Dasara Holidays Update: ದಸರಾ ರಜೆಯಲ್ಲಿರುವ ಮಕ್ಕಳಿಗೆ ಇನ್ನೊಂದು ಗುಡ್ ನ್ಯೂಸ್, ಸರ್ಕಾರದ ಘೋಷಣೆ ಮಾತ್ರ ಭಾಕಿ.
ಇದೀಗ ಈ ದಸರಾ ರಜೆಯನ್ನು ವಿಸ್ತರಣೆ ಮಾಡುವಂತೆ ಮನವಿಗಳು ಬಂದಿದೆ.
Dasara School Holiday Extend: ಪ್ರಸ್ತುತ ಶಾಲಾ ಮಕ್ಕಳಿಗೆ 2023 -24 ನೇ ಸಾಲಿನ ಶೈಕ್ಷಣಿಕ ವರ್ಷ ಈಗಾಗಲೇ ಪ್ರಾರಂಭಗೊಂಡಿದೆ. ಶಾಲೆಗಳು ಪ್ರಾರಂಭಗೊಳ್ಳುವ ಮುನ್ನ ಶಿಕ್ಷಣ ಇಲಾಖೆ ಸಾಕಷ್ಟು ನಿಯಮವನ್ನು ಜಾರಿಗೊಳಿಸಿದೆ.
ಹಿಂದಿನ ಶಿಕ್ಷಣ ನೀತಿಗಿಂತ ಈ ಬಾರಿ ಶಿಕ್ಷಣ ನೀತಿಯಲ್ಲಿ ಬಾರಿ ಬದಲಾವಣೆಯನ್ನು ತಂದಿದೆ. ಈ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ಅಕ್ಟೋಬರ್ 8 ರಿಂದ ಅಕ್ಟೋಬರ್ 24 ರವರೆಗೆ ನೀಡಲಾಗಿದೆ. ಇನ್ನೇನು ಒಂದು ದಿನದಲ್ಲಿ ಶಾಲೆ ಮತ್ತೆ ಆರಂಭವಾಗಲಿದೆ. ಇದೀಗ ಈ ದಸರಾ ರಜೆಯನ್ನು ವಿಸ್ತರಣೆ ಮಾಡುವಂತೆ ಮನವಿಗಳು ಬಂದಿದೆ.
ದಸರಾ ರಜೆಯನ್ನು ವಿಸ್ತರಣೆ ಮಾಡುವಂತೆ ಬಸವರಾಜ ಹೊರಟ್ಟಿ ಮನವಿ
ರವಿವಾರ ಕರ್ನಾಟಕ ಸರ್ಕಾರ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ದಸರಾ ರಜೆರ್ಯನ್ನು ವಿಸ್ತರಣೆ ಮಾಡಬೇಕೆಂದು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಮನವಿ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಕ್ಕಳ ಹಿತ ದ್ರಷ್ಟಿಯಿಂದ ದಸರಾ ರಜೆಯನ್ನು ವಿಸ್ತರಣೆ ಮಾಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಫೋನ್ ಮೂಲಕ ಮನವಿ ಮಾಡಿದ್ದಾರೆ.
ಶಿಕ್ಷಣ ವ್ಯವಸ್ಥೆ ಇಂದು ಸರಿಯಾದ ರೀತಿಯಲ್ಲಿಲ್ಲ
ಮಾಧ್ಯಮದವರೊಂದಿಗೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ ಅವರು “ಶಿಕ್ಷಣ ವ್ಯವಸ್ಥೆ ಇಂದು ಸರಿಯಾದ ರೀತಿಯಲ್ಲಿಲ್ಲ. ಹಿಂದೆಲ್ಲ ಮೇ 29 ಅಥವಾ 30 ರಂದು ಶಾಲೆಗಳು ಪ್ರಾರಂಭವಾಗುತ್ತಿದ್ದವು, ಅಕ್ಟೋಬರ್ 2 ನೇ ತಾರೀಕಿನಿಂದ 30 ನೇ ತಾರೀಕಿನ ವರೆಗೆ ದಸರಾ ರಜೆ ಇರುತ್ತಿತ್ತು. ನಂತರ ಜ್ಞಾನವಿಲ್ಲದ ಕೆಲವು ಅಧಿಕಾರಿಗಳು ತಮಗೆ ಹೇಗೆ ಬೇಕೋ ಹಾಗೆ ದಸರಾಗೆ 4 ದಿನ, ದೀಪಾವಳಿಗೆ 4 ದಿನ ರಜೆ ಕೊಟ್ಟಿದ್ದಾರೆ.
ಇದು ಸರಿಯಾದ ವ್ಯವಸ್ಥೆಯಲ್ಲ. ಈ ಪದ್ದತಿಯನ್ನು ಕೆಲವು ಅಧಿಕಾರಿಗಳು ಹಾಳು ಮಾಡಿದ್ದಾರೆ. ನಾನು ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿದ್ದೆನೇ, ಈ ಹಿಂದೆ ಇದಂತಹ ಪದ್ದತಿಯನ್ನು ಮುಂದುವರೆಸಿಕೊಂಡು ಹೋಗಬೇಕೆಂದು ಮತ್ತೊಂದು ಪತ್ರ ಬರೆಯುತ್ತೇನೆ” ಎಂದು ಹೇಳಿದ್ದಾರೆ.