Pension 2024: ಸರ್ಕಾರೀ ನೌಕರರ ಪಿಂಚಣಿಯಲ್ಲಿ ದೊಡ್ಡ ಬದಲಾವಣೆ, ಸಿದ್ದರಾಮಯ್ಯ ಮಹತ್ವದ ಘೋಷಣೆ

ಹಳೆಯ ಪಿಂಚಣಿ ಕುರಿತು ಮಹತ್ವದ ನಿರ್ಧಾರ ತೆಗೆದುಕೊಂಡ ಸಿದ್ದರಾಮಯ್ಯ

Siddaramaiah About Old Pension: ಪ್ರಸ್ತುತ ರಾಜ್ಯದಲ್ಲಿ Nation Pension Scheme ಕುರಿತಾಗಿ ಬಾರಿ ಚರ್ಚೆ ಉಂಟಾಗುತ್ತಿದೆ. ರಾಜ್ಯ ಸರ್ಕಾರೀ ನೌಕರರರು NPS ಅನ್ನು ರದ್ದುಗೊಳಿಸಿ OPS ಜಾರಿ ಮಾಡುವಂತೆ ಸರಕಾರಕ್ಕೆ ಮೇಲಿಂದ ಮೇಲೆ ಮನವಿ ಮಾಡಲಾಗುತ್ತಿದೆ.

ಈಗಾಗಲೇ ಕೆಲವು ರಾಜ್ಯದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಪ್ರಸ್ತುತ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವುದಾಗಿ ಸಾಕಷ್ಟು ಬಾರಿ ಹೇಳಿಕೆ ನೀಡಿದ್ದರು. ಇದೀಗ ಸರ್ಕಾರೀ ನೌಕರರ ಬಹುದಿನದ ಬೇಡಿಕೆಯ NPS ರದ್ದತಿಯ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.

Siddaramaiah About Old Pension Scheme
Image Credit: News Next Live

ಸರ್ಕಾರೀ ನೌಕರರ ಪಿಂಚಣಿಯಲ್ಲಿ ದೊಡ್ಡ ಬದಲಾವಣೆ
ಸದ್ಯ ಸರ್ಕಾರೀ ನೌಕರರಿಗೆ Old Pension ನೀಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಳೆಯ ಪಿಂಚಣಿ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಪ್ರಸ್ತುತ ಸರ್ಕಾರೀ ನೌಕರರು ಹೊಸ ಪಿಂಚಣಿ ವ್ಯವಸ್ಥೆಯ ಅಡಿಯಲ್ಲಿ ಪಿಂಚಣಿಯನ್ನು ಪಡೆಯುತ್ತಿದ್ದಾರೆ. ಆದರೆ ಹೊಸ ಪಿಂಚಣಿ ವ್ಯವಸ್ಥಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯಸ್ಥೆಯ ಅಡಿಯಲ್ಲಿ ಪಿಂಚಣಿ ನೀಡುವಂತೆ ಸರ್ಕಾರೀ ನೌಕರರು ಸರ್ಕಾರಕ್ಕೆ ಹಲವು ಸಮಯದಿಂದ ಮನವಿ ಮಾಡಿಕೊಳ್ಳುತ್ತ ಬಂದಿದ್ದಾರೆ.

ಸಿದ್ದರಾಮಯ್ಯ ಮಹತ್ವದ ಘೋಷಣೆ
ಸದ್ಯ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಮಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು NPS ರದ್ದತಿಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.  ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು NPS ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡುದಾಗಿ ಘೋಷಣೆ ಹೊರಡಿಸಿದ್ದಾರೆ. ಈ ಮೂಲಕ ಸರ್ಕಾರೀ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ.

Old pension Scheme Latest News
Image Credit: Original Source

ಎನ್‌ಪಿಎಸ್ ರದ್ದುಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಲಾದ ಕ್ರಮಗಳನ್ನು ಸಹ ಪರಿಶೀಲಿಸಲಾಗುತ್ತದೆ. ಈ ಬಗ್ಗೆಯೂ ಹಣಕಾಸು ಇಲಾಖೆ ಪರಿಶೀಲನೆ ನಡೆಸಲಿದೆ. ಆ ಬಳಿಕ ರದ್ದತಿ ಸಾಧ್ಯತೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group