Ration Card: BPL ರೇಷನ್ ಕಾರ್ಡ್ ಹೊಂದಿರುವ ಇಂತಹ ಜನರಿಗೆ ದಂಡ ವಿಧಿಸಲು ಮುಂದಾದ ಸರ್ಕಾರ, ದಂಡದ ಜೊತೆಗೆ ಜೈಲು.
ಇಂತಹ ಜನರು ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಂಡಿದ್ದರೆ ತಕ್ಷಣ ಹಿಂದಿರುಗಿಸುವಂತೆ ಆಹಾರ ಇಲಾಖೆ ಸೂಚನೆ ನೀಡಿದೆ.
Ration Card Latest Update: ರಾಜ್ಯ ಸರ್ಕಾರ (State Government) ಬಿಪಿಎಲ್ (BPL) ಪಡಿತರ ಚೀಟಿದಾರರಿಗೆ ವಿಶೇಷ ಯೋಜನೆಗಳನ್ನು ನೀಡುವುದಾಗಿ ಘೋಷಣೆ ಹೊರಡಿಸುತ್ತಿದೆ. ಈ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡ್ ಪಡೆಯುವ ಹಂಬಲ ಜನರಲ್ಲಿ ಹೆಚ್ಚುತ್ತಿದೆ. ಯೋಜನೆಗಳ ಲಾಭ ಪಡೆಯುವ ಸಲುವಾಗಿ ಲಕ್ಷಾಂತರ ಜನರು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಗೃಹ ಲಕ್ಷ್ಮಿ ಅನ್ನಭಾಗ್ಯ ಯೋಜನೆಗಳಿಗೆ ಬಿಪಿಎಲ್ ರೇಷನ್ ಕಾರ್ಡ್ ಮುಖ್ಯವಾಗಿದೆ.
ಈ ಕಾರಣಕ್ಕೆ ಬಿಪಿಎಲ್ ರೇಷನ್ ಕಾರ್ಡ್ ಮೇಲಿನ ಬೇಡಿಕೆ ಹೆಚ್ಚುತ್ತಿದೆ. ಬಡತನ ರೇಖೆಗಿಂತ ಕೆಳಗಿನವರಿಗೆ ಸರ್ಕಾರ ಉಚಿತ ಪಡಿತರ ಸೌಲಭ್ಯವನ್ನು ನೀಡುತ್ತಿದೆ. ಈಗಾಗಲೇ ಸರ್ಕಾರ ಅನರ್ಹರು ಬಿಪಿಎಲ್ ಪಡಿತರ ಪ್ರಯೋಜನವನ್ನು ಪಡೆಯಬಾರದು ಎನ್ನುವ ಕಾರಣಕ್ಕೆ ಮಹತ್ವದ ನಿರ್ಧಾರವನ್ನು ಕೈಗೊಳ್ಳುತ್ತಿದೆ.
ಅನರ್ಹರು ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವಂತಿಲ್ಲ
ಇನ್ನು ವಿಧಾನಸಭ ಚುನಾವಣೆಯ ಕಾರಣ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಸ್ಥಗಿತಗೊಂಡಿತ್ತು. ಕಳೆದ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ನೀಡಿತ್ತು. ಇನ್ನು ಲಕ್ಷಾಂತರ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು ಒನ್, ಸೈಬರ್ ಸೆಂಟರ್ ಅಥವಾ ಆನ್ಲೈನ್ ನ ಮೂಲಕ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿದೆ. ಆದರೆ ಸರ್ಕಾರದ ಈ ಸೌಲಭ್ಯವನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಪಡಿತರ ಚೀಟಿಯ ವಂಚನೆಯನ್ನು ತಡೆಗಟ್ಟಲು ಸರಕಾರ ಹೊಸ ನಿಯಮವನ್ನು ಹೊರಡಿಸಿದೆ.
ಇಂತವರು ಬಿಪಿಎಲ್ ಕಾರ್ಡ್ ಪಡೆದರೆ ಕಟ್ಟಬೇಕು ಹೆಚ್ಚಿನ ದಂಡ
ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಅನರ್ಹರು ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಂಡಿದ್ದರೆ ತಕ್ಷಣ ಹಿಂದಿರುಗಿಸುವಂತೆ ಆಹಾರ ಇಲಾಖೆ ಸೂಚನೆ ನೀಡಿದೆ.
ಸರ್ಕಾರೀ ನೌಕರರು, ತೆರಿಗೆ ಪಾವತಿದಾರರು ಸೇರಿದಂತೆ ಇನ್ನಿತರ ಶ್ರೀಮಂತ ಕುಟುಂಬದವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆಹಾರ ಇಲಾಖೆ ಪರಿಶೀಲನೆ ನಡೆಸಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆವರಿಗೆ ಹೆಚ್ಚಿನ ದಂಡ ವಿಧಿಸಲಿದೆ. ದಂಡದ ಜೊತೆಗೆ ಜೈಲು ಶಿಕ್ಷೆ ವಿಧಿಸುವ ಬಗ್ಗೆ ಸರ್ಕಾರ ಚಿಂತನೆಯನ್ನ ಮಾಡುತ್ತಿದೆ.
ಸ್ವಂತ ಕಾರ್ ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು
ಸ್ವಂತ ಕಾರ್ ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದಾಗುವ ಬಗ್ಗೆ ಆಹಾರ ಘೋಷಣೆ ಹೊರಡಿಸಿದೆ. ವೈಟ್ ಬೋರ್ಡ್ ಕಾರು ಇರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಮತ್ತು ಎಲ್ಲೊ ಬೋರ್ಡ್ ಕಾರ್ ಇರುವವರ ಬಿಪಿಎಲ್ ಕಾರ್ಡ್ ರದ್ದನ್ನು ಹಿಂಪಡೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ.