Computer Literacy Test: ಸರ್ಕಾರೀ ನೌಕರರಿಗೆ ಇನ್ನೊಂದು ಬಂಪರ್ ಗುಡ್ ನ್ಯೂಸ್, ಈ ಪರೀಕ್ಷೆಯಲ್ಲಿ ಪಾಸ್ ಆದರೆ ಸಿಗಲಿದೆ ಪ್ರೋತ್ಸಾಹ ಧನ.

ಸರ್ಕಾರೀ ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸ್ ಆದರೆ ಅವರಿಗೆ ಸಿಗಲಿದೆ ಪ್ರೋತ್ಸಾಹ ಧನ

Computer Literacy Test: ರಾಜ್ಯ ಸರ್ಕಾರ ಸರ್ಕಾರೀ ನೌಕರರಿಗೆ ಸಾಕಷ್ಟು ಸೌಲಭ್ಯವನ್ನು ಒದಗಿಸುತ್ತಿದೆ. ನೌಕರರು ಸರ್ಕಾರದ ಸೌಲಭ್ಯದ ಲಾಭವನ್ನು ಪಡೆಯುತ್ತಿದ್ದಾರೆ. ಇದೀಗ ರಾಜ್ಯ ಸಾರ್ಕಾರದಿಂದ ಸರ್ಕಾರೀ ನೌಕರಿಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. CLT ಪರೀಕ್ಷೆಗೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರ ನೌಕರರಿಗೆ ಸಿಹಿ ಸುದ್ದಿ ನೀಡಿದೆ.

Computer Literacy Test
Image Credit: Devicetests

ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ
ಮುಂಬಡ್ತಿ ಮತ್ತು ವಾರ್ಷಿಕ ವೇತನ ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ (CLT EXAM) ಉತ್ತೀರ್ಣರಾಗಬೇಕು ಎಂದು ಈ ಹಿಂದೆ ಸರ್ಕಾರ ಹೇಳಿತ್ತು. ಸದ್ಯ ಇದಕ್ಕೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆ ತರಲಾಗಿದೆ. Computer ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ನೌಕರರಿಗೆ ಪ್ರೋತ್ಸಾಹಧನ ನೀಡಲು ಸರಕಾರ ಸಿದ್ಧವಿದೆ. ಈ ಮೂಲಕ ರಾಜ್ಯ ಸರ್ಕಾರ ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.

Computer ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ನೌಕರರಿಗೆ ಸಿಗಲಿದೆ 5000
ಸದ್ಯ ರಾಜ್ಯ ಸರ್ಕಾರ Computer ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ನೌಕರರಿಗೆ 5000 ಸಹಾಯಧನ ನೀಡಲು ಮುಂದಾಗಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಸೇವಾನಿರತ ಸರ್ಕಾರಿ ನೌಕರರಿಗೆ ಮಾತ್ರ ಪ್ರೋತ್ಸಾಹಧನದ ಸೌಲಭ್ಯ ಅನ್ವಯಿಸುತ್ತದೆ. ಸರ್ಕಾರದ ಆದೇಶದಂತೆ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ಜಾರಿಗೆ ಬಂದ ದಿನಾಂಕ 22.03.2012 ರ ಮೊದಲು ನೇಮಕಗೊಂಡ ಮತ್ತು 17.04.2021 ರೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಸರ್ಕಾರಿ ನೌಕರರಿಗೆ ಸಹಾಯಧನ ಲಭ್ಯವಾಗಲಿದೆ.

Computer Literacy Test For Government Employees
Image Credit: Telegraphindia

ಮೊದಲ ಕಂತಿನ ಹಣ ಬಿಡುಗಡೆಗೆ ಸರ್ಕಾರದ ಆದೇಶ
ಕ್ರಮಾಂಕ (02) ಸರ್ಕಾರದ ಅನುದಾನ ಬಿಡುಗಡೆ ಆದೇಶದಲ್ಲಿ, ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರೋತ್ಸಾಹಧನ ಪಾವತಿಗಾಗಿ 2023 -24 ಸಾಲಿನ ಆಯವ್ಯಯ ಲೆಕ್ಕ ಶೀರ್ಷಿಕೆ 2202-03-103-2-01 238 ಸರ್ಕಾರೀ ಕಾಲೇಜುಗಳು 051 ಸಾಮಾನ್ಯ ವೆಚ್ಚದಡಿ ರೂ. 223 .65 ಲಕ್ಷಗಳು ಬಿಡುಗಡೆಯಾಗಿದ್ದು, ಸದರಿ ಅನುದಾನದಳು ರೂ. 192 .40 ಲಕ್ಷ ರೂ. ಗಳನ್ನೂ ಮೊದಲನೇ ಕಂತಿನಲ್ಲಿ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದೆ.

Join Nadunudi News WhatsApp Group

Join Nadunudi News WhatsApp Group