BPL Card: ಇದುವರೆಗೂ BPL ಕಾರ್ಡ್ ಗೆ ಅರ್ಜಿ ಹಾಕಿದವರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ

ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲೇ ಕಾರ್ಡ್ ಗಳನ್ನೂ ವಿತರಣೆ ಮಾಡುದಾಗಿ ಸರ್ಕಾರ ಮಾಹಿತಿ ನೀಡಿದೆ.

BPL Card Distribution: ಜನಸಾಮಾನ್ಯರ ನೆರವಿಗಾಗಿ ಸರ್ಕಾರ ಉಚಿತ ಪಡಿತರನ್ನು (Ration) ನೀಡುತ್ತದೆ. ದೇಶದ ಅದೆಷ್ಟೋ ಬಡ ನಾಗರಿಕರು ಈ ಉಚಿತ ಪಡಿತರ ವಿತರಣೆಯ ಲಾಭವನ್ನು ಪಡೆಯುತ್ತಾರೆ. ಇನ್ನು ಸರ್ಕಾರ ಪಡಿತ ವಿತರಣೆಯಲ್ಲಿ ಇತ್ತೀಚಿಗೆ ಹೆಚ್ಚಿನ ಸೌಲಭ್ಯವನ್ನು ನೀಡುತ್ತಿದೆ. ಹೊಸ ಸೌಲಭ್ಯದ ಜೊತೆಗೆ ವಿವಿಧ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಇನ್ನು ಪಡಿತರ ವಿತರಣೆಯಲ್ಲಿ ಬಿಪಿಎಲ್ ಕಾರ್ಡ್ (BPL) ಹೊಂದಿರುವವರಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತದೆ.

Application for BPL Card
Image Credit: Dnaindia

BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ
ದೇಶದ ಬಡ ಕುಟುಂಬಗಳಿಗೆ ಮಾತ್ರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಅನ್ನು ವಿತರಿಸಲಾಗುತ್ತದೆ. ಅದೇ ರೀತಿಯಲ್ಲಿ ಆರ್ಥಿಕವಾಗಿ ಸಬಲರಾಗಿರುವ ಕುಟುಂಬಕ್ಕೆ APL ಕಾರ್ಡ್ ವಿತರಣೆ ಮಾಡಲಾಗುತ್ತದೆ. ಇನ್ನು ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆಯ ವೇಳೆ BPL ಕಾರ್ಡ್ ಹೊಂದಿರುವವರಿಗೆ ವಿಶೇಷ ಸೌಲಭ್ಯ ನೀಡುವುದಾಗಿ ಘೋಷಣೆ  ಹೊರಡಿಸಿತ್ತು. ಈ ನಿಟ್ಟಿನಲ್ಲಿ ಸಾಕಷ್ಟು ಜನರು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರು. ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ ನೀಡಿದೆ.

BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲೇ ಕಾರ್ಡ್ ಗಳನ್ನೂ ವಿತರಣೆ ಮಾಡಲು ಕ್ರಮ ಕೈಗೊಳ್ಳಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಈ ಮೂಲಕ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ ನೀಡಿದೆ.

Application for BPL Card
Image Credit: Odishatv

ವಿಧಾನಪರಿಷತ್ ನಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ. ಹೆಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ 3 ಲಕ್ಷ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಯಾಗಿದೆ. ಈಗಾಗಲೇ 1 .28 ಕೋಟಿ ಬಿಪಿಎಲ್ ಕಾರ್ಡ್ ಗಳು ಹಂಚಿಕೆಯಾಗಿವೆ.

ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಮಾಡಲಾಗುತ್ತಿದ್ದು, ಪರಿಶೀಲನೆ ನಂತರ ಹಣಕಾಸು ಅನುಮತಿ ಪಡೆದು ಕ್ರಮ ವಹಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group