Electric Vehicles: ಸಿಎಂ ಸಿದ್ದು ಸರ್ಕಾರದಿಂದ ದೊಡ್ಡ ಸಿಹಿಸುದ್ದಿ, ಈ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ರಿಯಾಯಿತಿ ಘೋಷಣೆ

ಎಲೆಕ್ಟ್ರಿಕ್ ವಾಹನ ಹೊಂದಿದವರಿಗೆ ಇನ್ನು ಮುಂದೆ ತೆರಿಗೆ ರಿಯಾಯಿತಿ, ರಾಜ್ಯ ಸರಕಾರದಿಂದ ಗುಡ್ ನ್ಯೂಸ್

Electric Vehicles Tax Exemption In Karnataka: ಇತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ತಮ್ಮ ಬೇಡಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಎಲ್ಲಾ ಕಡೆ ಈಗ ಎಲೆಕ್ಟ್ರಿಕ್ ವಾಹನಗಳದ್ದೇ ಹವಾ ಎನ್ನಬಹುದು.

ಪೆಟ್ರೋಲ್ ಹಾಗು ಡಿಸೇಲ್ ಬೆಲೆ ಏರಿಕೆ ಜೊತೆಗೆ ಎಲೆಕ್ಟ್ರಿಕ್ ವಾಹನಗಳು ಕೂಡ ಹೊಸ ನವೀಕರಣದೊಂದಿಗೆ ಜನರನ್ನು ಆಕರ್ಷಿಸುತ್ತಿದ್ದು, ಹೆಚ್ಚಿನ ಜನರು ಈಗ ಎಲೆಕ್ಟ್ರಿಕ್ ವಾಹನಗಳನ್ನೇ ಖರೀದಿ ಮಾಡುತ್ತಿದ್ದಾರೆ. ಇಂಥವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯನ್ನು ನೀಡಿದೆ, ಎಲೆಕ್ಟ್ರಿಕ್ ವಾಹನ ಹೊಂದಿರುವವರಿಗೆ ಇನ್ನು ಮುಂದೆ ತೆರಿಗೆಯಲ್ಲಿ ಬಾರಿ ರಿಯಾಯಿತಿ ಸಿಗಲಿದೆ.

Electric Vehicles Tax
Image Credit: Business-standard

ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ರಿಯಾಯಿತಿ

ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವವರಿಗೆ ಅಥವಾ ಹೊಂದಿರುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಪರ್ ಕೊಡುಗೆ ನೀಡಲಿದ್ದಾರೆ. ಮುಖ್ಯಮಂತ್ರಿ ನೇತೃತ್ವದ ಆಡಳಿತಾರೂಢ ಕಾಂಗ್ರೆಸ್ ಎಲೆಕ್ಟ್ರಿಕ್ ವಾಹನ ಹೊಂದಿರುವವರಿಗೆ ಸರ್ಕಾರ ರೂ.1,000 ದಿಂದ ರೂ.40,000 ತೆರಿಗೆ ರಿಯಾಯಿತಿ ನೀಡುವುದಾಗಿ ಘೋಷಿಸಿದೆ.

ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನೂತನ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ರಿಯಾಯಿತಿ ನೀಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ (H.K.Patil), ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ (Electric Two-Wheelers) ರೂ.1,000 ದಿಂದ ರೂ.5,000 ವರೆಗೆ ತೆರಿಗೆ ರಿಯಾಯಿತಿ ಲಭ್ಯವಿದೆ ಎಂದು ಅವರು ಹೇಳಿದ್ದಾರೆ.

Join Nadunudi News WhatsApp Group

Electric Vehicles Tax Exemption
Image Credit: Oneindia

ರಾಜ್ಯದಲ್ಲಿ ಒಟ್ಟು 1 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ

ಮೋಟಾರು ಸಾರಿಗೆ (Motor Transport) ಮತ್ತು ಸಂಬಂಧಿತ ವಲಯಗಳ ಕಾರ್ಮಿಕರ ಕಲ್ಯಾಣಕ್ಕಾಗಿ ಸೆಸ್ ಸಂಗ್ರಹಿಸಲು ಸರ್ಕಾರಕ್ಕೆ ಅನುಮತಿ ನೀಡುವ ಸುಗ್ರೀವಾಜ್ಞೆಗೂ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಮೂಲಕ ಕಲ್ಯಾಣ ನಿಧಿಗೆ ವಾರ್ಷಿಕ ಸುಮಾರು ರೂ.300 ಕೋಟಿ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ.

ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಸೆಕ್ಷನ್ 3(ಎ) ಪ್ರಕಾರ, ಈ ಸೆಸ್ ವಿಧಿಸಲಾಗುತ್ತದೆ. ಡಿಸೆಂಬರ್ 13, 2023 ರಂದು ವಿವಿಧ ಮಾಧ್ಯಮಗಳು ಮಾಡಿದ್ದ ವರದಿ ಪ್ರಕಾರ, ಕರ್ನಾಟಕದಲ್ಲಿ (Karnataka) ನೂತನ ಎಲೆಕ್ಟ್ರಿಕ್ ವಾಹನಗಳ ನೋಂದಣಿ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪ್ರತಿದಿನ ಸರಾಸರಿ 422 ನೂತನ ವಾಹನಗಳು ರಸ್ತೆಗಿಳಿಯುತ್ತಿವೆ. ಕಳೆದ ವರ್ಷದ ಏಪ್ರಿಲ್ ನಿಂದ ನವೆಂಬರ್ ವರೆಗೆ ರಾಜ್ಯದಲ್ಲಿ ಒಟ್ಟು 1 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ.

Electric Vehicles Tax Exemption In Karnataka
Image Credit: Thesun

ಇಂತಹ ವಾಹನಗಳಿಗೆ ಈ ರೀತಿಯಾಗಿ ರಿಯಾಯಿತಿ ನೀಡಲಾಗುವುದು

ಎಲೆಕ್ಟ್ರಿಕ್ ವಾಹನ ಹೊಂದಿರುವವರಿಗೆ ರೂ.1 ಲಕ್ಷದವರೆಗಿನ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ರೂ.1,000, ರೂ.2 ಲಕ್ಷ ಮೌಲ್ಯದ ವಾಹನಗಳಿಗೆ ರೂ.2,000 ರಿಯಾಯಿತಿ ಹಾಗೂ ರೂ.4 – 5 ಲಕ್ಷ ಬೆಲೆ ವಾಹನಗಳಿಗೆ ರೂ.5,000 ತೆರಿಗೆ ರಿಯಾಯಿತಿ ದೊರೆಯುತ್ತದೆ. ಅದೇ ರೀತಿಯಲ್ಲಿ ಹಳೆಯ ನಾಲ್ಕು-ಚಕ್ರದ ವಾಹನಗಳನ್ನು ಗುಜರಿಗೆ ಹಾಕಿ, ನೂತನ ನಾಲ್ಕು-ಚಕ್ರದ ಎಲೆಕ್ಟ್ರಿಕ್ ವಾಹನಗಳನ್ನು (New Electric Four-Wheelers) ಕೊಂಡುಕೊಳ್ಳುವವರಿಗೂ ತೆರಿಗೆ ರಿಯಾಯಿತಿ ಸಿಗುತ್ತದೆ.

ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್ ನಾಲ್ಕು ಚಕ್ರದ ವಾಹನಗಳಿಗೆ 10,000, ರೂ.5 – 10 ಲಕ್ಷ ಮೌಲ್ಯದ ವಾಹನಗಳಿಗೆ ರೂ.20,000, ರೂ.10 – 15 ಲಕ್ಷ ಬೆಲೆಯ ವಾಹನಗಳಿಗೆ ರೂ.30,000, ರೂ.15 – 20 ಲಕ್ಷ ಬೆಲೆಬಾಳುವ ಎಲೆಕ್ಟ್ರಿಕ್ ವಾಹನಗಳಿಗೆ ರೂ.40,000 ಹಾಗೂ ರೂ.20 ಲಕ್ಷಕ್ಕಿಂತ ಹೆಚ್ಚಿನ ದರದ ವಾಹನಗಳಿಗೆ ರೂ.50,000 ತೆರಿಗೆ ರಿಯಾಯಿತಿ ಲಭ್ಯವಿದೆ ಎಂಬ ಮಾಹಿತಿ ನೀಡಲಾಗಿದೆ.

Join Nadunudi News WhatsApp Group