D.K Shivakumar: ಜೂನ್ 1 ರಿಂದ ಯಾರು ಕೂಡ ವಿದ್ಯುತ್ ಬಿಲ್ ಕಟ್ಟುವಂತಿಲ್ಲ, ಡಿ ಕೆ ಶಿವಕುಮಾರ್ ಸ್ಪಷ್ಟನೆ.

ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಹಲವು ರೀತಿಯ ಸೌಲಭ್ಯಗಳನ್ನು ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹೇಳಿದ್ದಾರೆ.

D.K Shivakumar Offer: ರಾಜ್ಯ ವಿಧಾನಸಭಾ ಚುನಾವಣೆ (Assembly Election) ಹತ್ತಿರವಾಗುತ್ತಿದೆ. ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಮುಖಂಡರು ತಮ್ಮ ತಮ್ಮ ರಾಜಕೀಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆ ರಾಜಕೀಯ ಮುಖಂಡರು ಮತಭೇಟೆಯಲ್ಲಿ ಬ್ಯುಸಿ ಆಗಿದ್ದಾರೆ.

D.K Shivakumar Offer
Image Credit: indiatoday

ಕಾಂಗ್ರೆಸ್ ಪ್ರಚಾರ ಕಾರ್ಯದಲ್ಲಿ ಡಿ. ಕೆ ಶಿವಕುಮಾರ್
ವಿವಿಧ ರೀತಿಯ ಯೋಜನೆಗಳನ್ನು ಜಾರಿಗೊಳಿಸುವುದಾಗಿ ರಾಜಕೀಯ ಮುಖಂಡರು ಭರವಸೆ ನೀಡಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಜನತೆಗೆ ಭರವಸೆಗಳನ್ನು ನೀಡಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ (D.K Shivakumar) ಅವರು ಜನತೆಗೆ ವಿವಿಧ ರೀತಿಯ ಭರವಸೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯೋಣ.

ಜೂನ್ 1 ರಿಂದ ಯಾರು ಕೂಡ ವಿದ್ಯುತ್ ಬಿಲ್ ಕಟ್ಟುವಂತಿಲ್ಲ
ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಹಲವು ರೀತಿಯ ಸೌಲಭ್ಯಗಳನ್ನು ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ಉಚಿತವಾಗಿ ಅಕ್ಕಿ, ಹಾಲು ಉತ್ಪಾದಕರಿಗೆ ಪ್ರೋತ್ಸಹ ಧನ, ಉಳುವವನಿಗೆ ಭೂಮಿ, ಮನೆ ನಿರ್ಮಾಣ ಇವೆಲ್ಲವನ್ನೂ ಕಾಂಗ್ರೆಸ್ ಸರ್ಕಾರ ಮಾಡಿಕೊಟ್ಟಿದೆ. ಮುಂದೆ ನಮ್ಮ ಸರ್ಕಾರ ಬಂದರೆ, 5 ಕೆಜಿ ಬದಲು 10 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತೇವೆ. ನೀವು ಯಾರೊಬ್ಬರೂ ಕೂಡ ಜೂನ್ 1 ರಿಂದ ವಿದ್ಯುತ್ ಬಿಲ್ ಕಟ್ಟುವಂತಿಲ್ಲ ಎಂದಿದ್ದಾರೆ.

D.K Shivakumar in election peomotion
Image Credit: hmtvlive

ಕಾಂಗ್ರೆಸ್ ಸರ್ಕಾರದ ವಿವಿಧ ಯೋಜನೆಗಳು
ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್, ಗ್ರಹಾಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಮನೆ ಒಡತಿಗೆ 2000 ಪ್ರೋತ್ಸಹ ಧನ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರ ಯುವಕರಿಗೆ ಪ್ರತಿ ತಿಂಗಳು 3000 ಹಾಗೂ ಡಿಪ್ಲೊಮೊ ಪದವೀಧರರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು ಹಾಗೆಯೆ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಜನತೆಗೆ ಭರವಸೆ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group