Electricity Update: ಉಚಿತ ಕರೆಂಟ್ ನಡುವೆ ಇನ್ನೊಂದು ಘೋಷಣೆ ಮಾಡಿದ ಸರ್ಕಾರ, ಸಂಕಷ್ಟದಲ್ಲಿ ಜನರು.

ರಾಜ್ಯದ ಗ್ರಾಮೀಣ ಭಾಗದಲ್ಲಿ ಲೋಡ್ ಶೆಡ್ಡಿಂಗ್ ಜಾರಿ.

Electricity Load Shedding: ಸದ್ಯ ರಾಜ್ಯದ ಜನತೆಗೆ ಕಾಂಗ್ರೆಸ್ ನ ಉಚಿತ ಗ್ಯಾರಂಟಿ ಭಾಗ್ಯಗಳ ಲಾಭವನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡುತ್ತಿದೆ.

ಸದ್ಯ ಉಚಿತ ಗ್ಯಾರಂಟಿ ಯೋಜನೆಗಳ ಖುಷಿಯಲ್ಲಿದ್ದ ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ ಸಮಸ್ಯೆ ಹೆಚ್ಚುತ್ತಿದೆ. ಈ ಕಾರಣಕ್ಕೆ ರಾಜ್ಯದ ಗ್ರಾಮೀಣ ಜನತೆಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.

Electricity Update
Image Credit: Citizen

ರಾಜ್ಯದ ಗ್ರಾಮೀಣ ಜನತೆಗೆ ಬೇಸರದ ಸುದ್ದಿ
ಸದ್ಯ ರಾಜ್ಯದಲ್ಲಿ ಮಳೆಯ ಅಭಾವ ಜೋರಾಗಿದೆ. ಸರಿಯಾದ ಸಮಯದಲ್ಲಿ ಮಳೆ ಬರದೇ ಇರುವುದರಿಂದ ರೈತರು ತಮ್ಮ ಬೆಲೆಯನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕಡಿಮೆಯಾಗಿರುವ ಕಾರಣ ನಿರೀಕ್ಷೆಯಂತೆ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ಆದರೆ ಈ ಬಾರಿ ವಿದ್ಯುತ್ ಬಳಕೆ ಹೆಚ್ಚಾಗಿದೆ. ಕಳೆದ ಬಾರಿಗಿಂತ ಈ ಬಾರಿ ವಿದ್ಯುತ್ ಬಳಕೆ ಹೆಚ್ಚಾಗಿದೆ. ಸದ್ಯ ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವ ಹಿನ್ನಲೆ ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದೆ.

ರಾಜ್ಯದ ಗ್ರಾಮೀಣ ಭಾಗದಲ್ಲಿ ಲೋಡ್ ಶೆಡ್ಡಿಂಗ್ ಜಾರಿ (Electric Load Shedding) 
ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ವಿದ್ಯುತ್ ಬಳಕೆ ಪ್ರಮಾಣ ಶೇ. 20 ರಷ್ಟು ಹೆಚ್ಚಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ.

Electric Load Shedding
Image Credit: Twitter

ಈ ಮೂಲಕ ರಾಜ್ಯದ ಗ್ರಾಮಿಕ ಜನತೆಗೆ ಸರ್ಕಾರ ಶಾಕ್ ನೀಡಿದೆ. ಒಂದೆಡೆ ಮುಂಗಾರು ಮಳೆ ಬಾರದ ಕಾರಣ ರೈತರು ತಮ್ಮ ಬೆಳೆಯನ್ನು ಕಳೆದುಕೊಳ್ಳುವಂತಾಗಿದೆ. ಇದಲ್ಲದೆ ತೋಟಗಾರಿಕೆಯ ಬೆಳೆಯ ಉಳಿವಿಗಾಗಿ ವಿದ್ಯುತ್ ಅಗತ್ಯವಾಗಿದ್ದು, ವಿದ್ಯುತ್ ಉತ್ಪಾದನೆ ಕಡಿಮೆ ಇರುವ ಕಾರಣ ವಿದ್ಯುತ್ ಸಮಸ್ಯೆಯನ್ನು ಕೂಡ ಎದುರಿಸಬೇಕಾಗಿದೆ. ಈ ಎಲ್ಲ ಸಮಸ್ಯೆಯಿಂದ ರಾಜ್ಯದ ಗ್ರಾಮೀಣ ಭಾಗದ ರೈತರು ಚಿಂತಿಸುವಂತಾಗಿದೆ.

Join Nadunudi News WhatsApp Group

Join Nadunudi News WhatsApp Group