Laptop For Students: ಈ ದಾಖಲೆ ಇಲ್ಲದಿರುವ ವಿದ್ಯಾರ್ಥಿಗಳಿಗೆ ಸಿಗಲ್ಲ ಉಚಿತ ಲ್ಯಾಪ್ ಟಾಪ್, ಸರ್ಕಾರದ ಇನ್ನೊಂದು ಆದೇಶ.

ಉಚಿತ ಲ್ಯಾಪ್ ಟಾಪ್ ಪಡೆಯಲು ಯಾವ ದಾಖಲೆ ಅಗತ್ಯ.

Free Laptop For PUC Students: ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಉತ್ತೇಜನ ನೀಡುತ್ತಿದೆ. ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಈಗಾಗಲೇ ರಾಜ್ಯ ಸರ್ಕಾರ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ಇನ್ನು ರಾಜ್ಯದ ಬಡ ಜನರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ರಾಜ್ಯ ಸರ್ಕಾರ ಹಲವು ಯೋಜನೆಯನ್ನು ರೂಪಿಸುತ್ತಿದೆ. ಇನ್ನು ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಸೌಲಭ್ಯವನ್ನು ಕೂಡ ಒದಗಿಸುತ್ತಿದೆ.

ಇದೀಗ ರಾಜ್ಯ ಸರ್ಕಾರ ರಾಜ್ಯದ ಶಾಲಾ ಕಾಲೇಜು ಮಕ್ಕಳಿಗೆ ಸಿಹಿ ಸುದ್ದಿ ನೀಡಿದೆ. ಕೆಲ ವರ್ಗದ ಮಕ್ಕಳಿಗೆ ಸರ್ಕಾರ ಹೊಸ ಸೌಲಭ್ಯವನ್ನು ನೀಡುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲು ಮುಂದಾಗಿದೆ. ರಾಜ್ಯ ಸಾರ್ಕಾರದ ಹೊಸ ಸೌಲಭ್ಯದ ಬಗ್ಗೆ ಮಾಹಿತಿ ತಿಳಿದುಕೊಂಡು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರ ಸೌಲಭ್ಯದ ಲಾಭ ಪಡೆದುಕೊಳ್ಳಬಹುದಾಗಿದೆ.

See what documents are required to get a free laptop
Image Credit: edexlive

PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು ಕಾಂಗ್ರೆಸ್ ಸರ್ಕಾರ (Congress Government) ನಿರ್ಧರಿಸಿದೆ. ಈ ವರ್ಗದ ವಿದ್ಯಾರ್ಥಿಗಳು ಕೂಡ ಉಚಿತ ಲ್ಯಾಪ್ ಟಾಪ್ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಹೊರಡಿಸಿದೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಬಗ್ಗೆ ಕಾರ್ಮಿಕ ಇಲಾಖೆ (Department Of Labor) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಅನ್ನು ನೀಡಲಾಗುತ್ತದೆ. ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

The government has informed about the documents required to get a free laptop.
Image Credit: biharivoice

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ
ಅರ್ಜಿ ನಮೂನೆಯನ್ನು ಆಯಾ ಜಿಲ್ಲಾ, ತಾಲೂಕು ಕಾರ್ಮಿಕ ಅಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ. ಇನ್ನೂ ಸೆಪ್ಟೆಂಬರ್ 16 ಉಚಿತ ಲ್ಯಾಪ್ ಟಾಪ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ನಿಗದಿ ಮಾಡಿದೆ. ನಿಗದಿತ ಸಮಯದೊಳಗೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಸರ್ಕಾರದ ಉಚಿತ ಲಾಪ್ ಟಾಪ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

Join Nadunudi News WhatsApp Group

ಅರ್ಜಿ ಸಲ್ಲಿಕೆಗೆ ಈ ದಾಖಲೆ ಅಗತ್ಯ
*ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ

*ಮಕ್ಕಳ ಆಧಾರ್ ಕಾರ್ಡ್

*ವ್ಯಾಸಂಗ ದೃಢೀಕರಣ ಪತ್ರ

*ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ

*ಈ ಎಲ್ಲಾ ದಾಖಲೆಗಳ ಜೊತೆಗೆ ಈ ಹಿಂದೆ ಉಚಿತ ಲ್ಯಾಪ್ ಟಾಪ್ ಪಡೆದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರವನ್ನು ಇಲಾಖಾ ಕಚೇರಿಗೆ ಸಲ್ಲಿಸಿ ಉಚಿತ ಲಾಪ್ ಟಾಪ್ ಅನ್ನು ಪಡೆಯಬಹುದು.

Join Nadunudi News WhatsApp Group