Chitradurga Bus Accident Complete Details: ಚಿತ್ರದುರ್ಗದ ರಸ್ತೆಯಲ್ಲಿ ರಾತ್ರಿ ನಡೆದ ಭೀಕರ ಬಸ್ ಅಪಘಾತದಲ್ಲಿ 16 ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕ್ರಿಸ್ ಮಸ್ ರಜೆಗೆ ತಮ್ಮ ಊರಿಗೆ ತೆರಳುತ್ತಿದ್ದವರ ಪ್ರಯಾಣ ಇಂತಹ ದುರಂತದಲ್ಲಿ ಅಂತ್ಯಗೊಂಡಿರುವುದು ಮನಕಲುಕುವ ವಿಷಯವಾಗಿದೆ. ಹಾಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಡೀ ಭಾರತ ದೇಶವನ್ನೇ ಬೆಚ್ಚಿ ಬೀಳಿಸಿದ ಈ ಭೀಕರ ಅಪಘಾತ ಆಗಿದ್ದು ಹೇಗೆ ಅನ್ನುವ ಎಲ್ಲಾ ಮಾಹಿತಿ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಚಿತ್ರದುರ್ಗ ರಸ್ತೆಯಲ್ಲಿ ಬಸ್ ಬೆಂಕಿ ದುರಂತ
ಕರ್ನಾಟಕ ರಾಷ್ಟ್ರೀಯ ಹೆದ್ದಾರಿ NH 48 ರಲ್ಲಿ ಹಿರಿಯೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಹಾಗೆ ಬೆಂಗಳೂರಿನಿಂದ ಶಿವಮೊಗ್ಗ ಕಡೆ ತೆರಳುತ್ತಿದ್ದ SeaBird Bus ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತ ಗುರುವಾರ ಅಂದರೆ ಇಂದು ಬೆಳಿಗ್ಗೆ 02:30 ರ ಸುಮಾರಿಗೆ ಹಿರಿಯೂರು ತಾಲೂಕಿನ ಗೊರ್ಲತ್ ಕ್ರಾಸ್ ಬಳಿ ನೆಡೆದಿದೆ. ಈ ಅಪಘಾತದಲ್ಲಿ ಸುಮಾರು 16 ಕ್ಕೂ ಅಧಿಕ ಬಸ್ ಪ್ರಯಾಣಿಕರು ಸಜೀವ ದಹನರಾಗಿದ್ದಾರೆ, ಹಾಗೆ ಇನ್ನು ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ಚಿತ್ರದುರ್ಗ ಬಸ್ ಅಪಘಾತದ ಹಿನ್ನೆಲೆ
ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಲಾರಿ ಬಸ್ಸಿನ ಡೀಸೆಲ್ ಟ್ಯಾಂಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯದಲ್ಲೇ ಬೆಂಕಿಗೆ ಆಹುತಿ ಆಗಿದೆ. ಬಸ್ಸಿನಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿ ಒಟ್ಟು 32 ಸೀಟುಗಳಿದ್ದು, ಅದರಲ್ಲಿ 15 ಮಹಿಳೆಯರು ಮತ್ತು 14 ಪುರುಷರು ಸೇರಿದಂತೆ 29 ಜನ ಪ್ರಯಾಣಿಕರು ಪ್ರಯಾಣ ಮಾಡುತಿದ್ದರು. ಅಪಘಾತ ಸಂಭವಿಸಿದ ಕೂಡಲೇ ಬಸ್ ಚಾಲಕ, ಕಂಡಕ್ಟರ್ ಹಾಗೆ ಇತರ ಪ್ರಯಾಣಿಕರು ಬಸ್ ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಅಪಘಾತದಲ್ಲಿ ಸಾವನ್ನಪ್ಪಿನ ಟ್ರಕ್ ಚಾಲಕನ ನಿರ್ಲಕ್ಷವೇ ಈ ಅಪಘಾತಕ್ಕೆ ಕಾರಣ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ಪ್ರಕರಣದ ತನಿಖೆ
ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ಬಸ್ಸಿನಿಂದ ಒಂಬತ್ತು ಶವಗಳನ್ನು ಹೊರತೆಗೆದಿದ್ದಾರೆ. ತನಿಖೆಯ ಮೇಲ್ವಿಚಾರಣೆಗಾಗಿ SP ರಂಜಿತ್ ಸ್ಥಳಕ್ಕೆ ಭೇಟಿ ನೀಡಿದ್ದು, ಹಿರಿಯೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಅಪಘಾತದಿಂದಾಗಿ ಸುಮಾರು 30 ಕಿಲೋಮೀಟರ್ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನಗಳನ್ನು ಶಿರಾವರಕ್ಕೆ ಹಿಂತಿರುಗಿಸಲಾಗಿದೆ.
ಹೈದ್ರಾಬಾದ್ ದುರಂತ
ಕಳೆದ 2 ತಿಂಗಳ ಹಿಂದೆಯಷ್ಟೇ ಆಂದ್ರಪ್ರದೇಶದ ಕರ್ನುಲ್ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಹೈದ್ರಾಬಾದ್ ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್ ಗೆ ಸೇರಿದ ವೋಲ್ವೋ ಸ್ಲೀಪರ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿ ಆಗಿದೆ. ಈ ಬಸ್ ನಲ್ಲಿ ಚಾಲಕ ಮತ್ತು ಸಹಾಯಕ ಸೇರಿದಂತೆ ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು. ಈ ದುರ್ಘಟನೆಯಲ್ಲಿ 16 ಕ್ಕೂ ಹೆಚ್ಚು ಮಂದಿ ಸಜೀವ ದಹನ ಆಗಿದ್ದಾರೆ ಮತ್ತು ಕೆಲವರು ಕಿಟಕಿಗಳ ಮೂಲಕ ಪಾರಾಗಿದ್ದಾರೆ.
Disclaimer: This information is provided for awareness purposes only. For personalised legal advice, consult a qualified professional and refer to official government notifications.

