Gruha Lakshmi: ರಾಜ್ಯದ ಗೃಹಿಣಿಯರಿಗೆ ಬಿಗ್ ಅಪ್ಡೇಟ್, ಈ ದಿನದಂದು ಜಮಾ ಆಗಲಿದೆ 2000.
ಮನೆ ಯಜಮಾನಿ ಖಾತೆಗೆ 2000 ಯಾವಾಗ ಜಮಾ ಆಗಲಿದೆ ಎನ್ನುವ ಬಗ್ಗೆ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
Gruha Lakshmi Latest Update: ಮಾಸಿಕ 2000 ಹಣ ಪಡೆಯಲು ರಾಜ್ಯದ ಗೃಹಣಿಯರು ಕಾಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ (Gruha Lakshmi) ಯೋಜನೆ ರಾಜ್ಯ್ದ ಬಾರಿ ಸದ್ದು ಮಾಡುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಇವರಿಗೆ 1.5 ಕೋಟಿ ಗೃಹಿಣಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಇನ್ನು ಕೂಡ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆಗೆ ಸಹಾಯವಾಗಲು ಸರ್ಕಾರ ವಿವಿಧ ಸೌಲಭ್ಯವನ್ನು ನೀಡಿದೆ. ಇತ್ತೀಚೆಗಷ್ಟೇ ವಾಟ್ಸಾಪ್ ನ ಮೂಲಕ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ರಾಜ್ಯದ ಗೃಹಿಣಿಯರಿಗೆ ಬಿಗ್ ಅಪ್ಡೇಟ್
ಅರ್ಹ ಫಲಾನುಭವಿಗಳು ಸರ್ಕಾರದ ಸೌಲಭ್ಯವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಯೋಜನೆಯ ಅರ್ಜಿ ಸಲ್ಲಿಕೆಗೆ ಸರ್ಕಾರ ಯಾವುದೇ ಶುಲ್ಕವನ್ನು ವಿಧಿಸಿಲ್ಲ. ಉಚಿತವಾಗಿ ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಕೇಂದ್ರಗಳಲ್ಲಿ ಗೃಹ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದೀಗ ಗೃಹ ಲಕ್ಷ್ಮಿ ಯೋಜನೆಯ ಲಾಭ ಯಾವಾಗ ಸಿಗಲಿದೆ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ. ಗೃಹಿಣಿಯರ ಖಾತೆಗೆ 2000 ಯಾವಾಗ ಜಮಾ ಆಗಲಿದೆ ಎನ್ನುವ ಬಗ್ಗೆ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಈ ದಿನದಂದು ಜಮಾ ಆಗಲಿದೆ 2000
ಗೃಹ ಲಕ್ಷ್ಮಿ ಯೋಜನೆ ಲಭ್ಯವಾಗುವ ಬಗ್ಗೆ ಡಿ. ಕೆ ಶಿವಕುಮಾರ್ ಅವರು ಘೋಷಣೆ ಹೊರಡಿಸಿದ್ದಾರೆ. ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಯೋಜನೆಗೆ ಚಾಲನೆ ಸಿಗಲಿದೆ.
ಎಲ್ಲಾ ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆಯಲ್ಲಿ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪಂಚಾಯತಿಗೊಬ್ಬರು ನೋಡಲ್ ಆಫೀಸರ್ ಅನ್ನು ನೇಮಕ ಮಾಡಿದ್ದು, ಪಕ್ಷಾತೀತವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರು ಭಾಗವಹಿಸಬೇಕು ಎಂದು ಡಿ. ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.
ಗೃಹ ಲಕ್ಷ್ಮಿ ಯೋಜನೆಗಾಗಿ ಪಿಂಕ್ ಸ್ಮಾರ್ಟ್ ಕಾರ್ಡ್
ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಪಿಂಕ್ ಸ್ಮಾರ್ಟ್ ಕಾರ್ಡ್ ನೀಡುವುದಾಗಿ ಡಿ. ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಈ ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ ಫಲಾನುಭವಿಯರ ವಿವರದ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಸಚಿವರ ಭಾವಚಿತ್ರ ಇರಲಿದೆ. ಹಾಗೆಯೆ 2000 ಎಂದು ಸ್ಮಾರ್ಟ್ ಕಾರ್ಡ್ ನಲ್ಲಿ ನಮೂದಿಸಲಾಗುತ್ತದೆ.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
ಇನ್ನು ಅರ್ಜಿದಾರರು ತಮ್ಮ ಆಧಾರ್ ಕಾರ್ಡ್ ನ ಜೊತೆಗೆ ತಮ್ಮ ಪಡಿತರ ಚೀಟಿ (ಬಿಪಿಎಲ್ ಅಥವಾ ಅಂತ್ಯೋದಯ ಕಾರ್ಡ್) ಅನ್ನು ಒದಗಿಸಬೇಕಾಗುತ್ತದೆ. ಇನ್ನು ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಆಗದಿದ್ದರೆ ಬ್ಯಾಂಕ್ ಪಾಸ್ ಬುಕ್ ಮಾಹಿತಿಯನ್ನು ನೀಡಬೇಕಾಗುತ್ತದೆ.