D.K Shivakumar: ಕಾಂಗ್ರೆಸ್ ಗ್ಯಾರೆಂಟಿಗಳಿಗೆ ಕಂಡೀಷನ್ ಇರುತ್ತಾ…? ಸ್ಪಷ್ಟನೆ ನೀಡಿದ ಡಿ.ಕೆ ಶಿವಕುಮಾರ್.
ಕಾಂಗ್ರೆಸ್ ನೀಡಿದ ಎಲ್ಲಾ ಭರವಸೆಗಳನ್ನ ಈಡೇರಿಸುತ್ತದೆ ಎಂದು ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
D.K Shivakumar About Congress Guarantee: ಈ ಬಾರಿ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಬರೋಬ್ಬರಿ 135 ಸ್ಥಾನಗಳನ್ನು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ (Congress) ಸರ್ಕಾರ ಅಧಿಕಾರವನ್ನು ಪಡೆದಿದೆ. ಪ್ರಚಾರ ವೇಳೆ ಕಾಂಗ್ರೆಸ್ ಸರ್ಕಾರ ಜನತೆಗೆ ಐದು ಭರವಸೆಗಳನ್ನು ನೀಡುತ್ತು. ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಎನ್ನುವ ಕಾರಣ ಜನತೆ ಕೈ ಗೆ ಬೆಂಬಲವನ್ನು ನೀಡಿದರು.
ಇದೀಗ ಹೊಸ ಸರ್ಕಾರದ ಭರವಸೆಗಳ ಲಭ್ಯತೆಯ ಬಗ್ಗೆ ಕರ್ನಾಟಕದ ಜನತೆ ಕುತೂಹಲರಾಗಿದ್ದಾರೆ. ಈಗಾಗಲೇ ಕಾಂಗ್ರೆಸ್ ನ ಭರವಸೆಗಳ ಈಡೇರಿಕೆಯ ಬಗ್ಗೆ ಸಾಕಷ್ಟು ಅಪ್ಡೇಟ್ ಗಳು ಹೊರಬಿದ್ದಿವೆ. ಇದೀಗ ಡಿ ಕೆ ಶಿವಕುಮಾರ್ (D.K Shivakumar) ಕಾಂಗ್ರೆಸ್ ನ ಐದು ಭರವಸೆಯ ಬಗ್ಗೆ ಮಾತನಾಡಿದ್ದಾರೆ.
ಕಾಂಗ್ರೆಸ್ ನ ಐದು ಭರವಸೆಗಳ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್ ಅವರು ಮಾತನಾಡುವ ವೇಳೆ ಕಾಂಗ್ರೆಸ್ ಸರ್ಕಾರ ಬರಲು ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಇನ್ನು ನಾಳೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರಚನೆಯಾಗಲಿದೆ, ರಾಜ್ಯದ ಜನತೆಗೆ ನಾವು ಬದ್ಧರಾಗಿರುತ್ತೇವೆ ಎಂದಿದ್ದಾರೆ.
ಇದೆ ವೇಳೆ ಕಾಂಗ್ರೆಸ್ ನ ಐದು ಗ್ಯಾರೆಂಟಿಗಳ ಬಗ್ಗೆ ಸಹ ಮಾತನಾಡಿದ್ದಾರೆ. ಮೊದಲ ಕ್ಯಾಬಿನೆಟ್ ದಿನವೇ ನಾವು ಎಲ್ಲ ಗ್ಯಾರೆಂಟಿಗಳನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇನ್ನು ನಾಳೆ ನಡೆಯಲಿರುವ ಸರ್ಕಾರ ರಚನೆ ಸಭೆಗೆ ರಾಜ್ಯ ಜನತೆಗೆ ಡಿ ಕೆ ಶಿವಕುಮಾರ್ ಆಹ್ವಾನಿಸಿದ್ದಾರೆ.