Ration Card: ಹೊಸ ರೇಷನ್ ಕಾರ್ಡ್ ನಿಯಮದಲ್ಲಿ ದೊಡ್ಡ ಬದಲಾವಣೆ, ಇನ್ನುಮುಂದೆ ಇಂತವರಿಗೆ ಮಾತ್ರ BPL ಕಾರ್ಡ್.

ಇನ್ನುಮುಂದೆ ಇಂತವರಿಗೆ ಮಾತ್ರ BPL ಕಾರ್ಡ್

Ration Card New Update: ದೇಶದ ಜನತೆಗೆ ಉಚಿತ ಪಡಿತರನ್ನು ನೀಡಲು ಸರ್ಕಾರ BPL Ration Card ಅನ್ನು ನೀಡಿದೆ. ಜನಸಾಮಾನ್ಯರು BPL Card ನ ಮೂಲಕ ಉಚಿತ ಪಡಿತರನ್ನು ಪಡೆಯುತ್ತಿದ್ದಾರೆ. ಕರೋನ ಸಮಯದಲ್ಲಿ ಮೋದಿ ಸರ್ಕಾರ ದೇಶದ ಜನತೆಗಾಗಿ ಉಚಿತ ಪಡಿತರನ್ನು ನೀಡುವ ಯೋಜನೆಯನ್ನು ಪರಿಚಯಿಸಿತ್ತು. ಇನ್ನು ಆಯಾ ರಾಜ್ಯಗಳಲ್ಲಿ ರಾಜ್ಯ ಸರ್ಕಾರ ಉಚಿತ ಪಡಿತರ ಜೊತೆಗೆ ಇನ್ನಿತರ ಸೌಲಭ್ಯವನ್ನು ನೀಡುತ್ತಿದೆ.

ಇನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಲು ಪಡಿತರ ಚೀಟಿ ಮುಖ್ಯವಾಗಿರುತ್ತದೆ. ಈ ಕಾರಣಕ್ಕೆ ಸರ್ಕಾರ ಆಗಾಗ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಹಾಗೂ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವನ್ನು ನೀಡುತ್ತಿರುತ್ತದೆ. ಸದ್ಯ ಪಡಿತರ ಚೀಟಿಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ.

Ration Card New Update
Image Credit: India Todayne

ಹೊಸ ರೇಷನ್ ಕಾರ್ಡ್ ನಿಯಮದಲ್ಲಿ ದೊಡ್ಡ ಬದಲಾವಣೆ
ರಾಜ್ಯದಾದ್ಯಂತ ಹೊಸ ರೇಷನ್‌ ಕಾರ್ಡ್‌ ಗೆ 2.95 ಲಕ್ಷ ಜನರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಸಲ್ಲಿಕೆಯನ್ನು ಆಹಾರ ಇಲಾಖೆ ಪರಿಷಕರಿಸುತ್ತಿದೆ. ಶೀಘ್ರದಲ್ಲೇ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ ಎಂದು ಸರ್ಕಾರ ಘೋಷಿಸಿತ್ತು. ಜೂನ್ ನಲ್ಲಿ ಹೊಸ ರೇಷನ್ ಕಾರ್ಡ್ ಅನ್ನು ಪಡೆಯಬಹುದು ಎನ್ನುವ ನಿರೀಕ್ಷೆಯಲ್ಲಿ ಜನರು ಕಾದು ಕುಳಿತಿದ್ದರು.

ಆದರೆ ಇದೀಗ ಆಹಾರ ಇಲಾಖೆ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯ ವಿಚಾರವಾಗಿ ಜನಸಾಮಾನ್ಯರಿಗೆ ಬೇಸರದ ಸುದ್ದಿಯೊಂದನ್ನು ನೀಡಿದೆ. ಹೌದು, ಹೊಸ ರೇಷನ್ ಕಾರ್ಡ್ ನಿಯಮದಲ್ಲಿ ದೊಡ್ಡ ಬದಲಾವಣೆ ಮಾಡಿದ್ದು, ಸದ್ಯಕ್ಕೆ ಯಾವುದೇ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ, ವಿಲೇವಾರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಆಹಾರ ಇಲಾಖೆ ಅಧಿಕೃತವಾಗಿ ಘೋಷಿಸಿದೆ.

BPL Ration Card New Update
Image Credit: News 18

ಇನ್ನುಮುಂದೆ ಇಂತವರಿಗೆ ಮಾತ್ರ BPL ಕಾರ್ಡ್
ಹೊಸ ಪಡಿತರ ಚೀಟಿಗಾಗಿ 2.95 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದರು. ಈ ಅಪ್ಲಿಕೇಶನ್‌ ಗಳಲ್ಲಿ, ಕ್ಯಾನ್ಸರ್, ಮೂತ್ರಪಿಂಡ, ಹೃದಯ ಸಮಸ್ಯೆಗಳು ಮತ್ತು ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರೂ ಇದ್ದಾರೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಬಿಪಿಎಲ್ ಕಾರ್ಡ್ ಪ್ರಮುಖ ದಾಖಲೆಯಾಗಿದ್ದು ಅಂತಹವರಿಗೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ವಿತರಿಸಲು ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಕಾರ್ಡ್ ವಿತರಿಸಲಾಗುವುದು ಎಂದು ತಿಳಿದುಬಂದಿದೆ.

Join Nadunudi News WhatsApp Group

ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಇನ್ನು ಹೆಚ್ಚು ಸಮಯ ಕಾಯಬೇಕಾಗಿದೆ. ಈ ತಿಂಗಳಿನಲ್ಲಿ ಕ್ಯಾನ್ಸರ್, ಕಿಡ್ನಿ, ಹೃದಯ ಮತ್ತಿತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೊಸದಾಗಿ ಬಿಪಿಎಲ್ ನೀಡಲು ಆಹಾರ ಇಲಾಖೆ ಸಿದ್ಧವಾಗಿದೆ.

Ration Card latest News
Image Credit: Informalnewz

Join Nadunudi News WhatsApp Group