Ration Card: ಇಂದಿನಿಂದ ಇಂತಹ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು, ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ.

ಇಂತಹ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ತೀರ್ಮಾನವನ್ನ ಮಾಡಿದೆ.

Ration Card Cancellation: ಇನ್ನು ರಾಜ್ಯದಲ್ಲಿ ಗೃಹ ಲಕ್ಷ್ಮಿ ಅನ್ನಭಾಗ್ಯ ಯೋಜನೆಗಳಿಗೆ ಬಿಪಿಎಲ್ ರೇಷನ್ ಕಾರ್ಡ್ ಮುಖ್ಯವಾಗಿದೆ. ಯೋಜನೆಗಳ ಲಾಭ ಪಡೆಯುವ ಸಲುವಾಗಿ ಲಕ್ಷಾಂತರ ಜನರು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುತ್ತಿದ್ದಾರೆ.

ರಾಜ್ಯ ಸರ್ಕಾರ (State Government) ಬಿಪಿಎಲ್ (BPL) ಪಡಿತರ ಚೀಟಿದಾರರಿಗೆ ವಿಶೇಷ ಯೋಜನೆಗಳನ್ನು ನೀಡುವ ಘೋಷಣೆ ಹೊರಡಿಸುತ್ತಿದ್ದಂತೆ ಬಿಪಿಎಲ್ ಕಾರ್ಡ್ ಪಡೆಯುವ ಹಂಬಲ ಜನರಲ್ಲಿ ಹೆಚ್ಚುತ್ತಿದೆ. ಈ ಕಾರಣಕ್ಕೆ ಬಿಪಿಎಲ್ ರೇಷನ್ ಕಾರ್ಡ್ ಮೇಲಿನ ಬೇಡಿಕೆ ಹೆಚ್ಚುತ್ತಿದೆ.

Ration card of white board car owners will be cancelled.
Image Credit: daijiworld

ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವವರ ಗಮನಕ್ಕೆ
ಬಡತನ ರೇಖೆಗಿಂತ ಕೆಳಗಿನವರಿಗೆ ಸರ್ಕಾರ ಉಚಿತ ಪಡಿತರ ಸೌಲಭ್ಯವನ್ನು ನೀಡುತ್ತಿದೆ. ಈಗಾಗಲೇ ಸರ್ಕಾರ ಅನರ್ಹರು ಬಿಪಿಎಲ್ ಪಡಿತರ ಪ್ರಯೋಜನವನ್ನು ಪಡೆಯಬಾರದು ಎನ್ನುವ ಕಾರಣಕ್ಕೆ ಮಹತ್ವದ ನಿರ್ಧಾರವನ್ನು ಕೈಗೊಳ್ಳುತ್ತಿದೆ. ಸರ್ಕಾರೀ ನೌಕರರು, ತೆರಿಗೆ ಪಾವತಿದಾರರು ಸೇರಿದಂತೆ ಇನ್ನಿತರ ಶ್ರೀಮಂತ ಕುಟುಂಬದವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆಹಾರ ಇಲಾಖೆ ಪರಿಶೀಲನೆ ನಡೆಸಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆವರಿಗೆ ಹೆಚ್ಚಿನ ದಂಡ ವಿಧಿಸಲಿದೆ.

ಬಿಪಿಎಲ್ ಪಡಿತರ ಚೀಟಿದಾರರಿಗೆ ಹೊಸ ನಿಯಮ
ಇನ್ನು ವಿಧಾನಸಭ ಚುನಾವಣೆಯ ಕಾರಣ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಸ್ಥಗಿತಗೊಂಡಿತ್ತು. ಕಳೆದ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ನೀಡಿತ್ತು. ಇನ್ನು ಲಕ್ಷಾಂತರ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಆದರೆ ಸರ್ಕಾರದ ಈ ಸೌಲಭ್ಯವನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಪಡಿತರ ಚೀಟಿಯ ವಂಚನೆಯನ್ನು ತಡೆಗಟ್ಟಲು ಸರಕಾರ ಹೊಸ ನಿಯಮವನ್ನು ಹೊರಡಿಸಿದೆ. ಇಂತಹ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ.

Join Nadunudi News WhatsApp Group

Now the state government has decided to cancel the BPL ration card of those doing business or business.
Image Credit: livemint

ಇಂದಿನಿಂದ ಇಂತಹ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು
ಇದೀಗ ಬಿಪಿಎಲ್ ಕಾರ್ಡ್ ಹೊಂದಿರುವ ಅನೇಕ ಕುಟುಂಬಗಳಿಗೆ ಸರ್ಕಾರ ಶಾಕ್ ನೀಡಿದೆ. ಸ್ವಂತ ಕಾರ್ ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದಾಗುವ ಬಗ್ಗೆ ಆದೇಶ ಹೊರಡಿಸಲಾಗಿದೆ. ಸ್ವಂತ ಕಾರ್ ಹೊಂದಿದವರಿಗೆ ಹೊಸ ಬಿಪಿಎಲ್ ಕಾರ್ಡ್ ನೀಡದಿರುವುದು ಹಾಗೂ ಪ್ರಸ್ತುತ ಹೊಂದಿರುವ ಬಿಪಿಎಲ್ ಕಾರ್ಡ್ ಅನ್ನು ರದ್ದು ಮಾಡುವ ಬಗ್ಗೆ ಘೋಷಣೆ ಹೊರಡಿಸಲಾಗಿದೆ.

ವೈಟ್ ಬೋರ್ಡ್ ಕಾರು ಇರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಮತ್ತು ಎಲ್ಲೊ ಬೋರ್ಡ್ ಕಾರ್ ಇರುವವರ ಬಿಪಿಎಲ್ ಕಾರ್ಡ್ ರದ್ದನ್ನು ಹಿಂಪಡೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ. ವೈಟ್ ಬೋರ್ಡ್ ಕಾರು ಇರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದತಿಯ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಸದ್ಯದಲ್ಲೇ ಈ ಕುಟುಂಬಗಳ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.

Join Nadunudi News WhatsApp Group