Cashless Treatment: ಬೈಕ್, ಕಾರು ಮತ್ತು ಯಾವುದೇ ವಾಹನ ಇದ್ದವರಿಗೆ ಗುಡ್ ನ್ಯೂಸ್, ನಿತಿನ್ ಗಡ್ಕರಿ ಮಹತ್ವದ ಘೋಷಣೆ
ಇನ್ನುಮುಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ನಗದು ರಹಿತ ಚಿಕಿತ್ಸೆ ಲಭ್ಯ
Cashless Treatment For Accident: ಕೇಂದ್ರ ಸರ್ಕಾರ ಜನಸಾಮಾನ್ಯರಿಗಾಗಿ ವಿವಿಧ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಅದರಲ್ಲೂ ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ರಸ್ತೆ ಅಪಘಾತಗಳನ್ನು ತಪ್ಪಿಸಲು ವಿವಿಧ ಕ್ರಮ ಕೈಗೊಳ್ಳುತ್ತಿದ್ದಾರೆ. ರಸ್ತೆ ಅಪಘಾತಗಳ ನಿಯಂತ್ರಣಕ್ಕಾಗಿ ಈಗಾಗಲೇ ವಿವಿಧ ನಿಯಮ ಜಾರಿಗೊಳಿಸಲಾಗಿದೆ. ಅದೆಷ್ಟೇ ನಿಯಮಗಳನ್ನು ಬಿಗಿಗೊಳಿಸಿದರು ಕೂಡ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ ಎನ್ನಬಹುದು. ಇದಕ್ಕಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಹಾಕಿಕೊಂಡಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೇಂದ್ರದಿಂದ ಮಹತ್ವದ ಯೋಜನೆ ಜಾರಿ
ಮೋಟಾರು ವಾಹನಗಳ ಬಳಕೆಯಿಂದ ಸಂಭವಿಸುವ ರಸ್ತೆ ಅಪಘಾತಗಳ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡಲು ಸರ್ಕಾರವು ಯೋಜನೆಯನ್ನು ರೂಪಿಸಿದೆ. ಚಂಡೀಗಢ ಮತ್ತು ಅಸ್ಸಾಂನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಅದನ್ನು ಜಾರಿಗೊಳಿಸಲು ಪ್ರಾರಂಭಿಸಿದೆ ಎಂದು ಸಂಸತ್ತಿಗೆ ತಿಳಿಸಲಾಯಿತು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ, ಯೋಜನೆಯಡಿಯಲ್ಲಿ, ಅರ್ಹ ಸಂತ್ರಸ್ತರಿಗೆ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ-ಜನ ಆರೋಗ್ಯ ಯೋಜನೆ (ABPM -JAY) ಅಡಿಯಲ್ಲಿ ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ಆಘಾತ ಮತ್ತು ಪಾಲಿಟ್ರಾಮಾ ಆರೈಕೆಗಾಗಿ ಆರೋಗ್ಯ ಪ್ರಯೋಜನಗಳ ಪ್ಯಾಕೇಜ್ ಗಳನ್ನು ಒದಗಿಸಲಾಗುವುದು ಎಂದು ಹೇಳಿದರು. , ಅಪಘಾತದ ದಿನಾಂಕದಿಂದ ಗರಿಷ್ಠ ಏಳು ದಿನಗಳವರೆಗೆ ಗರಿಷ್ಠ 1.5 ಲಕ್ಷ ರೂ. ಇದೆ ಎನ್ನಲಾಗಿದೆ.
ಇನ್ನುಮುಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ನಗದು ರಹಿತ ಚಿಕಿತ್ಸೆ ಲಭ್ಯ
“ಯಾವುದೇ ವರ್ಗದ ರಸ್ತೆಗಳಲ್ಲಿ ಮೋಟಾರು ವಾಹನಗಳ ಬಳಕೆಯಿಂದ ಉಂಟಾದ ರಸ್ತೆ ಅಪಘಾತಗಳ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್ಎಚ್ಎ) ಸಹಯೋಗದೊಂದಿಗೆ ಸಚಿವಾಲಯವು ಯೋಜನೆಯನ್ನು ರೂಪಿಸಿದೆ ಮತ್ತು ಅದನ್ನು ಪ್ರಾಯೋಗಿಕ ಆಧಾರದ ಮೇಲೆ ಜಾರಿಗೆ ತಂದಿದೆ” ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಹೇಳಿದರು. ಇನ್ನುಮುಂದೆ ರಸ್ತೆ ಅಪಘಾತವಾದರೆ ಅಂತವರಿಗೆ ನಗದು ರಹಿತ ಚಿಕಿತ್ಸೆ ಲಭ್ಯವಾಗಲಿದೆ ಎನ್ನಬಹುದು.