Chetan Ahimsa: ಗೋಹತ್ಯಾ ನಿಷೇಧ ಹಿಂಪಡೆಯಿರಿ, ಮುಸ್ಲಿಂ ಮೀಸಲಾತಿ ಮರುಸ್ಥಾಪಿಸಿ, ಸಿದ್ದರಾಮಯ್ಯ ಬಳಿ ಚೇತನ್ ಮನವಿ.

ಸಿದ್ದರಾಮಯ್ಯ ಅವರ ಬಗ್ಗೆ ಗೋಹತ್ಯಾ ಮತ್ತು ಮುಸ್ಲಿಂ ಮೀಸಲಾತಿಯ ಬಗ್ಗೆ ಮನವಿ ಮಾಡಿಕೊಂಡ ಚೇತನ್ ಅಹಿಂಸಾ.

Chetan Ahimsa And Siddaramaiah: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಇದೀಗ ಕಾಂಗ್ರೆಸ್ (Congress) ಸರ್ಕಾರ ಅಧಿಕಾರವನ್ನು ಪಡೆದಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಸರ್ಕಾರದ ಅಧಿಕಾರವನ್ನು ಕಿತ್ತುಕೊಂಡಿದೆ.

ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯ ಸ್ಥಾನದಲ್ಲಿದ್ದರು. ಇನ್ನು ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಹೊಸ ಮುಖ್ಯಮಂತ್ರಿಯ ಆಯ್ಕೆಯಾಗಿದೆ.

Chetan Ahimsa who appealed to Siddaramaiah on cow slaughter and Muslim reservation.
Image Credit: thequint

ಕರ್ನಾಟಕದ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ
ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಜನತೆ ಮುಖ್ಯಮಂತ್ರಿಯ ಆಯ್ಕೆಯ ಕುತೂಹಲದಲ್ಲಿದ್ದರು.

ಇದೀಗ ನಿನ್ನೆ ಜನರ ಕುತೂಹಲಕ್ಕೆ ತೆರೆಬಿದ್ದಿದೆ. ಎರಡನೇ ಬಾರಿ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ಪಡೆಯಲಿದ್ದಾರೆ. ಇನ್ನು ಲೋಕಸಭಾ ಚುನಾವಣೆವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಮುಂದುವರಿಯಲ್ಲಿದ್ದಾರೆ.

Join Nadunudi News WhatsApp Group

ಸಿದ್ದರಾಮಯ್ಯ ಅವರ ಸರ್ಕಾರದ ಮುಂದೆ ಬೇಡಿಕೆಯಿಟ್ಟ ನಟ ಚೇತನ್ ಅಹಿಂಸಾ
ಇದೀಗ ನಟ ಚೇತನ್ ಅಹಿಂಸಾ (Chetan Ahimsa) ಹೊಸ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಮುಂದಿನ ಮುಖ್ಯಮಂತ್ರಿ ತಕ್ಷಣ ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ. ಚುನಾವಣೆಗೂ ಮೊದಲು ಘೋಷಿಸಿದ ಎಲ್ಲ ಐದು ಪ್ರಮುಖ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ನಟ ಚೇತನ್ ಅಹಿಂಸಾ ಅಸ್ತಿತ್ವಕ್ಕೆ ಬರಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

Chetan Ahimsa And Siddaramaiah
Image Credit: news9live

ಇನ್ನು ಬಿಜೆಪಿ ಸರ್ಕಾರ ತಂದಿದ್ದ ಗೋಹತ್ಯೆ ವಿರೋಧಿ ಮಸೂದೆ. ಮತಾಂತರ ವಿರೋಧಿ ಮಸೂಧೆಗಳನ್ನು ಹಿಂಪಡೆಯಬೇಕು. ಅಲ್ಲದೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರದ್ದು ಮಾಡಿದ ಶೇಕಡಾ 4 ಮುಸ್ಲಿಮರ ಮೀಸಲಾತಿ ಪುನಃ ಸ್ಥಾಪಿಸಬೇಕು ಎಂದು ಸಿದ್ದರಾಮಯ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

Join Nadunudi News WhatsApp Group