Free Sewing Machine: ಕೇಂದ್ರದಿಂದ ಉಚಿತ ಹೊಲಿಗೆ ಯಂತ್ರ ಯೋಜನೆ, ಬಡ ಮಹಿಳೆಯರು ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.

ಉಚಿತ ಹೊಲಿಗೆ ಯಂತ್ರ ಪಡೆಯಲು ಇರಬೇಕಾದ ಅರ್ಹತೆ.

Documents For PM Free Sewing Machine Scheme: ದೇಶದ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ನಡೆಸುತ್ತಿದೆ. ಅದರಲ್ಲಿ ಪ್ರಧಾನ ಮಂತ್ರಿ Free Sewing Machine ಯೋಜನೆ ಸಹ ಒಂದು. ಈ ಯೋಜನೆಯಡಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರ ಪ್ರತಿ ರಾಜ್ಯದ 50 ಸಾವಿರ ಮಹಿಳೆಯರಿಗಾಗಿ ಈ ಯೋಜನೆಯನ್ನು ಹೊರ ತಂದಿದೆ.

ಅರ್ಜಿ ಸಲ್ಲಿಸುವ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಸಿಗಲಿದೆ. ದೇಶದ ಮಹಿಳೆಯರು ಪ್ರಧಾನ ಮಂತ್ರಿ ಅವರ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದು. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಅರ್ಜಿದಾರರ ಅರ್ಹತೆಗಳೇನು? ಎನ್ನುವ ಬಗ್ಗೆ ವಿವರ ಇಲ್ಲಿದೆ.

PM Free Sewing Machine Scheme
Image Credit: Zeebiz

ಉಚಿತ ಹೊಲಿಗೆ ಯಂತ್ರ ಪಡೆಯಲು ಇರಬೇಕಾದ ಅರ್ಹತೆಗಳೇನು..?
*ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಮಹಿಳೆಯರ ವಯಸ್ಸು ಕನಿಷ್ಠ 20 ಮತ್ತು ಗರಿಷ್ಠ 40 ವರ್ಷ ವಯಸ್ಸಾಗಿರಬೇಕು.

* ಅರ್ಜಿದಾರರು ಭಾರತ ದೇಶದ ಪ್ರಜೆಯಾಗಿದ್ದು ಆರ್ಥಿಕ ದುರ್ಬಲರಾಗಿರಬೇಕು.

* ಮಹಿಳೆಯ ಕುಟುಂಬದ ವಾರ್ಷಿಕ ಆದಾಯವು 1,20,000 ರೂಪಾಯಿ ಮೀರಿರಬಾರದು.

Join Nadunudi News WhatsApp Group

*ಇನ್ನು ವಿಧವೆ ಮಹಿಳೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು..?
*ಪಾಸ್ ಪೋರ್ಟ್ ಸೈಸ್ ಫೋಟೋ.

*ಜಾತಿ ಪ್ರಮಾಣ ಪತ್ರ.

Documents For PM Free Sewing Machine Scheme
Image Credit: Govinfo

*ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ.

*ರೇಷನ್ ಕಾರ್ಡ್ ಅಥವಾ ವೋಟರ್ ಐಡಿ.

*ಮರಗೆಲಸ, ಗಾರೆಕೆಲಸ, ಕ್ಷೌರಿಕ, ದೋಬಿ ಕಸುಬಿನ ಕುಶಲಕರ್ಮಿಯಾಗಿದ್ದರೆ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರಿಂದ ದೃಡೀಕರಣ ಪತ್ರ ಅಥವಾ ಕಾರ್ಮಿಕ ಇಲಾಖೆಯಿಂದ ವಿತರಿಸಿದ ಕುಶಲಕರ್ಮಿ ಗುರುತಿನ ಚೀಟಿಯ ಪ್ರತಿ ಅಗತ್ಯವಾಗಿದೆ.

ಅರ್ಜಿ ಸಲ್ಲಿಸುವ ವಿಧಾನ ತಿಳಿಯಿರಿ
* ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://pmmodiyojana.in/free-silai-machine-yojana/ ಗೆ ಭೇಟಿ ನೀಡಬೇಕು.

Free Sewing Machine Scheme
Image Credit: Amarujala

* ವೆಬ್ ಸೈಟ್ ನ ಮುಖಪುಟದಲ್ಲಿ ಹೊಲಿಗೆ ಯಂತ್ರದ ಉಚಿತ ಪೂರೈಕೆಗಾಗಿ ಅರ್ಜಿ ಸಲ್ಲಿಸಲು ನೀವು ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

* ನಂತರ ಅರ್ಜಿಯಲ್ಲಿ ಕೇಳಿದ ದಾಖಲೆಗಳನ್ನು ಭರ್ತಿಮಾಡಿ ಸಬ್ಮಿಟ್ ಮಾಡಿದರೆ ನಿಮ್ಮ ಅರ್ಜಿ ಪೂರ್ಣಗೊಳ್ಳುತ್ತದೆ.

Join Nadunudi News WhatsApp Group