CM Siddaramaiah: ಸಂಕಷ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಖುರ್ಚಿಗೆ ಬಂತು ಕುತ್ತು.

ಸಂಕಷ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah Latest Update: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಗೆದ್ದಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಮುಖ್ಯತಂತ್ರಿ ಆಯ್ಕೆ ಮಾಡುವಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಸಿತ್ತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವೆ ಸಿಎಂ ಕುರ್ಚಿಗಾಗಿ ಬಾರಿ ಪೈಪೋಟಿ ಏರ್ಪಟ್ಟಿತ್ತು. ಈ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದು ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾದರು.

ಸದ್ಯ ಸಿದ್ದರಾಮಯ್ಯ ಅವರು ಅಧಿಕಾರವನ್ನು ಪಡೆದು ಒಂದು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಈಗಲೂ ಕೂಡ ರಾಜ್ಯದ ಜನತೆಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೆ. ಇದೆಲ್ಲದರ ಮದ್ಯೆ ರಾಜ್ಯದಲ್ಲಿ ಸಿಎಂ ಬದಲಾಗುವ ಬಗ್ಗೆ ಚರ್ಚೆ ಶುರುವಾಗಿದೆ. ಮುಖ್ಯಮಂತ್ರಿ ಅವರನ್ನು ಬದಲಾಯಿಸಬೇಕು ಎನ್ನುವ ಕೂಗಿನ ಮಧ್ಯೆ ಇದೀಗ ಸಿದ್ದರಾಮಯ್ಯ ಅವರಿಗೆ ಮತ್ತೊಂದು ತಲೆನೋವು ಎದುರಾಗಿದೆ.

CM Siddaramaiah Latest Update
Image Credit: Business-standard.

ಸಂಕಷ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ ಪಂಚಪೀಠ ಲಿಂಗಾಯತ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದೆ. ಹೌದು, ಈಗ ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆಯ ಪೈಪೋಟಿ ಶುರುವಾಗಿದೆ. ಪಂಚಪೀಠದಿಂದ ಲಿಂಗಾಯತ ಮುಖ್ಯಮಂತ್ರಿ ಬೇಕು ಎಂದು ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿ ಆಗ್ರಹಿಸಿದ್ದಾರೆ. ಚಿಕ್ಕೋಡಿಯ ಯಡೂರು ಗ್ರಾಮದಲ್ಲಿ ಮಾತನಾಡಿದ ಅವರು, ಸಿಎಂ ಬದಲಾದರೆ ವೀರಶೈವರಿಗೆ ಆದ್ಯತೆ ನೀಡಿ ಎಂದರು. ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಶ್ರೀಗಳು ಕೋರಿದರು. ಈ ಹಿಂದೆಯೂ ಹಲವು ಮುಖಂಡರು ಲಿಂಗಾಯತ ಮುಖ್ಯಮಂತ್ರಿ ಬೇಕೆಂದು ಒತ್ತಾಯಿಸಿದ್ದರು.

ಸಿಎಂ ಖುರ್ಚಿಗೆ ಬಂತು ಕುತ್ತು
ಜಯ ಮೃತ್ಯುಂಜಯ ಸ್ವಾಮಿ ಹಾಗೂ ಲಿಂಗಾಯತ ಸಮಾಜದ ಹಲವು ಅಧ್ಯಕ್ಷರು ನಮ್ಮ ಸಹಕಾರದಿಂದ ಮಾತ್ರ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿಕೆ ನೀಡಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿದ 50ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದು, ಕಾಂಗ್ರೆಸ್‌ ಗೆ ಸಮಾಜದ ಒಗ್ಗಟ್ಟಿನ ಬೆಂಬಲವೇ ಕಾರಣ ಎಂದು ಸಭಾಧ್ಯಕ್ಷರು ಹೇಳಿದರು. ಜೊತೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲಿಂಗಾಯತರು ಮತ್ತು ಪಂಚಮಸಾಲಿ ಹೋರಾಟಕ್ಕೆ ಬೆಂಬಲ ನೀಡದ ಕಾರಣ ಆಡಳಿತ ಪಕ್ಷದಿಂದ ಲಿಂಗಾಯತರು ವಿಮುಖರಾಗಬೇಕು ಎಂದು ಎಚ್ಚರಿಕೆ ನೀಡಿದರು.

CM Siddaramaiah Latest News Update
Image Credit: Telegraphindia

Join Nadunudi News WhatsApp Group

Join Nadunudi News WhatsApp Group