Anchor Deepika Padukone: ನಟನೆಯ ಜೊತೆಗೆ ನಿರೂಪಣೆ ಮಾಡಲು ಮುಂದಾದ ದೀಪಿಕಾ ಪಡುಕೋಣೆ, ಆಸ್ಕರ್ ನಿರೂಪಣೆಯಲ್ಲಿ ದೀಪಿಕಾ.

Actress Deepika Padukone Became Anchor In Oscar Stage: ಬಾಲಿವುಡ್ (Bollywood) ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ತಮ್ಮ ನಟನೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ನಟಿ ದೀಪಿಕಾ ಪಡುಕೋಣೆ ನಟಿಸಿರುವ ಪಠಾಣ್ (Pathaan) ಸಿನಿಮಾ ಇತ್ತೀಚಿಗೆ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು.

Actress Deepika Padukone will be presenting at the prestigious Oscars
Image Credit: instagram

ದೇಶಾದ್ಯಂತ ಭಾರಿ ಯಶಸ್ಸನ್ನು ಕಂಡ ಪಠಾಣ್ ಸಿನಿಮಾದ ಯಶಸ್ಸನ್ನು ನಟಿ ದೀಪಿಕಾ ಪಡುಕೋಣೆ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆಸ್ಕರ್ ವೇದಿಕೆಯಲ್ಲಿ ನಿರೂಪಣೆ ಮಾಡಲಿದ್ದಾರೆ. ಈ ರೀತಿಯಾಗಿ ನಟಿ ದೀಪಿಕಾ ಪಡುಕೋಣೆ ಸುದ್ದಿಯಲ್ಲಿದ್ದಾರೆ ಎನ್ನಬಹುದು.

Along with acting, Deepika Padukone, who has come forward to narrate, is Deepika at the Oscars.
Image Credit: instagram

ಆಸ್ಕರ್ ವೇಧಿಕೆಯಲ್ಲಿ ನಿರೂಪಣೆ ಮಾಡಲಿರುವ ನಟಿ ದೀಪಿಕಾ ಪಡುಕೋಣೆ
ವಿಶ್ವದ ಪ್ರತಿಷ್ಠಿತ ಪ್ರಶಸ್ತಿ ಆಸ್ಕರ್ ಗೆ ದಿನಗಣನೆ ಶುರುವಾಗಿದೆ. ಹಲವಾರು ಕಾರಣಗಳಿಂದಾಗಿ ಈ ಬಾರಿ ಆಸ್ಕರ್ ವೇದಿಕೆ ಕಲರ್ ಫುಲ್ ಆಗಿರುತ್ತದೆ.

ಭಾರತದ ಹೆಸರಾಂತ ನಟರಾದ ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ನಾಟು ನಾಟು ಹಾಡಿಗೆ ವೇದಿಕೆಯ ಮೇಲೆ ಹೆಜ್ಜೆ ಹಾಕುತ್ತಿದ್ದಾರೆ, ಈ ಬಾರಿಯ ಆಸ್ಕರ್ ಕಾರ್ಯಕ್ರಮದ ನಿರೂಪಣೆಯನ್ನು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನೆರವೇರಿಸಿ ಕೊಡಲಿದ್ದಾರೆ.

Actress Deepika Padukone will be presenting at the Oscars
Image Credit: instagram

ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ
ಪ್ರತಿ ವರ್ಷವೂ ಸಹ ನಟಿ ದೀಪಿಕಾ ಪಡುಕೋಣೆ ಒಂದಲ್ಲ ಒಂದು ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ.

Join Nadunudi News WhatsApp Group

ಈ ಮಾಹಿತಿಯನ್ನು ಸ್ವತಃ ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ದಿನಕ್ಕಾಗಿ ಕಾಯುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ. ಇದೇ ಮಾರ್ಚ್ 12ರಂದು ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಹತ್ತು ಜನ ನಿರೂಪಕರು ಕೆಲಸ ಮಾಡಲಿದ್ದಾರೆ. ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು.

Join Nadunudi News WhatsApp Group