Health Card: ಇನ್ನೂ ಸರ್ಕಾರಿ ಹೆಲ್ತ್‌ ಕಾರ್ಡ್‌ ಮಾಡಿಸಿಲ್ಲವೇ? ಕೂಡಲೇ ಮಾಡಿಸಿ!

ಕೇಂದ್ರ ಹಾಗು ರಾಜ್ಯ ಸರ್ಕಾರದಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಲ್ತ್ ಕಾರ್ಡ್ ವಿತರಣೆ , ಅರ್ಹರು ಇಂದೇ ಅರ್ಜಿ ಹಾಕಿ, ಉಚಿತ ಚಿಕಿತ್ಯೆ ಪಡೆಯಿರಿ

CM Siddaramaiah Launched Ayushman Bharat – Arogya Karnataka Health Card: ಆರೋಗ್ಯವೇ ಭಾಗ್ಯ ಎಂದು ನಮ್ಮ ಹಿರಿಯರು ಯಾವಾಗಲು ಹೇಳುತ್ತಾರೆ. ಈ ಮಾತಿನ ಮಹತ್ವ ನಮಗೆ ಅರ್ಥ ಆಗುವುದು ನಮ್ಮ ಆರೋಗ್ಯ ಕೆಟ್ಟಾಗ ಮಾತ್ರ. ಆರೋಗ್ಯವನ್ನು ನಾವು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಒಮ್ಮೆ ನಮ್ಮ ಆರೋಗ್ಯ ಕೆಟ್ಟಿತಂದರೇ ನಾವು ತುಂಬ ತೊಂದರೆಯನ್ನು ಎದುರಿಸಬೇಕಾಗುತ್ತದೆ.

ಇಂದಿನ ದಿನಗಳಲ್ಲಿ ಸ್ವಲ್ಪ ಆರೋಗ್ಯ ಹಾಳಾಗಿ ಆಸ್ಪತ್ರೆಗೆ ದಾಖಲಾದರೆ ಹತ್ತರಿಂದ ಇಪ್ಪತ್ತು ಸಾವಿರ ರೂಪಾಯಿ ಖರ್ಚಾಗುತ್ತದೆ. ಹಣ ಇದ್ದವರಿಗೆ ಇದೊಂದು ದೊಡ್ಡ ಖರ್ಚಲ್ಲ ಆದರೆ ಬಡವರು ಇಷ್ಟೊಂದು ಹಣ ಖರ್ಚು ಮಾಡುವ ಪರಿಸ್ಥಿತಿ ಹೊಂದಿರುವುದಿಲ್ಲ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರಿಗೆ, ಮಧ್ಯಮ ವರ್ಗದವರಿಗೆ ಅನುಕೂಲವಾಗಲೆಂದೇ ಆರೋಗ್ಯ ಕಾರ್ಡ್‌ ಯೋಜನೆಗಳನ್ನು ಹೊರತಂದಿವೆ.

Siddaramaiah Launched Health Card
Image Credit: Vistara News

ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಹಲವು ಯೋಜನೆಗಳು

ರಾಜ್ಯ ಹಾಗು ಕೇಂದ್ರ ಸರಕಾರಗಳು Ayushman Bharat – Arogya Karnataka Health Card ಗಳಂಥ ಹಲವು ಆರೋಗ್ಯ ಕಾರ್ಡ್ ಗಳ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಈಗ ಈ ಕಾರ್ಡ್ ಗಳಿಗೆ ಹೊಸ ರೂಪ ಸಿಕ್ಕಿದೆ. ಈ ಆರೋಗ್ಯ ಕಾರ್ಡ್‌ ಹೆಸರಿನಲ್ಲಿ ಅಲ್ಪ ಬದಲಾವಣೆಯಾಗಿದ್ದು, ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಹೆಸರಿಡಲಾಗಿದೆ. ಈ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು CM Siddaramaiah ಅವರು ಡಿಸೆಂಬರ್‌ 6ರಂದು ಬಿಡುಗಡೆ ಮಾಡಿದ್ದಾರೆ.

ಹೆಲ್ತ್ ಕಾರ್ಡ್‌ ನಿಂದ ಉಚಿತ ಚಿಕಿತ್ಯೆ ಪಡೆಯಬಹುದು

Join Nadunudi News WhatsApp Group

ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಯೋಜನೆಯಡಿ ಅರ್ಹ ಬಡ ಹಾಗು ಮಾಧ್ಯಮ ವರ್ಗದ ಜನರು ಹೆಲ್ತ್ ಕಾರ್ಡ್ ಅನ್ನು ಹೊಂದಬಹುದು. ಈ ಕಾರ್ಡ ನ ವೈಶಿಷ್ಟ್ಯತೆ ಎಂದರೆ ಈ ಕಾರ್ಡ್‌ ಹೊಂದಿದವರು ದೇಶದ ಯಾವುದೇ ಕಡೆ (ನೋಂದಾಯಿತ) ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಅಲ್ಲದೆ, ಬರೋಬ್ಬರಿ 5 ಲಕ್ಷ ರೂಪಾಯಿವರೆಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಹೀಗಾಗಿ ನೋಂದಣಿ ಮಾಡಿಸದೇ ಇದ್ದವರು ಕೂಡಲೇ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಹೇಳಿದೆ.

CM Siddaramaiah Launched Ayushman Bharat - Arogya Karnataka Health Card
Image Credit: The Hindu

ಹೆಲ್ತ್ ಕಾರ್ಡ್ ಅನ್ನು ನೋಂದಾಯಿಸುವ ಪ್ರಕ್ರಿಯೆ

ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರಿಕ ಸೇವಾ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ಸುಲಭವಾಗಿ ನೋಂದಾಯಿಸಿ ಪಡೆಯಬಹುದಾಗಿರುತ್ತದೆ. ಹೀಗಾಗಿ ಅಗತ್ಯ ದಾಖಲೆಗಳೊಂದಿಗೆ ಕೂಡಲೇ ಹೋಗಿ ಆರೋಗ್ಯ ಕಾರ್ಡ್‌ ಅನ್ನು ಉಚಿತವಾಗಿ ಪಡೆಯಿರಿ.

ಯಾವುದೇ ರಾಜ್ಯಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇದೆ

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್‌ಗೆ ನೂತನ ಹೆಲ್ತ್ ಕಾರ್ಡ್‌ಗಳನ್ನು ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್‌ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

Arogya Karnataka Health Card
Image Credit: Sarkari Yojana

6 ತಿಂಗಳಲ್ಲಿ 5.09 ಕೋಟಿ ಮಂದಿಗೆ ಕಾರ್ಡ್‌ ವಿತರಣೆ ಗುರಿ

ರಾಜ್ಯದಲ್ಲಿರುವ ಒಟ್ಟು 5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಕಾರ್ಡ್‌ ಸೃಜನೆ ಮತ್ತು ವಿತರಣಾ ಗುರಿಯನ್ನು ಹೊಂದಲಾಗಿದೆ. ಈ ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು ಶೇ.66 ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರವು 34% ನೀಡುತ್ತಿದೆ.ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್‌ ಹಾಗೂ 19 ಲಕ್ಷ ಎಪಿಎಲ್‌ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ.

ಎಪಿಎಲ್‌ನವರಿಗೆ ಗರಿಷ್ಠ ರೂ.1.5 ಲಕ್ಷ ವೆಚ್ಚ ಪಾವತಿ

APL ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, APL ಕುಟುಂಬಗಳಿಗೆ 5 ಲಕ್ಷದ ರೂ. ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನು ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡುದಾರರು ಶೇ. 70 ರಷ್ಟು ಚಿಕಿತ್ಸಾ ವೆಚ್ಚವನ್ನು ಪಾವತಿಸಿದರೆ, ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

Ayushman Bharat - Arogya Karnataka Health Card
Image Credit: Krishi Jagran

ವಾರ್ಷಿಕ 5 ಲಕ್ಷ ರೂ. ಮೌಲ್ಯದ ಚಿಕಿತ್ಸೆ ಪಡೆಯಬಹುದು

ಈ ಯೋಜನೆಯಡಿಯಲ್ಲಿ BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ರೂ. ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.‌ಈ ಯೋಜನೆಯಡಿಯಲ್ಲಿ BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ರೂ. ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.‌

Join Nadunudi News WhatsApp Group