Drone Pratap: ಡ್ರೋನ್ ಪ್ರತಾಪ್ ವಿರುದ್ಧ ದಾಖಲಾಯಿತು ಇನ್ನೊಂದು ಕೇಸ್, ಸಂಕಷ್ಟದಲ್ಲಿ ಡ್ರೋನ್ ಪ್ರತಾಪ್

ಬಿಗ್ ಮನೆಯಲ್ಲಿ ಡ್ರೋನ್ ಪ್ರತಾಪ್ ನೀಡಿದ ಹೇಳಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ, ಪ್ರತಾಪ್ ಮೇಲೆ ಬಿತ್ತು ಕೇಸ್

Drone Prathap Against Case: ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ (Drone Prathap) ಆಗಾಗ ಸುದ್ದಿಯಲ್ಲಿರುತ್ತಾರೆ, ಹಾಗೆಯೆ ಕೋವಿಡ್ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದು ಈಗ ಸಂಕಷ್ಟ ಎದುರಾಗಿದೆ.

ಬಿಬಿಎಂಪಿ ಅಧಿಕಾರಿ (BBMP Officer) ಪ್ರಯಾಗ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಡ್ರೋನ್‌ ಪ್ರತಾಪ್‌ ಬಿಗ್‌ಬಾಸ್‌ ಮನೆಯಲ್ಲಿ ಕೋವಿಡ್‌ ಸಂದರ್ಭದಲ್ಲಿ ತಾನು ಅನುಭವಿಸಿದ್ದ ಕ್ವಾರಂಟೈನ್‌ (Qurantine) ಬಗ್ಗೆ ಹೇಳಿಕೊಂಡಿದ್ದರು. ಈ ವೇಳೆ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

Drone Prathap Against Case
Image Credit: News 18

ಪ್ರತಾಪ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ

ಮಾಹಿತಿ ಪ್ರಕಾರ, ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರಕ್ಕೆ ವಾದ – ಪ್ರತಿವಾದ ನಡೆದಿದ್ದು, ಪ್ರತಾಪ್‌ಗೆ ನೋಟಿಸ್‌ ನೀಡಲಾಗಿದೆ. ಮಾನನಷ್ಟ ಮೊಕದ್ದಮೆಗೆ ಉತ್ತರಿಸಲು ಅವಕಾಶ ನೀಡಿದ್ದು, ಮುಂದಿನ ವಿಚಾರಣೆ ಕೋರ್ಟ್‌ನಲ್ಲಿ ಇತ್ಯರ್ಥವಾಗಲಿದೆ.

ಕ್ವಾರಂಟೈನ್ ಸಮಯದಲ್ಲಿ ಅಧಿಕಾರಿಯೊಬ್ಬರು ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು. ಮೆಂಟಲಿ ಅನ್‍ಸ್ಟೇಬಲ್ ಅಂತಾ ಸಹಿ ಮಾಡುವಂತೆ ತಲೆತಲೆಗೆ ಹೊಡೆದು ಕಿರುಕುಳ ಕೊಟ್ಟಿದ್ದರು. ಹೋಟೆಲ್‍ನಿಂದ ಕೆಳಗೆ ಬಂದ್ಮೇಲೆ ನನಗೆ ಏನೇನು ಮಾಡಿದ್ರೋ, ಇವ್ನು ಹೇಗಿದ್ರೂ ಸುಳ್ಳು ಹೇಳ್ತಾನೆ. ಇವ್ನು ಹೇಳೋದೇ ಸುಳ್ಳು.. ನಂಬಬೇಡಿ ಎಂದು ಮಾಧ್ಯಮಗಳಿಗೆ ಹೇಳಿ ಕಳುಹಿಸಿದರು. ಕ್ವಾರಂಟೈನ್‍ನಲ್ಲಿ ಮಾನಸಿಕ ಹಿಂಸೆ ಕೊಟ್ರು, ಹುಚ್ಚ ಅಂತಾ ಪೇಪರ್ ಗೆ ಸಹಿಹಾಕು ಅಂತಾ ಹೇಳಿದ್ರು ಎಂದು ಡ್ರೋನ್ ಪ್ರತಾಪ್ ಆರೋಪ ಮಾಡಿದ್ದರು.

Join Nadunudi News WhatsApp Group

Drone Prathap Latest News
Image Credit: News 18

ಪ್ರತಾಪ್ ಒಬ್ಬ ಸುಳ್ಳುಗಾರ ಎಂದ ನೋಡಲ್‌ ಅಧಿಕಾರಿ

ಪ್ರತಾಪ್ ಕ್ವಾರಂಟೈನ್ ರೂಲ್ಸ್ ಉಲ್ಲಂಘನೆ ವಿರುದ್ಧ ನಾನೇ ಕೇಸ್ ದಾಖಲಿಸಿದ್ದೆ. ಕಾನೂನು ಪ್ರಕಾರವೇ ನಾನು ಕಾರ್ಯನಿರ್ವಹಿಸಿದ್ದೆ. ಇಡೀ ಆತನ ಕ್ವಾರಂಟೈನ್ ಪ್ರಕ್ರಿಯೆಯಲ್ಲಿ ನಾನೇ ನೋಡಲ್ ಅಧಿಕಾರಿಯಾಗಿ ನಿಗಾ ವಹಿಸಿದ್ದೆ. ಆದರೆ ಈತ ಹೇಳುತ್ತಿರುವ ಮಾತುಗಳಲ್ಲಿ ಯಾವುದೇ ಹುರುಳಿಲ್ಲ.

ಆತನಿಗೆ ನಾನು ಯಾವುದೇ ಮಾನಸಿಕ ಹಿಂಸೆ ಕೊಟ್ಟಿಲ್ಲ. ಆತನ ತಲೆಯ ಮೇಲೆ ಹೊಡೆದಿಲ್ಲ. ಪ್ರತಾಪ್ ಮಹಾನ್ ಸುಳ್ಳುಗಾರ, ಈತ ಹೇಳುವ ಮಾತಿಗೆ ಒಂದೇ ಒಂದು ಸಾಕ್ಷ್ಯ ಒದಗಿಸಲಿ. ಆತನ ಆರೋಪ ನಿಜವಾಗಿದ್ದರೆ ನಾನು ರಾಜೀನಾಮೆ ಕೊಟ್ಟು ಹೊರಟು ಹೋಗುತ್ತೇನೆ ಎಂದು ಬಿಬಿಎಂಪಿ (BBMP) ನೋಡಲ್ ಅಧಿಕಾರಿ ಮರುದಿನವೇ ತಿಳಿಸಿದ್ದರು.

Join Nadunudi News WhatsApp Group