Cigarette Ban: 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದಿದರೆ ಕಟ್ಟಬೇಕು ಇಷ್ಟು ದಂಡ, ಸರ್ಕಾರದ ಆದೇಶ.

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದಿದರೆ ಕಟ್ಟಬೇಕು ಇಷ್ಟು ದಂಡ

Cigarette Ban For Youths: ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಹೊಸ ಹೊಸ ಯೋಜನೆಗಳ ಜೊತೆಗೆ ಹಲವಾರು ನಿಯಮಗಳನ್ನು ಕೂಡ ಪರಿಚಯಿಸಿದೆ. ಜನರ ಒಳಿತಿಗಾಗಿ ಈಗಾಗಲೇ ಸಾಕಷ್ಟು ಕ್ರಮ ಕೈಗೊಂಡಿದೆ. ಸದ್ಯ ರಾಜ್ಯ ಸರ್ಕಾರ ಹುಕ್ಕಾ ಬಾರ್ ನಿಷೇದಕ್ಕೆ ಮುಂದಾಗಿದೆ.

ಈ ಮೂಲಕ ತಂಬಾಕು, ಸಿಗರೇಟ್ ಸೇವನೆಗೆ ಕುರಿತಂತೆ ಹೊಸ ಆದೇಶ ಹೊರಡಿಸಿದೆ. ಸದ್ಯ ರಾಜ್ಯ ಸರ್ಕಾರ ಸಿಗರೇಟ್ ಸೇವನೆಗೆ ವಯಸ್ಸಿನ ಮಿತಿ ನಿಗದಿಪಡಿಸಿದ್ದು, ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಸರ್ಕಾರದ ನಿಯಮ ಉಲ್ಲಂಘಿಸಿದರೆ ಬಾರಿ ದಂಡದ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ.

Cigarette Ban In Karnataka
Image Credit: India

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದಿದರೆ ಕಟ್ಟಬೇಕು ಇಷ್ಟು ದಂಡ
ರಾಜ್ಯಾದ್ಯಂತ ಹುಕ್ಕಾ ಬಾರ್‌ ಗಳನ್ನು ನಿಷೇಧಿಸುವ ಮಸೂದೆಯನ್ನು ರಾಜ್ಯ ಸರ್ಕಾರ ಬುಧವಾರ ಅಂಗೀಕರಿಸಿದ್ದು, ನಿಷೇಧವನ್ನು ಉಲ್ಲಂಘಿಸುವವರಿಗೆ 1-3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಅಧಿಸೂಚನೆಯ ಪ್ರಕಾರ, ನಾಗರಿಕರ ಆರೋಗ್ಯವನ್ನು ರಕ್ಷಿಸಲು ಮತ್ತು ತಂಬಾಕು ಸಂಬಂಧಿತ ರೋಗಗಳ ಉಬ್ಬರವಿಳಿತವನ್ನು ತಡೆಗಟ್ಟುವ ಸಲುವಾಗಿ ಅಸ್ತಿತ್ವದಲ್ಲಿರುವ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ (COTPA) ಗೆ ತಿದ್ದುಪಡಿ ಮಾಡಿದ ನಂತರ ನಿಷೇಧವನ್ನು ವಿಧಿಸಲಾಗಿದೆ. ಇನ್ನು 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ರಾಜ್ಯವು ನಿಷೇಧಿಸುತ್ತದೆ. ಈ ಮೂಲಕ 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಿಗರೇಟ್ ಸೇದುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

Cigarette Ban For Youths
Image Credit: Carolinanewsandreporter

ಈ ನಿಯಮ ಉಲ್ಲಂಘಿಸಿದರೆ 1,000 ರೂ. ದಂಡ
ತಿದ್ದುಪಡಿ ಮಾಡಿದ ಮಸೂದೆಯು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯ ಮೇಲೆ ಸಂಪೂರ್ಣ ನಿಷೇಧವನ್ನು ಜಾರಿಗೆ ತರಲಿದ್ದು, ಹೊಗೆ ಮುಕ್ತ ವಾತಾವರಣವನ್ನು ನಿರ್ಮಿಸುವ ಬದ್ಧತೆಯನ್ನು ಒತ್ತಿ ಹೇಳುತ್ತದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವುದೇ ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ. ನಿಯಮ ಉಲ್ಲಂಘಿಸಿದರೆ 1,000 ರೂ. ದಂಡ ವಿಧಿಸಲು ನಿರ್ಧರಿಸಿದೆ.

Join Nadunudi News WhatsApp Group

Join Nadunudi News WhatsApp Group