D.K Shivakumar: ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ ಡಿ.ಕೆ ಶಿವಕುಮಾರ್, ಬೇಕಿದೆ ಸಿದ್ದರಾಮಯ್ಯ ಸಹಕಾರ.

ನಾನು ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯ ಸಹಕಾರ ನೀಡುತ್ತಾರೆ ಎಂದು ಡಿ.ಕೆ ಶಿವಕುಮಾರ್ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.

D.k Shivakumar And Siddaramaiah: ಕರ್ನಾಟಕ ವಿಧಾನಸಭಾ ಚುನಾವಣೆ (Assembly Election) ಮುಗಿದಿದ್ದು ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ತನ್ನ ಅಧಿಕಾರವನ್ನು ಗಿಟ್ಟಿಸಿಕೊಂಡಿದೆ. ಇನ್ನು ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎನ್ನುವುದು ರಾಜ್ಯದ ಜನತೆಯಲ್ಲಿ ಕುತೂಹಲ ಮೂಡಿಸಿದೆ.

ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.k Shivakumar) ಅವರು ಇದೀಗ ಮುಖ್ಯಮಂತ್ರಿ (Chief Minister) ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ (Siddaramaiah) ಸಹಕಾರ ನೀಡುತ್ತಾರೆ ಎಂದು ಪರೋಕ್ಷವಾಗಿ ಡಿಕೆಶಿ ಹೇಳಿಕೆ ನೀಡಿದ್ದಾರೆ.

DK Shivakumar expressed his wish to become the Chief Minister
Image Credit: economictimes

ಮುಖ್ಯಮಂತ್ರಿ ಆಗುವ ಅಸೆ ವ್ಯಕ್ತಪಡಿಸಿದ ಡಿ ಕೆ ಶಿವಕುಮಾರ್
ಇದೀಗ ಕಾಂಗ್ರೆಸ್ ಮುಖಂಡರು ತಮ್ಮ ಪಕ್ಷದ ಗೆಲುವಿನ ಸಂತಸದಲ್ಲಿದ್ದಾರೆ. ಇನ್ನು ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ಬಗ್ಗೆ ಜನರು ಕುತೂಹಲರಾಗಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನಡುವೆ ಮುಖ್ಯಮಂತ್ರಿ ಸಿಟಿಗೆ ಪೈಪೋಟಿ ನಡೆಯುತ್ತಿದೆ.ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅಜ್ಜಯ್ಯನ ದರ್ಶನ ಪಡೆದು ಮುಖ್ಯಮಂತ್ರಿ ಆಗುವ ಬಗ್ಗೆ ಆಸೆ ವ್ಯಕ್ತಪಡಿಸಿದ್ದಾರೆ.

D.k Shivakumar And Siddaramaiah latest news
Image Credit: ndtv

“ಕೆಲವರು ನನಗೆ ಸಿದ್ದರಾಮಯ್ಯರ ನಡುವೆ ವ್ಯತ್ಯಾಸ ಇದೆ ಎಂದು ಹೇಳುತ್ತಾರೆ. ಆದರೆ ನಮ್ಮಿಬ್ಬರ ನಡುವೆ ವ್ಯತ್ಯಾಸ ಇಲ್ಲ. ಹಲವು ಬಾರಿ ಪಕ್ಷದ ವಿಚಾರದಲ್ಲಿ ನಾನು ಸೋತಿದ್ದೇನೆ. ಆರಂಭದಲ್ಲಿ ನನ್ನನ್ನು ಮಂತ್ರಿ ಮಾಡದೇ ಇದ್ದಾಗ ನಾನು ತಾಳ್ಮೆಯಿಂದ ಇರಲಿಲ್ಲವಾ”.

Join Nadunudi News WhatsApp Group

ಸಿದ್ದರಾಮಯ್ಯರಿಗೆ ನಾನು ಸಹಕಾರ ಕೊಟ್ಟಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಅವರು ತಮಗೆ ಅವಕಾಶ ಕಲ್ಪಿಸಿಕೊಡುವಂತೆ ಹೇಳಿದರು.

Join Nadunudi News WhatsApp Group