Congress Guarantee: ಈ ಬಡ ಕುಟುಂಗಳಿಗೆ ಪ್ರತಿ ತಿಂಗಳು 5000 ರೂ, ಕಾಂಗ್ರೆಸ್ ಸರ್ಕಾರದಿಂದ ಇನ್ನೊಂದು ಘೋಷಣೆ.

ಈ ಬಡ ಕುಟುಂಗಳಿಗೆ ಪ್ರತಿ ತಿಂಗಳು 5000 ರೂಪಾಯಿ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಹೊರಡಿಸಿದೆ.

Congress Latest Guarantee Update: ಸದ್ಯ ಕರ್ನಾಟಕದಲ್ಲಿ Congress ಸರ್ಕಾರ ಮೇ 2023 ರಿಂದ ತನ್ನ ಅಧಿಕಾರವನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಸಮಯದಲ್ಲಿ ವಿವಿಧ ಪಕ್ಷಗಳ ನಡುವೆ ಪೈಪೋಟಿ ಜೋರಾಗಿಯೇ ನಡೆದಿತ್ತು. ಈ ವೇಳೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಮತವನ್ನು ಪಡೆಯಲು ಉಚಿತ ಗ್ಯಾರಂಟಿಗಳ ಆಮಿಷವನ್ನು ಒಡ್ಡಿತ್ತು.

ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ಮೇಲೆ ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬೆಂಲವನ್ನು ನೀಡಿದ್ದರು. ಇನ್ನು ಚುನಾವಣೆ ಗೆದ್ದ ನಂತರ ಕಾಂಗ್ರೆಸ್ ಸರ್ಕಾರ ಘೋಷಿಸಿರುವಂತೆ ರಾಜ್ಯದಲ್ಲಿ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸದ್ಯ ಕಾಂಗ್ರೆಸ್ ಸರ್ಕಾರ ಹೊಸ ಯೋಜನೆಯನ್ನು ಪರಿಚಯಿಸಿದೆ.

Congress Latest Guarantee Update
Image Credit: Hindustantimes

ಕಾಂಗ್ರೆಸ್ ಸರ್ಕಾರದಿಂದ ಇನ್ನೊಂದು ಘೋಷಣೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎನ್ನಬಹುದು. ಇನ್ನು ಕಾಂಗ್ರೆಸ್ ತನ್ನ ಅಧಿಕಾರವನ್ನು ಪಡೆದುಕೊಳ್ಳಲು ಮುಖ್ಯ ಕಾರಣವೆಂದರೆ ಉಚಿತ ಗ್ಯಾರಂಟಿ ಯೋಜನೆಗಳಾಗಿವೆ. ಇದೀಗ ಬೇರೆ ರಾಜ್ಯದಲ್ಲಿ ಕೂಡ ಕೂಡ ಈ ಉಚಿತ ಗ್ಯಾರಂಟಿ ಅಸ್ತ್ರವನ್ನು ಬಳಸಿಕೊಂಡು ಅಧಿಕಾರವನ್ನು ಪಡೆಯುವ ಪ್ಲಾನ್ ನಡೆಯುತ್ತಿದೆ.

ಸದ್ಯ ಆಂದ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರ ಜೋರಾಗಿಯೇ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯ ಮುನ್ನವೇ ಕಾಂಗ್ರೆಸ್ ಸರ್ಕಾರ ಯೋಜನೆಯ ಸುರಿಮಳೆ ಸುರಿಸಿದ್ದಾರೆ ಎನ್ನಬಹುದು.

Mallikarjun Kharge Latest News
Image Credit: Hindustan Times

ಈ ಬಡ ಕುಟುಂಗಳಿಗೆ ಪ್ರತಿ ತಿಂಗಳು 5000 ರೂ.
ಸದ್ಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರವನ್ನು ಪಡೆದುಕೊಳ್ಳಲು ಕಾಂಗ್ರೆಸ್ ಇದೀಗ ಉಚಿತ ಗ್ಯಾರಂಟಿ ಘೋಷಣೆ ಮಾಡಿದೆ. ಅರ್ಹ ಬಡ ಕುಟುಂಬಗಳಿಗೆ ಪ್ರತಿ ತಿಂಗಳು 5000 ರೂ. ನೀಡುವುದಾಗಿ ಘೋಷಿಸಿದೆ. ಅನಂತಪುರದಲ್ಲಿ ನಡೆದ ‘ನ್ಯಾಯ ಸಾಧನಾ ಸಭೆ’ ಎಂಬ ಮಹಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿ ಬಡ ಕುಟುಂಬಕ್ಕೆ ಮಾಸಿಕ 5 ಸಾವಿರ ರೂ.ಗಳ ಮೊದಲ ಗ್ಯಾರಂಟಿಯನ್ನು ಘೋಷಿಸಿದರು.

Join Nadunudi News WhatsApp Group

‘ಇಂದಿರಮ್ಮ ಸಾರ್ವತ್ರಿಕ ಮೂಲ ಆದಾಯ ಬೆಂಬಲ’ ಹೆಸರಿನಲ್ಲಿ ಪ್ರತಿ ತಿಂಗಳು ಮನೆ ಮಾಲೀಕರ ಖಾತೆಗೆ ನೇರವಾಗಿ 5,000 ರೂ. ಠೇವಣಿ ನಿಡುದಾಗಿ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಆಂದ್ರಪ್ರದೇಶದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ಪಡೆದುಕೊಂಡರೆ, ಅರ್ಹ ಪ್ರತಿ ಕುಟುಂಬವು ಮಾಸಿಕ 5000 ಹಣವನ್ನು ಪಡೆಯಬಹುದಾಗಿದೆ.

Join Nadunudi News WhatsApp Group