OPS Update: ರಾಜ್ಯ ಸರ್ಕಾರೀ ನೌಕರರಿಗೆ ಪಿಂಚಣಿ ರದ್ದು, ಹಳೆ ಪಿಂಚಣಿ ಕುರಿತಂತೆ ಸಿಹಿಸುದ್ದಿ ನೀಡಿದ ಸರ್ಕಾರ.

ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಕುರಿತು ಮಹತ್ವದ ಆದೇಶ.

Siddaramaiah About Old Pension Scheme: ಸರ್ಕಾರೀ ನೌಕರರಿಗೆ ಶೇ. 4 ರಷ್ಟು ತುಟ್ಟಿಭತ್ಯೆ ಹೆಚ್ಚಿಸುವುದಾಗಿ ಸರ್ಕಾರ ಘೋಷಿಸಿದ್ದು, ಸರ್ಕಾರೀ ನೌಕರರು ಸಧ್ಯ ತುಟ್ಟಿಭತ್ಯೆ ಹೆಚ್ಚಳದ ಖುಷಿಯಲ್ಲಿದ್ದಾರೆ. ಸದ್ಯ ರಾಜ್ಯದಲ್ಲಿ ಇದೀಗ Old Pension ಜಾರಿ ಕುರಿತು ಸಾಕಷ್ಟು ಅಪ್ಡೇಟ್ ಗಳು ಹರಿದಾಡುತ್ತಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಸರಕಾರ ಹಳೆಯ ಪಿಂಚಣಿ ಯೋಜನೆಯ ಜಾರಿಗೂ ಅನುಮತಿ ನೀಡಬಹುದು ಎನ್ನುವುದು ಸರ್ಕಾರೀ ನೌಕರರ ಸದ್ಯದ ನಿರೀಕ್ಷೆಯಾಗಿದೆ.

ಇದೀಗ ಸರ್ಕಾರೀ ನೌಕರರಿಗೆ ಹಳೆಯ ಪಿಂಚಣಿ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಳೆಯ ಪಿಂಚಣಿ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಯಾವಾಗ ಹಳೆಯ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎನ್ನುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

Siddaramaiah About Old Pension Scheme
Image Credit: News Next Live

ರಾಜ್ಯ ಸರ್ಕಾರೀ ನೌಕರರಿಗೆ NPS ರದ್ದು
ಪ್ರಸ್ತುತ ಸರ್ಕಾರೀ ನೌಕರರು ಹೊಸ ಪಿಂಚಣಿ ವಯವಷ್ಟೇ ಅಡಿಯಲ್ಲಿ ಪಿಂಚಣಿಯನ್ನು ಪಡೆಯುತ್ತಿದ್ದಾರೆ. ಆದರೆ ಹೊಸ ಪಿಂಚಣಿ ವ್ಯವಸ್ಥಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯಸ್ಥೆಯ ಅಡಿಯಲ್ಲಿ ಪಿಂಚಣಿ ನೀಡುವಂತೆ ಸರ್ಕಾರೀ ನೌಕರರು ಸರ್ಕಾರಕ್ಕೆ ಹಲವು ಸಮಯದಿಂದ ಮನವಿ ಮಾಡಿಕೊಳ್ಳುತ್ತ ಬಂದಿದ್ದಾರೆ. ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು NPS ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡುದಾಗಿ ಘೋಷಣೆ ಹೊರಡಿಸಿದ್ದಾರೆ. ಈ ಮೂಲಕ ಸರ್ಕಾರೀ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಹಳೆ ಪಿಂಚಣಿ ಕುರಿತಂತೆ ಸಿಹಿಸುದ್ದಿ ನೀಡಿದ ಸರ್ಕಾರ
ರಾಜ್ಯದಲ್ಲಿ ದಿನಾಂಕ 01-03-2023 ರಂದು ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿರುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕ್ರೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷೆತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ ಎಂದು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.

Old Pension Latest Update
Image Credit: Original Source

ಇದಲ್ಲದೇ ರಾಜ್ಯ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು ತ್ರಿಸದಸ್ಯ 7ನೇ ವೇತನ ಆಯೋಗವನ್ನು 19-11-2022 ರಂದು ರಚಿಸಲಾಗಿದೆ. ನಂತರ ದಿನಾಂಕ 06-11-2023 ರ ಆದೇಶದಲ್ಲಿ ಆಯೋಗದ ಅವಧಿಯನ್ನು 15-03-2024 ರವರೆಗೆ ವಿಸ್ತರಿಸುವ ಬಗ್ಗೆ ಆದೇಶಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group