Anna Bhagya: ಜೂನ್ 20 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ, ರೇಷನ್ ಅಕ್ಕಿ ಬೇಕಾದವರು ಭಾಗವಹಿಸಿ.

ಕೇಂದ್ರ ಸರ್ಕಾರ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಆಡ್ಡಿ ಮಾಡುತ್ತಿರುವ ಕಾರಣ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಕರೆ ನೀಡುತ್ತಿದೆ.

D.K Shivakumar About Anna Bhagya: ಕರ್ನಾಟಕ ವಿಧಾನಸಭಾ ಚುನಾವಣಾ ವೇಳೆಯಲ್ಲಿ ಕಾಂಗ್ರೆಸ್ (Congress) ಐದು ಭರವಸೆಗಳನ್ನು ನೀಡಿತ್ತು. ಈ ಯೋಜನೆಗಳ ಅನುಷ್ಠಾನದ ಕುರಿತು ಜನಸಾಮಾನ್ಯರು ಕುತೂಹಲರಾಗಿದ್ದಾರೆ. ರಾಜ್ಯದಲ್ಲಿ ಇದೀಗ ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಬಾರಿ ಚರ್ಚೆ ನಡೆಯುತ್ತಿದೆ. ಈಗಾಗಲೇ ರಾಜ್ಯದಲ್ಲಿ ಜೂನ್ 11 ರಿಂದ ಶಕ್ತಿ ಯೋಜನೆ ಜಾರಿಯಾಗಿದೆ.

ಇನ್ನು ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇನ್ನು ರಾಜ್ಯದಲ್ಲಿ ಅನ್ನ ಭಾಗ್ಯ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ. ಆದರೆ ಇದೀಗ ಕೇಂದ್ರ ಸರ್ಕಾರ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಆಡ್ಡಿ ಮಾಡುತ್ತಿದೆ. ಈ ಕಾರಣಕ್ಕೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಕರೆ ನೀಡುತ್ತಿದೆ. 

Congress is preparing to implement Annabhagya Yojana in the state
Image Credit: thesouthfirst

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲು ಕಾಂಗ್ರೆಸ್ ಸಿದ್ಧತೆ
ಇನ್ನು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಒಂದೊಂದೇ ಯೋಜನೆಗಳನ್ನು ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ. ಇನ್ನು ಅನ್ನಭಾಗ್ಯ ಯೋಜನೆಯ ಅನುಷ್ಠಾನದ ಕುರಿತು ಸರ್ಕಾರ ಸಾಕಷ್ಟು ತೀರ್ಮಾನವನ್ನು ಕೈಗೊಂಡಿದೆ. ಪಡಿತರ ಚೀಟಿದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ಉಚಿತವಾಗಿ ನೀಡುವ ಕುರಿತು ಘೋಷಣೆ ಹೊರಡಿಸಿದೆ.

ಜೂನ್ 20 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿಯನ್ನು ನಿಡಲು ಕಾಂಗ್ರೆಸ್ ಎಫ್ ಸಿಐ ಗೆ ಮನವಿ ಮಾಡಿದ್ದೂ, ಎಫ್ ಸಿಐ ಈ ಬಗ್ಗೆ ಒಪ್ಪಿಗೆ ನೀಡಿದೆ. ಆದರೆ ಕೇಂದ್ರ ಸರ್ಕಾರ ಅಕ್ಕಿ ವಿತರಣೆಯನ್ನು ನಿರಾಕರಿಸಿದೆ. ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಕಾಂಗ್ರೆಸ್ ಜನತೆಗೆ ಕರೆ ನೀಡಿದೆ. ಈ ಬಗ್ಗೆ ಕೆಪಿಸಿಸಿ ಸಭೆಯಲ್ಲಿ ಡಿ. ಕೆ ಶಿವಕುಮಾರ್ ಮಾತನಾಡಿದ್ದಾರೆ.

Congress is preparing to implement Annabhagya Yojana in the state
Image Credit: indiatoday

ಸರ್ಕಾರದ ಪತ್ರಕ್ಕೆ ಸ್ಪಂದಿಸಿದ್ದಂತ ಎಫ್ ಸಿಐ ಬೇಕಿರುವ ಅಕ್ಕಿ ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿತ್ತು. ಆದರೆ ಆ ಬಳಿಕ ಕೇಂದ್ರ ಸರ್ಕಾರ ರಾಜಕೀಯ ಮಾಡಿ ಅಕ್ಕಿ ನೀಡದಂತೆ ಹೇಳಿದೆ. ಬಡವರ ಹೊಟ್ಟೆಯ ಮೇಲೆ ಹೊಡೆಯುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.

Join Nadunudi News WhatsApp Group

ಕೇಂದ್ರ ಸರ್ಕಾರದ ದ್ವೇಷ ರಾಜಕಾರಣಕ್ಕೆ ಉದಾಹರಣೆಯಾಗುತ್ತಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಮಾತನಾಡಿದ್ದಾರೆ.

Join Nadunudi News WhatsApp Group