Ads By Google

Guarantee Scheme: ಉಚಿತ ಯೋಜನೆಗಳಿಗೆ ಸರ್ಕಾರ ಇಲ್ಲಿಯ ತನಕ ಮಾಡಿದ ಖರ್ಚು ಎಷ್ಟು ಗೊತ್ತಾ…? ಇಲ್ಲಿದೆ ಲೆಕ್ಕಾಚಾರ

free scheme expenses in karnataka

Image Credit: Original Source

Ads By Google

Congress Guarantee Scheme Expenditure: ಸದ್ಯ ರಾಜ್ಯ ಸರ್ಕಾರ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸುವ ಮೂಲಕ ರಾಜ್ಯದ ಜನತೆಗೆ ಸಕಷು ಪ್ರಯೋಜನವನ್ನು ನೀಡಿದೆ. ರಾಜ್ಯ ಸರ್ಕಾರದಿಂದ ಈಗಾಗಲೇ ಐದು ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ.

ವಿಧಾನಸಭಾ ಚುನಾವಣೆಯ ವೇಳೆ ಘೋಷಿಸಿರುವಂತೆ ಐದು ಗ್ಯಾರಂಟಿ ಯೋಜನೆಗಳು ಕೂಡ ರಾಜ್ಯದಲ್ಲಿ ಅನುಷ್ಠಾನಗೊಂಡಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿಕೊಂಡಿರುವ ಕಾರಣ ಜನರು ಕಾಂಗ್ರೆಸ್ ಸರ್ಕಾರದ ವಿರುದ್ದ ಟೀಕೆ ವ್ಯಕ್ತಪಡಿಸುತ್ತಿಲ್ಲ. ಸದ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಕಾರ್ಮಿಕ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Image Credit: Aninews

ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ 58000 ಕೋಟಿ ಖರ್ಚು
ರಾಜ್ಯ ಸರಕಾರ ಜಾರಿಗೊಳಿಸಿರುವ ಐದು ಖಾತರಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ನಮ್ಮ ಸರ್ಕಾರ ಇರುವವರೆಗೂ ಎಲ್ಲ ವರ್ಗದ ಜನರಿಗೆ ಖಾತರಿ ಯೋಜನೆಗಳನ್ನು ತಲುಪಿಸುತ್ತೇವೆ. ರಾಜ್ಯ ಸರ್ಕಾರದ ಬೊಕ್ಕಸದಿಂದ 58,000 ಕೋಟಿ ರೂ. ಗಳನ್ನು ಖಾತರಿ ಯೋಜನೆಗಳಿಗೆ ಖರ್ಚು ಮಾಡಲಾಗಿದೆ. ನಮ್ಮ ರಾಜ್ಯ ಸರ್ಕಾರವು ದೇಶದಾದ್ಯಂತ ಉಚಿತ ಐದು ಖಾತರಿ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಶಾಸಕರು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಖಾತ್ರಿ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಇತರೆ ಕಾರ್ಯಕ್ರಮಗಳ ಕುರಿತು ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ. ಎಲ್ಲ ಅರ್ಹರು ಕೂಡ ಯೋಜನೆಯ ಲಾಭ ಪಡೆಯಬೇಕ್ಕೆನ್ನುವುದು ಸರ್ಕಾರದ ಉದ್ದೇಶ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಹೇಳಿಕೆ ನೀಡಿದ್ದಾರೆ.

Ads By Google
Pushpalatha Poojari: Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in