New Ration Card Apply: ಹೊಸ ರೇಷನ್ ಕಾರ್ಡ್ ಪಡೆಯಲು ಈ ದಾಖಲೆಗಳು ಕಡ್ಡಾಯ, ಅರ್ಜಿ ಸಲ್ಲಿಸುವ ಮುನ್ನ ದಾಖಲೆ ನೋಡಿಕೊಳ್ಳಿ.

ಹೊಸ ರೇಷನ್ ಕಾರ್ಡ್ ಪಡೆಯಲು ಯಾವ ಯಾವ ದಾಖಲೆಗಳು ಅಗತ್ಯ...? ಸರ್ಕಾರದ ಆದೇಶ

Document Required For New Ration Card Apply: ರಾಜ್ಯ ಸರ್ಕಾರ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹಾಗೂ ಹೊಸ ರೇಷನ್ ಕಾರ್ಡ್ ವಿತರಣೆಯ ಬಗ್ಗೆ ಆಗಾಗ ಅಪ್ಡೇಟ್ ನೀಡುತ್ತಾ ಇರುತ್ತದೆ. ಇನ್ನು ಮಾರ್ಚ್ 31 ರೊಳಗೆ ಎಲ್ಲ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1 ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ.

ಸದ್ಯ ಇದೀಗ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದು, ಈ ದಿನಾಂಕದಿಂದ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದೀಗ ನಾವು ಈ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಪಡೆಯಲು ಯಾವ ಯಾವ ದಾಖಲೆಗಳು ಅಗತ್ಯ…? ಅರ್ಜಿ ಸಲ್ಲಿಸುವ ವಿಧಾನ ಹೇಗೆ…? ಅರ್ಜಿ ಸಲ್ಲಿಸಲು ಯಾರು ಅರ್ಹರು…? ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

Document Required For New Ration Card Apply
Image Credit: Business League

ಹೊಸ ರೇಷನ್ ಕಾರ್ಡ್ ಪಡೆಯಲು ಈ ದಾಖಲೆಗಳು ಕಡ್ಡಾಯ
ಹೊಸ ಪಡಿತರ ಚೀಟಿಗಾಗಿ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ/ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೊಸ ಪಡಿತರ ಚೀಟಿ ವಿಲೇವಾರಿ ಪ್ರಗತಿಯಲ್ಲಿದೆ. ಅವುಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡಲಿದ್ದು, ಏಪ್ರಿಲ್ 1 ರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಆಹಾರ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಇನ್ನು ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ನೀಡುವ ಅಗತ್ಯವಿದೆ. ಈ ದಾಖಲೆಗಳು ಇಲ್ಲವಾದರೆ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

New Ration Card Apply
Image Credit: The Hindu Business Line

ಅರ್ಜಿ ಸಲ್ಲಿಸುವ ಮುನ್ನ ದಾಖಲೆ ನೋಡಿಕೊಳ್ಳಿ
*ಮತದಾರರ ಗುರುತಿನ ಚೀಟಿ

Join Nadunudi News WhatsApp Group

*ಆಧಾರ್ ಕಾರ್ಡ್

*ವಯಸ್ಸಿನ ಪ್ರಮಾಣಪತ್ರ

*ಚಾಲನಾ ಪರವಾನಿಗೆ

*ಸ್ವಯಂ ಘೋಷಿತ ಪ್ರಮಾಣಪತ್ರ

*ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರ

*ಮೊಬೈಲ್ ನಂ.

*ಮನೆಯ ಸದಸ್ಯರ ಬಗ್ಗೆ ಮಾಹಿತಿ

Ration Card New Updates
Image Credit: Bharat Mediax

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ನಿಯಮಗಳು ಹೀಗಿವೆ
ಕರ್ನಾಟಕದ ಖಾಯಂ ನಿವಾಸಿ ಆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸುವಂತಿಲ್ಲ. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. ನೀವು https://ahara.kar.nic.in ನ ಅಧಿಕೃತ Website ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group