Ather 450X: ಕೇವಲ 3310 ರೂಪಾಯಿ ಪಾವತಿ ಮಾಡಿ ಮನೆಗೆ ತನ್ನಿ ಹೊಸ Ather 350X , ಬಂಪರ್ ಆಫರ್.

ಅಥರ್ ಕಂಪನಿಯು ತನ್ನ ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ.

Ather 450X Electric Scooter: ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ (Electric Scooter) ಗಳು ಲಗ್ಗೆ ಇಡುತ್ತಿವೆ. ಇತ್ತೀಚಿಗೆ ಕಚ್ಚಾ ತೈಲಗಳ ಬೆಲೆಯಲ್ಲಿ ಏರಿಕೆಯಾಗುತ್ತಿರುವ ಕಾರಣ ಜನರು ಎಲೆಕ್ಟ್ರಿಕ್ ವಾಹನಗಳ ಕಡೆ ವಾಲುತ್ತಿದ್ದಾರೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ದ್ವಿಚಕ್ರ ವಾಹನ ತಯಾರಕ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡುತ್ತಿವೆ.

ಇದೀಗ ಅಥರ್ ಕಂಪನಿಯು ತನ್ನ ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಅಥರ್ ಕಂಪನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಗ್ಗೆ ಮಾಹಿತಿ ತಿಳಿಯೋಣ.

Ather 450X Electric Scooter
Image Credit: 91mobiles

ಅಥರ್ 450X (Ather 450X) 
ಅಥರ್ ಕಂಪನಿಯು ತನ್ನ ಅಥರ್ 450X ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಇದು ವಿಶಿಷ್ಟ ವಿನ್ಯಾಸದೊಂದಿಗೆ ಶಕ್ತಿಯುತಾ ಬ್ಯಾಟರಿಯನ್ನು ಕೂಡ ಹೊಂದಿದೆ. ಅಥರ್ 450X ಎಲೆಕ್ಟ್ರಿಕ್ ಸ್ಕೂಟರ್ ನ ಆರಂಭಿಕ ಬೆಲೆ 98,080 ರೂ ಆಗಿದೆ. EMI ನ ಮೂಲಕ ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಖರೀದಿಸಬಹುದಾಗಿದೆ.

ಬ್ಯಾಂಕ್ ನಲ್ಲಿ ಸಾಲ ಪಡೆದು 18,000 ರೂ. ಡೌನ್ ಪೇಮೆಂಟ್ ನಲ್ಲಿ ಈ ವಾಹನವನ್ನು ಖರೀದಿಸಬಹುದು. ಪ್ರತಿ ತಿಂಗಳು ಬ್ಯಾಂಕ್ ಗೆ ರೂ. 3,310 EMI ಪಾವತಿಸುವ ಮೂಲಕ ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಖರೀದಿಸಬಹುದು.

ಅಥರ್ 450X ಬ್ಯಾಟರಿ ಸಾಮರ್ಥ್ಯ
ಅಥರ್ 450X ಎಲೆಕ್ಟ್ರಿಕ್ ಸ್ಕೂಟರ್ 3 .7 kWh ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ನೊಂದಿಗೆ 6400 ವ್ಯಾಟ್ ಗಳ ಶಕ್ತಿಯನ್ನು ಉತ್ಪಾದಿಸುವ ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ.

Join Nadunudi News WhatsApp Group

There is an offer announcement on electric scooter and the scooter can be purchased by making a down payment of 3310 rupees.
Image Credit: financialexpress

ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಒಮ್ಮೆ ಚಾರ್ಜ್ ಮಾಡಿದರೆ 146 ಕಿಲೋಮೀಟರ್ ಚಲಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ವೇಗದ ಚಾರ್ಜರ್ ಆಯ್ಕೆ ಲಭ್ಯವಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕೇವಲ 4 ಗಂಟೆಗಳಲ್ಲಿ ಶೇ. 80 ರಷ್ಟು ಚಾರ್ಜ್ ಮಾಡಿಕೊಳ್ಳಬಹುದು.

Join Nadunudi News WhatsApp Group