Congress Guarantee: ಕಾಂಗ್ರೆಸ್ ಮೂರೂ ಗ್ಯಾರೆಂಟಿಗಳು ಯೋಜನೆಗಳು ರದ್ದು, ಇನ್ನುಮುಂದೆ ಸಿಗಲ್ಲ ಬಿಟ್ಟಿ ಭಾಗ್ಯ.

ಕಾಂಗ್ರೆಸ್ ಮೂರೂ ಗ್ಯಾರೆಂಟಿಗಳು ಯೋಜನೆಗಳು ರದ್ದು

Congress Guarantee Close New Update: ಸದ್ಯ ದೇಶದಲ್ಲಿ ಮೂರನೇ ಬಾರಿ ನರೇಂದ್ರ ಮೋದಿ ಅವರು ಪ್ರಧಾನಿ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಈ ಬಾರಿ ಕೂಡ ಕೇಂದ್ರದಲ್ಲಿ ಅಧಿಕಾರವನ್ನು ಪಡೆಯುವ ಅವಕಾಶವನ್ನು ಕಾಂಗ್ರೆಸ್ ಕಳೆದುಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿಯನ್ನು ನೀಡುತ್ತಿದ್ದರು ಕೂಡ ಕರ್ನಾಟಕದಲ್ಲಿ ಕಾಂಗೆಸ್ಸ್ ಗೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.

ಈ ಕಾರಣಕ್ಕೆ ಕಾಂಗ್ರೆಸ್ ರಾಜ್ಯದಲ್ಲಿ ಉಚಿತ ಗ್ಯಾರಂಟಿಗಳನ್ನು ಬಂದ್ ಮಾಡುತ್ತಿದೆ ಎನ್ನುವ ಬಗ್ಗೆ ಸದ್ಯ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಉಚಿತ ಗ್ಯಾರಂಟಿಯನ್ನು ಬಂದ್ ಮಾಡುವ ಬಗ್ಗೆ ಸುದ್ದಿ ವ್ಯಾಪಕವಾಗಿ ಹರಡುತ್ತಿದೆ. ಕಾಂಗ್ರೆಸ್ ಮೂರೂ ಗ್ಯಾರೆಂಟಿ ಯೋಜನೆಗಳು ರದ್ದಾಗುವ ಬಗ್ಗೆ ವರದಿಯಾಗಿದೆ.

Congress Guarantee Latest Update
Image Credit: India TV News

ಕಾಂಗ್ರೆಸ್ ಮೂರೂ ಗ್ಯಾರೆಂಟಿಗಳು ಯೋಜನೆಗಳು ರದ್ದು
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಾಧ್ಯವಾಗದ ಕೆಲ ಸಚಿವರು, ಗ್ಯಾರಂಟಿ ಯೋಜನೆಗಳು ಇದಕ್ಕೆ ಫಲ ನೀಡಲಿಲ್ಲ ಎಂಬ ಅಚ್ಚರಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಲ್ಲದೆ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮುಚ್ಚಲಾಗುವುದು ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದರು. ಈಗ ಕಾಂಗ್ರೆಸ್ ನಾಯಕರ ಈ ಹೇಳಿಕೆಗಳು ಗ್ಯಾರಂಟಿ ಯೋಜನೆಗಳು ಮುಚ್ಚಿಹೋಗುವ ಅನುಮಾನವನ್ನು ಹುಟ್ಟುಹಾಕುತ್ತಿವೆ. ರಾಜ್ಯದಲ್ಲಿ ಮೂರು ಗ್ಯಾರಂಟಿ ಯೋಜನೆಗಳು ರದ್ದಾಗುವುದು ಖಚಿತ ಎನ್ನಲಾಗುತ್ತಿದೆ.

ಇನ್ನುಮುಂದೆ ಸಿಗಲ್ಲ ಬಿಟ್ಟಿ ಭಾಗ್ಯ
ಲೋಕಸಭೆ ಚುನಾವಣೆಗೆ ನಾವು ನೀಡಿದ ಐದು ಗ್ಯಾರಂಟಿ ಯೋಜನೆಗಳು ಕೈಹಿಡಿಯಲಿಲ್ಲ. ಕಡಿಮೆ ಕ್ಷೇತ್ರಗಳಲ್ಲಿ ಗೆಲ್ಲಿಸಿರುವ ಜನರಿಗೆ ಗ್ಯಾರಂಟಿ ಯೋಜನೆಗಳು ಅಗತ್ಯವಿಲ್ಲ ಎಂದು ಜನರು ನಿರ್ಧರಿಸಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಸಚಿವರ ಈ ಹೇಳಿಕೆಯು ರಾಜ್ಯದಲ್ಲಿ ಉಚಿತ ಗ್ಯಾರಂಟಿ ಬಂದ್ ಆಗುವ ಭೀತಿಯನ್ನು ಹೆಚ್ಚಿಸಿದೆ. ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳು ಬೇಡವಾಗಿರಬಹುದು. ಅದಕ್ಕಾಗಿಯೇ ಕಾಂಗ್ರೆಸ್ ವಿರುದ್ಧ ಮತ ಹಾಕಿದ್ದಾರೆ.. ಸರ್ಕಾರಕ್ಕೆ ಹೊರೆಯಾಗುವ ಗ್ಯಾರಂಟಿ ಯಾಕೆ ಬೇಕು ಎಂಬ ಅಭಿಪ್ರಾಯ ಕಾಂಗ್ರೆಸ್ ನ ಕೆಲ ಶಾಸಕರು ವ್ಯಕ್ತಪಡಿಸುತ್ತಿದ್ದಾರೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

Join Nadunudi News WhatsApp Group

Congress Guarantee Close
Image Credit: India Today

ಗ್ಯಾರಂಟಿಗೆ ಹಣ ಹೊಂದಿಸಲು ಶಾಸಕರು ಅನುದಾನಕ್ಕೆ ಕೊಕ್ಕೆ ಹಾಕಿದ್ದಾರೆ. ಒಂದು ವರ್ಷದಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಬೇರೆ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಜನರೂ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸರ್ಕಾರಕ್ಕೆ ಹೊರೆಯಾಗಿರುವ ಮೂರು ಯೋಜನೆಗಳನ್ನು ರದ್ದು ಮಾಡುವಂತೆ ಶಾಸಕರು ಪಟ್ಟು ಹಿಡಿದಿದ್ದಾರೆ. ಆದರೆ ಈ ಬಗ್ಗೆ ಯಾರೂ ಅಧಿಕೃತವಾಗಿಲ್ಲ ಹೇಳಿಕೆ ನೀಡಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಈ ಯೋಜನೆಗಳನ್ನು ನಿಲ್ಲಿಸಲು ಒಪ್ಪಿಕೊಳ್ಳುವುದು ಸಹ ಕಷ್ಟ ಎನ್ನಲಾಗುತ್ತಿದೆ.

Congress Guarantee Close New Update
Image Credit: Hindustantimes

Join Nadunudi News WhatsApp Group