Shri Shakti: ಇಂತಹ ಮಹಿಳೆಯರಿಗೆ ಮಾತ್ರ ಬಸ್ಸಿನಲ್ಲಿ ಉಚಿತ ಪ್ರಯಾಣ ಸೌಲಭ್ಯ, ಕಾಂಗ್ರೆಸ್ ಗ್ಯಾರೆಂಟಿ ಕಂಡೀಶನ್.
ರಾಜ್ಯದ ಎಲ್ಲಾ ಮಹಿಳೆಯರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯಗಳನ್ನು ನೀಡುವ ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.
Congress guarantee For Ladies: ನಿನ್ನೆ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಕಾಂಗ್ರೆಸ್ ನ ಸರ್ಕಾರ ರಚನೆ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆದಿದೆ. ಸಿದ್ದರಾಮಯ್ಯ (Siddaramaiah) ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ.
ಗ್ಯಾರೆಂಟಿ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನರಿಗೆ 5 ಪ್ರಮುಖ ಗ್ಯಾರೆಂಟಿಗಳನ್ನು ನೀಡಿದ್ದೆವು. ಜನತೆ ನಮ್ಮ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ಇಂದು ನಾವು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಲ್ಲದೆ ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಐದು ಗ್ಯಾರೆಂಟಿಗಳಿಗೆ ಅನುಮೋದನೆ ನೀಡುವ ವಚನ ನೀಡಿದ್ದೆ,ಇಂದು ಕೊಟ್ಟ ಮಾತಿನಂತೆ ಪ್ರಥಮ ಸಂಪುಟ ಸಭೆಯಲ್ಲಿ ನಮ್ಮ ಎಲ್ಲಾ ಗ್ಯಾರೆಂಟಿಗಳಿಗೆ ತಾತ್ವಿಕ ಅನುಮೋದನೆ ನೀಡಿ ಮತ್ತೊಮ್ಮೆ ನುಡಿದಂತೆ ನಡೆದಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಶಕ್ತಿ ಯೋಜನೆ ಜಾರಿಗೆ ತಂದ ಸರ್ಕಾರ
ಇದೇ ವೇಳೆ ಸರ್ಕಾರದ ಆದೇಶ ಪತ್ರವನ್ನು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ರಾಜ್ಯದ ಎಲ್ಲಾ ಮಹಿಳೆಯರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯಗಳನ್ನು ನೀಡುವ ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮೇ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಕ್ತಿ ಯೋಜನೆಯ ಬಗ್ಗೆ ವಿವರವಾದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ. ಐದು ಗ್ಯಾರೆಂಟಿಗಳಿಗೆ ಸರ್ಕಾರದಿಂದ ಆದೇಶ ಹೊರಬಿದ್ದಿದ್ದು ಗ್ಯಾರೆಂಟಿ ಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.