ಹೊಸ BPL ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಬೇಸರದ ಸುದ್ದಿ
ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿಲ್ಲ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ಮೊದಲ ವಾರ ಅವಕಾಶ ನೀಡುವುದಾಗಿ ಆಹಾರ ಇಲಾಖೆ ಮಾಹಿತಿ ನೀಡಿದೆ. ಆದರೆ ಈವರೆಗೆ ಆನ್ಲೈನ್ ಪೋರ್ಟಲ್ ಓಪನ್ ಆಗಿಲ್ಲ.

Join Nadunudi News WhatsApp Group

ಸರ್ಕಾರದಿಂದ ಸೂಚನೆ ಬಾರದ ಹಿನ್ನಲೆಯಲ್ಲಿ ಪೋರ್ಟಲ್ ಓಪನ್ ಮಾಡಿಲ್ಲದ ಕಾರಣ ಅರ್ಜಿ ಸಲ್ಲಿಕೆ ಪ್ರಾರಂಭಗೊಂಡಿಲ್ಲ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಲು ಅನರ್ಹರು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುತ್ತಾರೆ ಎನ್ನುವ ಕಾರಣಕ್ಕೆ ವಿಳಂಭ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.

Join Nadunudi News WhatsApp Group