Drought Relief Fund: ಈ ದಿನದಂದು ರೈತರ ಖಾತೆಗೆ ಜಮಾ ಆಗಲಿದೆ 2000 ರೂ, ಸಿದ್ದರಾಮಯ್ಯ ಅಧಿಕೃತ ಘೋಷಣೆ

ಬರ ಪರಿಹಾರದ ಇನ್ನೊಂದು ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah About Drought Relief Fund: ರಾಜ್ಯದಲ್ಲಿ ರೈತರ ಬರ ಪರಿಹಾರ ವಿಷಯವಾಗಿ ಮುಖ್ಯ ಮಂತ್ರಿಗಳು ಹೊಸ ಘೋಷಣೆಯನ್ನು ಮಾಡಿದ್ದಾರೆ. ಈಗಾಗಲೇ ರೈತರು ಸರ್ಕಾರದಿಂದ ಬರ ಪರಿಹಾರ ಯಾವಾಗ ಬಿಡುಗಡೆ ಆಗಲಿದೆ ಎಂದು ಕಾಯುತ್ತಿದ್ದು, ಇದಕ್ಕೆ ಸರಿಯಾಗಿ ಬರ ಪರಿಹಾರದ ಮೊದಲ ಕಂತಿನ ಹಣ ವಾರದೊಳಗೆ ಬಿಡುಗಡೆ ಆಗಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಘೋಷಣೆ ಮಾಡಿದ್ದಾರೆ.

ಸಿಎಂ ಅವರು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಅವರು ಪುನ: ಬಿಎಪಿಗೆ ಹಿಂತಿರುಗುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅವರೇ ನಾನು ಪುನ: ಬಿಜೆಪಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ ಎಂದಿದ್ದಾರೆ.

CM Siddaramaiah About Drought Relief Fund
Image Credit: Thenewsminute

ಬರ ಪರಿಹಾರದ ಕುರಿತು ಪ್ರಧಾನಿಯವರೊಂದಿಗೆ ಚರ್ಚಿಸಲಾಗಿದೆ

ಡಿಸೆಂಬರ್ 23 ರಂದು ಕೇಂದ್ರಕ್ಕೆ ಭೇಟಿ ನೀಡಿ ಅಮಿತ್ ಷಾ ಅವರನ್ನು ಭೇಟಿ ನೀಡಿದಾಗ ಸಭೆ ಕರೆದು ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ ಇಂದಿನವರೆಗೂ ಬಿಡುಗಡೆಯಾಗಿಲ್ಲ ಸಭೆ ಕರೆದು ಕಾರಣಾಂತರದಿಂದ ಮುಂದೂಡಿದರು ಎನ್ನಲಾಗಿತ್ತು. ರಾಜ್ಯದ ರೈತರು ಬರಗಾಲದಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ, ಕೂಡಲೇ ಬಿಡುಗಡೆ ಮಾಡಿ ಎಂದು ಇತ್ತೀಚೆಗೆ ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡಿದಾಗ ಈ ವಿಷಯವನ್ನು ಅವರ ಗಮನಕ್ಕೆ ತಂದಿದ್ದೇನೆ ಅವರಿಗೆ ನೆನಪು ಮಾಡಿದ್ದೇನೆ ಎಂದರು.

Drought Relief Fund
Image Credit: India Today

ಶೀಘ್ರದಲ್ಲೇ ಮೊದಲ ಕಂತಿನ ಹಣ ಬಿಡುಗಡೆ

Join Nadunudi News WhatsApp Group

ರಾಜ್ಯ ಸರ್ಕಾರ ಇವತ್ತಿನವರೆಗೂ ದನಕರುಗಳಿಗೆ ಹಾಗೂ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ, ಜನರು ಗುಳೇ ಹೋಗದಂತೆ ನಿಭಾಯಿಸಲಾಗಿದೆ. ರೈತರಿಗೆ ಪರಿಹಾರವಾಗಿ ಈವರೆಗೆ ಮೊದಲ ಹಂತದಲ್ಲಿ 550 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದೇವೆ. ಇನ್ನೊಂದು ವಾರದೊಳಗೆ ಎಲ್ಲಾ ರೈತರಿಗೂ ಮೊದಲನೇ ಕಂತನ್ನು ತಲುಪಿಸುವ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

Join Nadunudi News WhatsApp Group