Crop Compensation: ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್, ಈ ರೈತರ ಖಾತೆಗೆ 22500 ರೂ ಜಮಾ.

ಈ ರೈತರ ಖಾತೆಗೆ ಬೆಳೆ ಪರಿಹಾರ ಮೊತ್ತ ಜಮಾ, ಈ ರೈತರ ಖಾತೆಗೆ ಜಮಾ

Crop Compensation Amount Release: ಮಳೆಯ ಕೊರತೆಯಿಂದ ರೈತರು ಬೆಳೆ ಹಾನಿ ಸಮಸ್ಯೆಯನ್ನು ಎದುರಿಸಿದ್ದಾರೆ. ಸರಿಯಾದ ಸಮಯದಲ್ಲಿ ಮಳೆ ಬಾರದ ರೈತರ ಬೆಳೆ ಎಲ್ಲವು ನಾಶವಾಗಿದ್ದು, ರೈತರು ಹೆಚ್ಚಿನ ಸಮಸ್ಯೆಯನ್ನು ಎದುರಿಸಬೇಕಾಗಿತ್ತು. ಬರ ಪರಿಸ್ಥಿತಿಯಿಂದ ಇನ್ನು ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರವನ್ನು ಕೂಡ ಘೋಷಿಸಿದೆ. ಸದ್ಯ ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ. ರೈತರ ಖಾತೆಗೆ ಬೆಳೆ ಪರಿಹಾರ ಮೊತ್ತ ಜಮಾ ಆಗಲಿದೆ.

Crop Compensation Amount Release
Image Credit: Khetivyapar

ರಾಜ್ಯದ ರೈತರಿಗೆ ಗುಡ್ ನ್ಯೂಸ್
2023 ರಲ್ಲಿ ಮುಂಗಾರು ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅಥವಾ SDRF/NDRF ಮಾರ್ಗಸೂಚಿಗಳ ಪ್ರಕಾರ ಬೆಳೆ ಹಾನಿ ಪರಿಹಾರವಾಗಿ ಪ್ರತಿ ರೈತರಿಗೆ ಗರಿಷ್ಠ 2000 ರೂ. ವರೆಗೆ ರೈತರಿಗೆ ಪಾವತಿಸಲು ಸರ್ಕಾರ ಅನುಮತಿ ನೀಡಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಹೆಚ್ಚುವರಿ ಮೊತ್ತಕ್ಕೆ ಅರ್ಹರಾಗಿರುವ ರೈತರಿಗೆ ಹೆಚ್ಚುವರಿ ಬೆಳೆ ನಷ್ಟ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು.

ರೈತರ ಬ್ಯಾಂಕ್ ಖಾತೆಗೆ ಬೆಳೆ ಪರಿಹಾರ ಮೊತ್ತ ಜಮಾ
ಬರ ಪರಿಸ್ಥಿತಿಯಿಂದ ಶೇ.33ಕ್ಕಿಂತ ಹೆಚ್ಚಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಗರಿಷ್ಠ 02 ಹೆಕ್ಟೇರ್‌ ಗೆ ಸೀಮಿತಗೊಳಿಸಿದರೆ, ಮಳೆಯಾಶ್ರಿತ ಬೆಳೆಗೆ ಹೆಕ್ಟೇರ್‌ ಗೆ 8,500 ರೂ., ನೀರಾವರಿ ಬೆಳೆಗೆ ಹೆಕ್ಟೇರ್‌ ಗೆ 17,000 ರೂ. ಮತ್ತು ಬಹುವಾರ್ಷಿಕ ಬೆಳೆಗೆ ಹೆಕ್ಟೇರ್‌ ಗೆ 22,500 ರೂ. ನಿಗದಿಪಡಿಸಲಾಗಿದೆ.

Crop Compensation New Update
Image Credit: TV9hindi

ಡಿಜಿಟಲ್ ಬೆಳೆ ಸಮೀಕ್ಷೆ ಮಾಹಿತಿ ಮತ್ತು ಎಫ್‌ಐಡಿ ಹೊಂದಿರುವ ರೈತರ ಮಾಹಿತಿ ಆಧರಿಸಿ, ಮುಂಗಾರು ಮಳೆಯ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ಗರಿಷ್ಠ 2000 ರೂ.ಗಳಂತೆ ಮೊದಲ ಹಂತದಲ್ಲಿ 65170 ರೈತರಿಗೆ ಒಟ್ಟು 1161.40 ಲಕ್ಷ ರೂ.ಗಳ ಇನ್‌ ಪುಟ್ ಸಬ್ಸಿಡಿ ಮೊತ್ತವನ್ನು ಠೇವಣಿ ಮಾಡಲಾಗುವುದು. ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಮೇ 2 ರಂದು ಒಟ್ಟು 40810 ರೈತರಿಗೆ 2038.91 ಲಕ್ಷ ರೂ.ಗಳ ಇನ್‌ ಪುಟ್ ಸಬ್ಸಿಡಿ ಹೆಚ್ಚುವರಿ ಮೊತ್ತವನ್ನು ಜಮಾ ಮಾಡಲು ಅನುಮೋದನೆ ನೀಡಲಾಯಿತು. ಪರಿಹಾರದ ಹಣವನ್ನು ಸರ್ಕಾರವು ನೇರವಾಗಿ ಆಧಾರ್ ಸಂಖ್ಯೆ ಲಿಂಕ್ ಆಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದೆ.

Crop Compensation Amount
Image Credit: Newsmeter

Join Nadunudi News WhatsApp Group

Join Nadunudi News WhatsApp Group