Competitive Exam: ಪರೀಕ್ಷೆ ಬರೆಯುವ ಎಲ್ಲರಿಗೂ ಕೇಂದ್ರದಿಂದ ಹೊಸ ರೂಲ್ಸ್, ದಂಡದ ಜೊತೆಗೆ 10 ವರ್ಷ ಜೈಲು.

ಪರೀಕ್ಷೆಗಳಲ್ಲಿ ಇಂತಹ ಕೆಲಸ ಮಾಡುವವರಿಗೆ ದಂಡದ ಜೊತೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

Competitive Exam Rule Change: ಸದ್ಯ ದೇಶದೆಲ್ಲೆಡೆ ಅನೇಕ ನಿಯಮಗಳು ಜಾರಿಯಾಗುತ್ತಿದೆ. ಜನರ ಸುರಕ್ಷತೆಗಾಗಿ ವಿವಿಧ ನಿಯಮಗಳನ್ನು ಜಾರಿ ಮಾಡಲಾಗುತ್ತಿದೆ. ಸದ್ಯ ಕೇಂದ್ರ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ದೇಶದಲ್ಲಿ ಸಾಕಷ್ಟು ಜನರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿದ್ದಾರೆ. ಇತ್ತೀಚಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಕಷ್ಟು ವಂಚನೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಇದೀಗ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಕೇಂದ್ರದಿಂದ ಹೊಸ ರೂಲ್ಸ್ ಜಾರಿಯಾಗಿದೆ.

Competitive Exam Rule Change
Image Credit: Theprint

ಪರೀಕ್ಷೆ ಬರೆಯುವ ಎಲ್ಲರಿಗೂ ಕೇಂದ್ರದಿಂದ ಹೊಸ ರೂಲ್ಸ್
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ಗರಿಷ್ಠ 10 ವರ್ಷ ಜೈಲು ಶಿಕ್ಷೆ ಹಾಗೂ ರೂ. 1 ಕೋಟಿವರೆಗೆ ದಂಡ ವಿಧಿಸುವ ಹೊಸ ಮಸೂದೆಯನ್ನು ಸರ್ಕಾರ ಸೋಮವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ. ಕೇಂದ್ರ ಸಚಿವ ಸಂಪುಟವು ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ಮಸೂದೆ, 2024 ಅನ್ನು ಅನುಮೋದಿಸಿದೆ ಮತ್ತು ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ಇದನ್ನು ಪರಿಚಯಿಸುವ ಸಾಧ್ಯತೆಯಿದೆ.

ದಂಡದ ಜೊತೆಗೆ 10 ವರ್ಷ ಜೈಲು
ಈ ಬಗ್ಗೆ ಸರ್ಕಾರ ಶೀಘ್ರದಲ್ಲೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಆದಷ್ಟು ಬೇಗ ಘೋಷಣೆ ಹೊರಡಿಸಲಿದೆ. ಈಗಾಗಲೇ ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿರುವ ಕಾರಣ ಸಾಕಷ್ಟು ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಸರ್ಕಾರ ಹೊಸ ನಿಯಮ ರೂಪಿಸಲು ನಿರ್ಧಾರ ಕೈಗೊಂಡಿದೆ.

Competitive Exam Latest Update
Image Credit: Economictimes

ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಈ ಮಸೂದೆಯನ್ನು ಸಿದ್ಧಪಡಿಸಲಾಗಿಲ್ಲ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವ ಸಂಘಟಿತ ಗುಂಪುಗಳು, ಮಾಫಿಯಾ ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಮಸೂದೆಯನ್ನು ಮಂಡಿಸಲಾಗುತ್ತಿದೆ ಎನ್ನುವ ಬಗ್ಗೆ ಮೂಲಗಳಿಂದ ಮಾಹಿತಿ ಲಭಿಸಿದೆ. ಸರ್ಕಾರ ನಿಯಮವನ್ನು ಉಲ್ಲಂಘಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ಮಾಡುವವರಿಗೆ ಬಾರಿ ದಂಡದ ಜೊತೆಗೆ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಲು ಸರ್ಕಾರ ನಿರ್ಧರಿಸಿದೆ.

Join Nadunudi News WhatsApp Group

Join Nadunudi News WhatsApp Group