Subsidy Home: ಸ್ವಂತ ಮನೆ ಕಟ್ಟುವ ಕನಸು ಕಂಡವರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ, ಇಂದೇ ಅರ್ಜಿ ಸಲ್ಲಿಸಿ.
ಸ್ವಂತ ಮನೆ ಕಟ್ಟುವ ಬಡವರಿಗಾಗಿ ಹೊಸ ಯೋಜನೆ ಜಾರಿಗೆ ತಂದ ಕೇಂದ್ರ ಸರ್ಕಾರ.
Central Govt Home Loan Subsidy: ದೇಶದ ಬಡವರು ಹಾಗೂ ನಿರ್ಗತಿಕ ಜನರಿಗಾಗಿ ಕೇಂದ್ರ ಸರ್ಕಾರ (Central Govt) ವಿವಿಧ ಯೋಜನೆಗಳನ್ನು ಪರಿಚಯಿಸುವ ಮೂಲಕ ಆರ್ಥಿಕವಾಗಿ ಬೆಂಬಲ ನೀಡುತ್ತಿದೆ. ದೇಶದ ಕೋಟ್ಯಂತರ ಜನತೆಗೆ ಮೋದಿ ಸರ್ಕಾರದ (Narendra Modi) ವಿವಿಧ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ.
ಕೇಂದ್ರ ಮೋದಿ ಸಾರ್ಕಾರ ರೈತರಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿದೆ. ಇನ್ನು ನಿರ್ಗತಿಕರಿಗಾಗಿ ಮನೆ ನಿರ್ಮಿಸಿ ಕೊಡಲು ಪ್ರದಾನ್ ಮಂತ್ರಿ ಆವಾಸ್ ಯೋಜನೆಯನ್ನು ಪರಿಚಯಿಸಿದೆ. ಇದೀಗ ಕೇಂದ್ರ ಸರ್ಕಾರ ನೂತನ ಯೋಜನೆಯನ್ನು ಪರಿಚಯಿಸುವ ಮೂಲಕ ದೇಶದ ಬಡ ಜನತೆಯ ಸ್ವಂತ ಮನೆಯ ಕನಸನ್ನು ನನಸು ಮಾಡಲು ಮುಂದಾಗಿದೆ.
ಜನರ ಸ್ವಂತ ಮನೆಯ ಕನಸನ್ನು ನನಸು ಮಾಡಲು ಕೇಂದ್ರ ಸರ್ಕಾರದ ಹೊಸ ಯೋಜನೆ
ಕೇಂದ್ರ ಸರ್ಕಾರವು Pradhan Mantri Awas Yojana ಅಡಿಯಲ್ಲಿ ಮೂರು ಕಂತುಗಳಲ್ಲಿ ಹಣವನ್ನು ನೀಡುತ್ತಾ ಜನರ ಮನೆ ನಿರ್ಮಾಣದ ಕನಸಿಗೆ ಸಹಾಯ ಮಾಡುತ್ತಿದೆ. ಈಗಾಗಲೇ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಮೋದಿ ಸರ್ಕಾರ 1.19 ಕೋಟಿ ಮನೆಗಳನ್ನು ಮಂಜೂರು ಮಾಡಿದೆ ಮತ್ತು ಈಗಾಗಲೇ 75 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಮನೆಗಳನ್ನು ನಿಡಲಾಗಿದೆ.
ಸದ್ಯ PMAY ಯೋಜನೆ ಲಾಭ ಪಡೆಯುತ್ತಿರುವ ಜನರು ಕೇಂದ್ರ ಸರ್ಕಾರದ ಮತ್ತೊಂದು ಯೋಜನೆಯ ಲಾಭ ಪಡೆಯುವ ಅವಕಾಶ ಬಂದೊದಗಿದೆ. ಕೇಂದ್ರ ಸರ್ಕಾರ ಬಡ್ಡಿ ಸಹಾಯಧನದ ಗೃಹ ಸಾಲ ಯೋಜನೆಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಸದ್ಯದಲ್ಲೇ ಈ ಯೋಜನೆಯಡಿ ಗೃಹ ಸಾಲದ ನೀಡಲಾಗುತ್ತದೆ.
ಕೇಂದ್ರ ಸರ್ಕಾರದ ಗೃಹ ಸಾಲ ಸಬ್ಸಿಡಿ ಯೋಜನೆ
ನಗರ ಪ್ರದೇಶಗಳಲ್ಲಿ ಸಣ್ಣ ಮನೆಗಳ ನಿರ್ಮಾಣಕ್ಕಾಗಿ ಮುಂದಿನ 5 ವರ್ಷಗಳಲ್ಲಿ ರೂ. 60,000 ಕೋಟಿ ಮೊತ್ತದ ಬಡ್ಡಿ ಸಹಾಯಧನದ ಗೃಹ ಸಾಲ ಯೋಜನೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 2024 ರ ಸಾವ್ರತಿಕ ಚುನಾವಣೆಯ ಮುಂಚಿತವಾಗಿ ಬ್ಯಾಂಕುಗಳು ಒಂದು ತಿಂಗಳುಗಳ ಮುಂಚಿತವಾಗಿ ಈ ಯೋಜನೆಯನ್ನು ಜಾರಿಗೆ ತರಲಿವೆ. ದೇಶದ ಪ್ರಧಾನಿ Narendra Modi ಅವರು August 15 ರಂದು ಬಡ್ಡಿ ಸಹಾಯಧನದ ಗೃಹ ಸಾಲ ಯೋಜನೆಯನ್ನು ಬಿಡುಗಡೆ ಮಾಡುವ ಬಗ್ಗೆ ಘೋಷಣೆ ಹೊರಡಿಸಿದ್ದರು.
ಈ ಯೋಜನೆಯಡಿ ಸಿಗಲಿದೆ ಇಷ್ಟು ಪ್ರಮಾಣದಲ್ಲಿ ಸಾಲ
ಒಟ್ಟು ಸಾಲದಲ್ಲಿ 9 ಲಕ್ಷದ ವರೆಗಿನ ಮೊತ್ತಕ್ಕೆ ವಾರ್ಷಿಕ ಶೇ. 3 ರಿಂದ ಶೇ. 6.5 ರ ವರೆಗೆ ಬಡ್ಡಿ ಸಹಾಯಧನ ಸಿಗಲಿದೆ. ರೂ. 50 ಲಕ್ಷಕ್ಕಿಂತ ಕಡಿಮೆ ಮೊತ್ತದ ಗೃಹ ಸಾಲವನ್ನು 20 ವರ್ಷಗಳ ವರೆಗೆ ಪಡೆದಿರುವವರು ಪ್ರಸ್ತಾಪಿತ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಬಡ್ಡಿ ಸಹಾಯಧನದ ಮೊತ್ತವನ್ನು ಫಲಾನುಭವಿಗಳಿವೆ ಮುಂಗಡವಾಗಿ ನೀಡಲಾಗುತ್ತದೆ.